ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ...

ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ...

Shakti Smart Card: 

ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ...



ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಸರ್ಕಾರದ ಸೇವಾಸಿಂಧು ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಮೊಬೈಲ್‌ನಲ್ಲಿಯೇ ಶಕ್ತಿ ಸ್ಮಾರ್ಟ್ ಪಿಡಿಎಫ್ ಡೌನ್‌ಲೋಡ್ ಮಾಡಿಕೊಳ್ಳಬಹುದು... 

ಕಾಂಗ್ರೆಸ್​ ಸರ್ಕಾರ ಮಹತ್ವದ ಐದು ಉಚಿತ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಯು ಅಧಿಕೃತವಾಗಿ ಅನುಷ್ಠಾನಗೊಳ್ಳುವ ಮೂಲಕ ಜನ ಮೆಚ್ಚುಗೆಗೆ ಪಾತ್ರವಾಗಿದೆ. ಗ್ರಾಮೀಣ ಭಾಗದ ಬಹಳಷ್ಟು ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಮನಸಾರೆ ಮೆಚ್ಚಿದ್ದಾರೆ. ‘ಶಕ್ತಿ ಯೋಜನೆ’ಯಡಿ ರಾಜ್ಯದ ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಸರಕಾರ ‘ಸ್ಮಾರ್ಟ್ ಕಾರ್ಡ್’ ವಿತರಿಸಲಿದೆ.


ಸದ್ಯಕ್ಕೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ತಮ್ಮ ವಾಸಸ್ಥಳದ ದಾಖಲೆಯಾಗಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಗಿ ಪತ್ರ, ಭಾರತ ಸರ್ಕಾರ ಅಥವಾ ಕರ್ನಾಟಕ ಸರ್ಕಾರದ ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ ಹಾಗೂ ಕರ್ನಾಟಕ ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯದ ಗುರುತಿನ ಚೀಟಿ ತೋರಿಸಿ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. 

‘ಶಕ್ತಿ ಸ್ಮಾರ್ಟ್ ಕಾರ್ಡ್’ ಅರ್ಜಿ ಪ್ರಾರಂಭ

ಸ್ಮಾರ್ಟ್ಕಾರ್ಡ್ ಮಹಿಳೆಯರ ಕೈ ಸೇರುವ ವರೆಗೂ ಆದಾರ್ ಕಾರ್ಡ್, ಮತದಾರರ ಚೀಟಿಯಂತಹ ಗುರುತಿನ ಚೀಟಿ ತೋರಿಸಿ ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸಬಹುದು. ಈ ಹಿನ್ನೆಲೆ ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ನೀಡಲು ಸೂಚಿಸಲಾಗಿದೆ.


ಈ ವ್ಯವಸ್ಥೆ ಮೂರು ತಿಂಗಳ ವರೆಗೂ ಮಾತ್ರ ಮುಂದುವರೆಯಲಿದೆ. 3 ತಿಂಗಳ ನಂತರ ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಆದರೆ ಮಹಿಳೆಯರು ತಮ್ಮ ಆನ್‌ಲೈನ್ ‘ಶಕ್ತಿ ಸ್ಮಾರ್ಟ್ ಕಾರ್ಡ್’ನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಜೂನ್ 12 ರಿಂದಲೇ ಪಡೆಯಬಹುದು.

ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳುವುದು ಹೇಗೆ?

ಯಾವುದಾದರೂ ಹತ್ತಿರದ ಬೆಂಗಳೂರು ಒನ್, ಸೈಬರ್ ಸೆಂಟರ್​​​ಗೆ ಭೇಟಿ ನೀಡಿ, ಸೇವಾ ಸಿಂಧೂ ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶವಿದೆ. ಆಧಾರ್ ಕಾರ್ಡ್ ಅಥವಾ ಅಡ್ರೆಸ್ ಫ್ರೂಪ್ ನೀಡಿದರೆ ಸ್ಮಾರ್ಟ್ ಕಾರ್ಡ್ ಮಾಡಿಕೊಡಲಾಗುವುದು. ಸ್ಮಾರ್ಟ್ ಕಾರ್ಡಿಗೆ ಆಗುವ ಖರ್ಚನ್ನು ಸರ್ಕಾರವೇ ಭರಿಸಲಿದೆ. 


ಸರ್ಕಾರದ ಸೇವಾಸಿಂಧು ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಉಚಿತ ಬಸ್ ಪ್ರಯಾಣಕ್ಕೆ ನೋಂದಾಯಿಸಿಕೊಳ್ಳಬೇಕು. ಅದಾದ ಬಳಿಕ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ಗಳನ್ನು ಸರ್ಕಾರ ವಿತರಿಸಲಿದೆ. ಮೊಬೈಲ್‌ನಲ್ಲಿಯೇ ಶಕ್ತಿ ಸ್ಮಾರ್ಟ್ ಪಿಡಿಎಫ್ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ...

ಮೊದಲಿಗೆ ಮಹಿಳೆಯರ ಉಚಿತ ಪ್ರಯಾಣಕ್ಕೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಪಡೆಯಲು ಸರ್ಕಾರದ ಸೇವಾಸಿಂಧು ಪೋರ್ಟಲ್‌ಗೆ ಭೇಟಿ ನೀಡಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ...


ನಿಮಗೆ ಸೇವಾಸಿಂಧು ಪೋರ್ಟಲ್‌ನ DigiLoker ಪುಟ ತೆರೆಯುತ್ತದೆ. ನೀವು ಹೊಸದಾಗಿ ಸೇವಾಸಿಂಧು ಪೋರ್ಟಲ್‌ಗೆ ಭೇಟಿ ನೀಡುತ್ತಿದ್ದರೆ ಡಿಜಿಲಾಕರ್ ಅಕೌಂಟ್ ಕ್ರಿಯೇಟ್ ಮಾಡಬೇಕಾಗುತ್ತದೆ. ಹೀಗಾಗಿ ಇಲ್ಲಿ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಬೇಕು.

ನಂತರ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್‌ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ, ಅಲ್ಲಿ ಕಾಣುವ ಸರ್ಚ್ ಆಪ್ಷನ್‌ನಲ್ಲಿ ಶಕ್ತಿ ಸ್ಮಾರ್ಟ್ ಕಾರ್ಡ್ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು.


ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ್ ಸಂಖ್ಯೆ, ಗುರುತಿನ ಚೀಟಿ ಮುಂತಾದ ಅಗತ್ಯವಿರುವ ವಿವರಗಳನ್ನು ನಮೂದಿಸಿ, ಅವೇ ದಾಖಲೆಗಳನ್ನು Scan ಮಾಡಿ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು.


ನಂತರ, ಸೇವಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್ PDF ಫೈಲ್ ನಿಮ್ಮ ಮುಂದೆ ತೆರೆಯುತ್ತದೆ. ಅಲ್ಲಿ ಡೌನ್‌ಲೋಡ್ PDF ಅನ್ನು ಕ್ಲಿಕ್ ಮಾಡುವ ಮೂಲಕ ಸೇವಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ರೀತಿಯಲ್ಲಿ ನೀವು ಸೇವಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್ ಅನ್ನು ಆನ್‌ಲೈನ್‌ನಲ್ಲಿ ಪಡೆಯಬಹುದು.

Post a Comment

Previous Post Next Post
CLOSE ADS
CLOSE ADS
×