ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪುರುಷರಿಗೂ ಉಚಿತ ಬಸ್‌ ಪ್ರಯಾಣ! ಐದು ದಿನ ಸುತ್ತಾಡಿ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪುರುಷರಿಗೂ ಉಚಿತ ಬಸ್‌ ಪ್ರಯಾಣ! ಐದು ದಿನ ಸುತ್ತಾಡಿ

 ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆದರೆ, ಈಗ ಮೈಸೂರು ಜಿಲ್ಲಾಡಳಿತವು ಪುರಿಷರಿಗೂ 5 ದಿನ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ



Mysore:- ದೇವರ ದರ್ಶನಕ್ಕಾಗಿ ಮೈಸೂರಿಗೆ ಬರುವ ಮಹಿಳೆಯರು ಮಾತ್ರವಲ್ಲ ಪುರುಷರಿಗೂ 5 ದಿನಗಳು ಉಚಿತ ಬಸ್ ಪಯಣ ಇದೆ. ಇಂತಹ ಸೌಲಭ್ಯ ನೇರವಾಗಿ ರಾಜ್ಯ ಸರ್ಕಾರ ನೀಡದಿದ್ದರೂ ಮೈಸೂರು ಜಿಲ್ಲಾಡಳಿತ ಗಂಡಸರೂ ಸೇರಿದಂತೆ ಎಲ್ಲರಿಗೂ ನೀಡುತ್ತಿದೆ. ಆ ದೇವರು ಯಾವುದು, ಎಷ್ಟು ದೂರ ಪ್ರಯಾಣ ಎಂಬುದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಷಾಢ ಶುಕ್ರವಾರಗಳಂದು ಖಾಸಗಿ ವಾಹನಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಬೆಟ್ಟಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು, ಸರ್ಕಾರಿ ಬಸ್‌ಗಳಲ್ಲಿ ಭಕ್ತಾದಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಮಹಿಳಾ ಭಕ್ತರ ಜೊತೆಗೆ ಪುರುಷ ಭಕ್ತಾದಿಗಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಎಲ್ಲಾ ಭಕ್ತರಿಗೂ ಉಚಿತ ಪ್ರಯಾಣ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ. 

ಖಾಸಗಿ ವಾಹನಗಳ ಸಂಚಾರಕ್ಕೆ ನಿಷೇಧ: ಖಾಸಗಿ ವಾಹನಗಳ ದಟ್ಟಣೆ, ಅಪಘಾತ ತಡೆ, ಸುಗಮ ಸಂಚಾರಕ್ಕಾಗಿ ಜಿಲ್ಲಾಡಳಿತದಿಂದ ಈ ಪ್ರಯತ್ನಕ್ಕೆ ಮುಂದಾಗಿದ್ದು ಆಷಾಡ ಮಾಸದ ವಿಶೇಷ ದಿನಗಳಲ್ಲಿ ಖಾಸಗಿ ವಾಹನಗಳಿಗೆ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಹೀಗಾಗಿ, ಬೆಟ್ಟದ ಬುಡದ ವರೆಗೆ ಮಾತ್ರ ತಲುಪುತ್ತೆ ಖಾಸಗಿ ವಾಹನಗಳು ತಲುಪಲಿವೆ. ಆದರೆ, ಅಲ್ಲಿಂದ ಮೇಲಕ್ಕೆ ವಾಹನಗಳನ್ನು ಬಿಡುವುದಿಲ್ಲ. ಆದ್ದರಿಂದ ಈಗಾಗಲೇ ರಾಜ್ಯ ಸರ್ಕಾರದಿಂದ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಈಗ ಮೈಸೂರು ಜಿಲ್ಲಾಡಳಿತದಿಂದ ಪುರುಷರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

5 ದಿನ ಉಚಿತ ಪ್ರಯಾಣ: 

ಜೂನ್ 23 ರಿಂದ ಜುಲೈ 14ರ ಆಷಾಢ ಶುಕ್ರವಾರ ದಿನಗಳಂದು ಹಾಗೂ ಜುಲೈ 10 ಚಾಮುಂಡಿ ವರ್ಧಂತಿ ದಿನದಂದು ಹೆಚ್ಚಿನ ಜನ ಬರುವುದರಿಂದ ಸಂಚಾರ ಮಾರ್ಗಸೂಚಿ ಪ್ರಕಟ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳು ತಮ್ಮ ವಾಹನಗಳನ್ನ ಲಲಿತಮಹಲ್ ಮೈದಾನದಲ್ಲಿ ನಿಲುಗಡೆ ಮಾಡಲು ಸೂಚನೆ ನೀಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಬರುವ ಎಲ್ಲಾ ಮಾರ್ಗಗಳಿಂದಲೂ ಖಾಸಗಿ ವಾಹನಗಳಿಗೆ ನಿಷೇಧ ಹೇರಲಾಗಿದೆ. ಬೆಟ್ಟದ ತಪ್ಪಲಿನಲ್ಲಿ ತಮ್ಮ ವಾಹನಗಳ ನಿಲ್ಲಿಸಿ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸಬೇಕು. ಜಿಲ್ಲಾಡಳಿತ ವತಿಯಿಂದ ಮಾಡಿರುವ ಸರ್ಕಾರಿ ಬಸ್ ಗಳಲ್ಲಿ ಭಕ್ತರು ತೆರಳುವಂತೆ ಸೂಚನೆ ನೀಡಲಾಗಿದೆ.

ಬೆಳಗಿನ ಜಾವವೇ ಬಸ್‌ಗಳು ರೆಡಿ: ಭಕ್ತರು ಚಾಮುಂಡಿ ಬೆಟ್ಟಕ್ಕೆ ಹೋಗಲು ಅನುಕೂಲ ಆಗುವಂತೆ ಬೆಳಗಿನ ಜಾವ 3 ರಿಂದಲೇ ಉಚಿತ ಬಸ್‌ ಸಂಚಾರವನ್ನು ಆರಂಭಿಸಲಾಗುತ್ತದೆ. ಜೊತೆಗೆ, ರಾತ್ರಿ 10 ಗಂಟೆವರೆಗೂ ಬಸ್ ಸೌಲಭ್ಯವನ್ನು ಮುಂದುವರೆಸಲಾಗುತ್ತದೆ. ಇದರಿಂದ ಚಾಮುಂಡಿ ಬೆಟ್ಟಕ್ಕೆ ಸರ್ಕಾರಿ ಬಸ್ ಗಳಲ್ಲಿ ಎಲ್ಲರಿಗೂ ಉಚಿತ ಬಸ್ ಸೌಲಭ್ಯ ಇರುತ್ತದೆ. ಶಿಷ್ಟಾಚಾರವಿರುವ ಗಣ್ಯರ ಮತ್ತು ಅತೀ ಗಣ್ಯರ ವಾಹನಗಳ ಹೊರತುಪಡಿಸಿ ಉಳಿದ ಎಲ್ಲಾ ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಿ ಮೈಸೂರು ಪೋಲಿಸ್ ಆಯುಕ್ತ ಬಿ. ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ


Post a Comment

Previous Post Next Post
CLOSE ADS
CLOSE ADS
×