ಫ್ರೀ ವಿದ್ಯುತ್​ಗಾಗಿ 2.14 ಕೋಟಿ ಅರ್ಜಿದಾರರು ಕೇವಲ 20 ದಿನಗಳಲ್ಲಿ ಅರ್ಜಿ ಸಲ್ಲಿಸೋಕೆ ಸಾಧ್ಯನಾ? ಟೆಕ್ನಿಕಲ್ ಎಕ್ಸ್​ಪರ್ಟ್ಸ್​ ಹೇಳುವುದೇನು

ಫ್ರೀ ವಿದ್ಯುತ್​ಗಾಗಿ 2.14 ಕೋಟಿ ಅರ್ಜಿದಾರರು ಕೇವಲ 20 ದಿನಗಳಲ್ಲಿ ಅರ್ಜಿ ಸಲ್ಲಿಸೋಕೆ ಸಾಧ್ಯನಾ? ಟೆಕ್ನಿಕಲ್ ಎಕ್ಸ್​ಪರ್ಟ್ಸ್​ ಹೇಳುವುದೇನು

 ಬೆಂಗಳೂರು: ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ರಾಜ್ಯ ಸರ್ಕಾರ ಯೋಚಿಸಿದೆ.



 ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಜೂನ್‌ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜೂನ್ 15 ರಿಂದ ಜುಲೈ 05 ರವರೆಗೆ ಅರ್ಜಿಸಲ್ಲಿಸಲು ಅವಕಾಶ ನೀಡಲಾಗಿದ್ದು, ಬರೋಬ್ಬರಿ 2.14 ಕೋಟಿ ಅರ್ಜಿದಾರರಿದ್ದಾರೆ. ಆದ್ರೆ, ಕೇವಲ 20 ದಿನಗಳು ಅಂತರದಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಸಾಧ್ಯನಾ? ಎನ್ನುವ ಪ್ರಶ್ನೆ ಉದ್ಭವಿಸಿದೆ

ಕೇವಲ 20 ದಿನಗಳು ಅಂತರದಲ್ಲಿ 2.14 ಕೋಟಿಯಷ್ಟು ಮಂದಿ ಅರ್ಜಿ ಸಲ್ಲಿಸಲು ಸಾಧ್ಯನಾ ಎನ್ನುವ ಬಗ್ಗೆ ತಾಂತ್ರಿಕ ನಿಪುಣರ ಬಳಿ ಅಭಿಪ್ರಾಯ ಕೇಳಿದರೆ, 2.14 ಕೋಟಿಯಷ್ಟು ಮಂದಿ ಕೇವಲ 20 ದಿನಗಳಲ್ಲಿ ಅರ್ಜಿ ಸಲ್ಲಿಸಲು ಕಷ್ಟ ಸಾಧ್ಯ. ಸರ್ವರ್ ಸಮಸ್ಯೆ ಎದುರಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ

ಒಂದು ಬಾರಿ ಇಷ್ಟು ಪರ್ಮಾಣದ ಅರ್ಜಿ ಸಲ್ಲಿಸುವುದ ಅಷ್ಟು ಸುಲಭವಲ್ಲ. ಕನಿಷ್ಠ 50 ದಿನಗಳದಾರು ಬೇಕಾಗಬಹುದು. ಹೀಗಾಗಿ ಕೇವಲ 20 ದಿನಗಳಲ್ಲಿ ಬರೋಬ್ಬರಿ 2.14 ಕೋಟಿ ಅರ್ಜಿ ಸಲ್ಲಿಸುವುದು ಸವಾಲಿನ ಸಂಗತಿ ಎಂದು ಟೆಕ್ನಿಕಲ್ ಎಕ್ಸ್​ಪರ್ಟ್ಸ್ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಖುದ್ದು ಸಿಎಂ ಸಿದ್ದರಾಮಯ್ಯನವರೇ ಇದರ ಬಗ್ಗೆ ಅಧಿಕಾರಿಗಳಿಗೆ ಈಗಾಗಲೇ ಎಚ್ಚರಿಕೆ ಕೊಟ್ಟಿದ್ದಾರೆ. ಅಪಾರ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಗೆ ಸೂಚಿಸಿದ್ದಾರೆ. ಆದ್ರೆ, ಅಧಿಕಾರಿಗಳು ಎಷ್ಟರ ಮಟ್ಟಿಗೆ ಸಿಎಂ ಸೂಚನೆಗಳನ್ನು ಪಾಲನೆ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.


ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್‌ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ ಸೆಪ್ಟೆಂಬರ್‌ 30 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ ಆಧಾರ್‌, RR ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ.

Post a Comment

Previous Post Next Post

Top Post Ad

CLOSE ADS
CLOSE ADS
×