Gruha lakshmi: ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

Gruha lakshmi: ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

 Gruha lakshmi: ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ಗೃಹ ಲಕ್ಷ್ಮೀ ಯೋಜನೆಗೆ ಜೂ. 27ರಿಂದ ಅರ್ಜಿ ಸಲ್ಲಿಕೆ ಶುರುವಾಗಲಿದೆ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. 



ಈ ಬಗ್ಗೆ ಅವರು ಚಾಮುಂಡಿಬೆಟ್ಟದಲ್ಲಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆಯಪ್ ರಚಿಸಿದ್ದೇವೆ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬ ಮಾತಿಗೆ ಅರ್ಥ ಇಲ್ಲ. ಎಲ್ಲಾ ರೀತಿಯ ಸಂಪನ್ಮೂಲಗಳು ನಮ್ಮ ಬಳಿ ಇವೆ ಎಂದರು. 

 ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿಕೊಂಡಿದ್ದೆ. ಈಗ ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಬಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆಯನ್ನು ತೀರಿಸಿದ್ದೇನೆ. ತಾಯಿಯಲ್ಲಿ ರಾಜ್ಯಕ್ಕೆ ಒಳ್ಳೆಯ ಮಳೆಯಾಗಲಿ‌ ಎಂದು ದೇವಿ ಮುಂದೆ ಸೆರೆಗೊಡ್ಡಿ ಬೇಡಿಕೊಂಡಿದ್ದೇನೆ ಅಂತ ಅವರು ಇದೇ ವೇಳೆ ತಿಳಿಸಿದರು. ಅರ್ಜಿ ಸಲ್ಲಿಕೆಗೆ ಬೇಕಾದ ಸಾಫ್ಟ್ ವೇರ್ ಸಿದ್ಧವಾಗಿದೆ. ಜೂ. 27ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ತಿಳಿಸಿದರು. ಇನ್ನೂ ಗೃಹ ಜ್ಯೋತಿಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ 32 ಲಕ್ಷ ದಾಟಿದೆ ಎಂದು ಇಂಧನ ಇಲಾಖೆ ತಿಳಿಸಿದೆ. ಒಟ್ಟು 32,45,396 ಅರ್ಜಿಗಳು ಸಲ್ಲಿಕೆಯಾಗಿವೆ ಇಲಾಖೆ ತಿಳಿಸಿದೆ. 

 ಗೃಹ ಲಕ್ಷ್ಮಿ ಯೋಜನೆಗೆ ಅರ್ಹತಾ ಮಾನದಂಡಗಳು ಮಹಿಳೆಯರನ್ನು ಸಬಲೀಕರಣಗೊಳಿಸುವುದು ಕಾರ್ಯಕ್ರಮದ ಗುರಿಯಾಗಿದೆ, ಮತ್ತು ಪ್ರತಿ ಕುಟುಂಬಕ್ಕೆ ಒಬ್ಬ ಮಹಿಳೆ ಮಾತ್ರ ಅರ್ಜಿ ಸಲ್ಲಿಸಬಹುದು. ಈ ಕಾರ್ಯಕ್ರಮಕ್ಕೆ ಅರ್ಹರಾಗಲು, ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸಿರಬೇಕು. ಯೋಜನೆಗೆ ಅರ್ಹರಾಗಲು ಅರ್ಜಿದಾರರು ಕುಟುಂಬದ ಯಜಮಾನಿಯಾಗಿರಬೇಕು. ಬಿಪಿಎಲ್-ಅಂತ್ಯೋದಯ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

 ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಗೆ ಅಗತ್ಯ ದಾಖಲೆಗಳು ವಾಸಸ್ಥಳ ಪ್ರಮಾಣಪತ್ರ ಮೊಬೈಲ್ ಸಂಖ್ಯೆ 2 ಪಾಸ್ಪೋರ್ಟ್ ಗಾತ್ರದ ಛಾಯಾಚಿತ್ರಗಳು ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ವೋಟರ್ ಐಡಿ ಕಾರ್ಡ್ ಮುಂತಾದ ಗುರುತಿನ ಪುರಾವೆಗಳು ಪಡಿತರ ಚೀಟಿ, ನೀರಿನ ಬಿಲ್, ವಿದ್ಯುತ್ ಬಿಲ್ ಮುಂತಾದ ವಿಳಾಸ ಪುರಾವೆ ಬ್ಯಾಂಕ್ ಪಾಸ್ ಬುಕ್ ನಕಲು ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು. 

 ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿವುದು ಹೇಗೆ? 

 ಮೊದಲನೆಯದಾಗಿ, ಯೋಜನೆಯ ಅಧಿಕೃತ ವೆಬ್ಸೈಟ್ಗೆ ಹೋಗಿ ವೆಬ್ ಸೈಟ್ ನ ಮುಖಪುಟ ಪರದೆಯ ಮೇಲೆ ತೆರೆಯುತ್ತದೆ. ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಅದರ ನಂತರ, ಅರ್ಜಿ ನಮೂನೆಯ ಪ್ರಿಂಟ್‌ಔಟ್ ತೆಗೆದುಕೊಳ್ಳಿ ಈಗ, ವೈಯಕ್ತಿಕ ವಿವರಗಳು, ಬ್ಯಾಂಕ್ ವಿವರಗಳು ಮುಂತಾದ ಎಲ್ಲಾ ಅಗತ್ಯ ವಿವರಗಳೊಂದಿಗೆ ಫಾರ್ಮ್ ಅನ್ನು ಭರ್ತಿ ಮಾಡಿ ಅದರ ನಂತರ, ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಫಾರ್ಮ್ ಗೆ ಲಗತ್ತಿಸಿ ಈಗ, ಯಾವುದೇ ತಪ್ಪುಗಳನ್ನು ತಪ್ಪಿಸಲು ಅರ್ಜಿ ನಮೂನೆಯನ್ನು ಮರುಪರಿಶೀಲಿಸಿ ಅರ್ಜಿ ನಮೂನೆಯನ್ನು ಕರ್ನಾಟಕ ಗ್ರಾಮ ಪಂಚಾಯಿತಿ ಕೇಂದ್ರ ಅಥವಾ ಆಯಾ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಮತ್ತು ಪೂರಕ ದಸ್ತಾವೇಜನ್ನು ಅಧಿಕಾರಿಗಳು ಪರಿಶೀಲಿಸುತ್ತಾರೆ. ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ನಂತರ ನಗದು ಪ್ರೋತ್ಸಾಹಕ ಮೊತ್ತವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಪಾವತಿಸಲಾಗುತ್ತದೆ.


 Gruhalakshmi application form-ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಬಿಡುಗಡೆ Guidelines to fill up Gruhalakshmi application - ಗೃಹಲಕ್ಷ್ಮಿ(Gruhalakshmi) ಯೋಜನೆಯಡಿ, ಪ್ರತಿ ಮನೆಯ ಯಜಮಾನಿಗೆ ಮಾಸಿಕವಾಗಿ 2 ಸಾವಿರ ರೂ.ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ, ಮನೆಯ ಯಜಮಾನಿ ಯಾರು ಎಂಬುದನ್ನು ಸರ್ಕಾರ ನಿಗದಿಪಡಿಸಿಲ್ಲ. ಹಾಗಾಗಿ, ಮನೆಯವರೇ ಯಜಮಾನಿ ಯಾರೆಂದು ನಿರ್ಧರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೂ. 8ರಂದು ಗೃಹ ಲಕ್ಷ್ಮಿ (Gruhalakshmi)ಯೋಜನೆಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಅರ್ಜಿಯನ್ನು ನಮೂದಿದಿಸಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಬಹುದು. ಇಲ್ಲವೇ ಬೆಂಗಳೂರು ಒನ್ ಅಥವಾ ಬೆಂಗಳೂರು ಒನ್ ನಂಥ ಕಚೇರಿಗಳಲ್ಲಿ ಸಲ್ಲಿಸಬಹುದು. ಮಹಿಳೆಯರ ಭಾರೀ ನಿರೀಕ್ಷೆಯ ಗೃಹ ಲಕ್ಷ್ಮಿ ಯೋಜನೆಯ ಮಾರ್ಗಸೂಚಿಗಳು ಬಿಡುಗಡೆಯಾದ ಬೆನ್ನಲ್ಲೇ ಆ ಯೋಜನೆಗೆ ಸಲ್ಲಿಸಬೇಕಾಗಿರುವ ಅರ್ಜಿಯ ನಮೂನೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಕುಟುಂಬ ಕಲ್ಯಾಣ ಇಲಾಖೆಯು ಈ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. 

ಇದರಲ್ಲಿ ಮನೆಯ ಯಜಮಾನಿ ಯಾರೆಂದು ಘೋಷಿಸುವ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಇರುವ ಫೋನ್ ನಂಬರ್, ರೇಷನ್ ಕಾರ್ಡ್, ವೋಟರ್ ಐಡಿ ಕಾರ್ಡ್ ನಂಬರ್ ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡುವಂತೆ ಸೂಚಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಜೂ. 15ರಿಂದ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಜು. 15ರಂದು ಅರ್ಜಿ ಸಲ್ಲಿಕೆಗೆ ಕಡೇದಿನವಾಗಿದೆ. 

 ಅರ್ಜಿಯಲ್ಲಿವೆ ಒಟ್ಟು 11 ಹಂತಗಳು ಅರ್ಜಿಯಲ್ಲಿ ಒಟ್ಟು 11 ವಿಭಾಗಗಳಿವೆ. ವಿಭಾಗ - 1 ರಲ್ಲಿ ಮೂರು ಪ್ರಶ್ನೆಗಳನ್ನು ಕೇಳಲಾಗಿದೆ. ಅದರಲ್ಲಿ ಮನೆಯ ಯಜಮಾನಿಯ ಹೆಸರನ್ನು ಸ್ವಯಂ ಅರ್ಜಿದಾರರೇ ಘೋಷಿಸಬೇಕಿದೆ. ಅಲ್ಲಿ ಸೂಚಿಸಲಾಗಿರುವ ಮನೆಯ ಯಜಮಾನಿ ಹೆಸರು ಮತ್ತು ವಿಳಾಸ ಎಂಬ ಶೀರ್ಷಿಕೆಯ ಮುಂದೆ ಖಾಲಿ ಬಿಟ್ಟಿರುವ ಜಾಗದಲ್ಲಿ ಮನೆಯ ಯಜಮಾನಿಯ ಹೆಸರು ಹಾಗೂ ವಿಳಾಸವನ್ನು ಅರ್ಜಿದಾರರು ಬರೆಯಬೇಕು. ಆನಂತರ, ವಿಭಾಗ -1ರ a,b ಮತ್ತು c ಎಂಬಲ್ಲಿ ಅರ್ಜಿದಾರರ ಆಧಾರ್ ಕಾರ್ಡ್ ಸಂಖ್ಯೆ, ಚುನಾವಣಾ ಗುರುತಿನ ಸಂಖ್ಯೆ ಹಾಗೂ ಪಡಿತರ ಕಾರ್ಡ್ ಸಂಖ್ಯೆಯನ್ನು ನಮೂದಿಸಬೇಕಿರುತ್ತದೆ. ಪತಿಯ ಹೆಸರು ಇತ್ಯಾದಿ ವಿವರ 2ನೇ ವಿಭಾಗದಲ್ಲಿ ಪತಿಯ ಹೆಸರನ್ನು, ಆತನ ಆಧಾರ್ ಸಂಖ್ಯೆಯನ್ನು ಅದಕ್ಕಾಗಿ ನೀಡಲಾಗಿರುವ ಖಾಲಿ ಜಾಗದಲ್ಲಿ ಬರೆಯಬೇಕಿದೆ. 

ಆನಂತರ ಅಲ್ಲಿಯೇ ಕೆಳಗೆ ಇರುವ ಸಾಲಿನಲ್ಲಿ ಪತಿಯ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ನಮೂದಿಸಬೇಕು. ಆನಂತರ, ಅರ್ಜಿದಾರರು ತಮ್ಮ ಜಾತಿಯನ್ನು ನಮೂದಿಸಬೇಕು. ಅಂದರೆ, ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ಹಾಗೂ ಇತರೆ ಎಂಬ ನಾಲ್ಕು ಆಯ್ಕೆಗಳನ್ನು ನೀಡಲಾಗಿದ್ದು ಅರ್ಜಿದಾರರು ಸೇರಸ್ಪಡುವ ಸಮುದಾಯದ ಮುಂದಿರುವ ಚೆಕ್ ಬಾಕ್ಸ್ ನಲ್ಲಿ ಟಿಕ್ ಮಾಡಲಾಗಿದೆ. ಮೊಬೈಲ್ ಸಂಖ್ಯೆ ಇತ್ಯಾದಿ ನಮೂದು ವಿಭಾಗ 6ರಲ್ಲಿ, ಇಲ್ಲಿ ಅರ್ಜಿದಾರರಿಗೆ ಎರಡು ಮೊಬೈಲ್ ಸಂಖ್ಯೆಯನ್ನು ನಮೂದಿಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ, ಮೊದಲು ತಾವು ಬಳಸುತ್ತಿರುವ ಸಂಖ್ಯೆಯನ್ನು ನಮೂದಿಸಬೇಕು. ವಿಭಾಗ 6ರಲ್ಲಿ ಮತ್ತೊಂದು ಮೊಬೈಲ್ ಸಂಖ್ಯೆಯನ್ನು ನಮೂದಿಸಲು ಅವಕಾಶ ಕಲ್ಪಿಸಲಾಗಿದೆ. ಅದರಲ್ಲಿ ಪತಿಯ ಮೊಬೈಲ್ ಸಂಖ್ಯೆ ಅಥವಾ ಮಕ್ಕಳ ಮೊಬೈಲ್ ಸಂಖ್ಯೆ ಅಥವಾ ಅರ್ಜಿದಾರರ ಬಳಸುತ್ತಿರಬಹುದಾದ ಮತ್ತೊಂದು ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಬ್ಯಾಂಕ್ ವಿವರ, ದಾಖಲೆಗಳ ಜೆರಾಕ್ಸ್ ಪ್ರತಿಗಳ ಚೆಕ್ ಲಿಸ್ಟ್ 8ನೇ ವಿಭಾಗದಲ್ಲಿ, ಅರ್ಜಿದಾರರ ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಆ ಖಾತೆಯು ಇರುವ ಬ್ರಾಂಚ್ ನ ಐಎಫ್ಎಸ್ ಸಿ ಕೋಡ್ ನಮೂದಿಸಬೇಕು.

 ಆನಂತರ ಇದೇ ವಿಭಾಗದಲ್ಲಿ ಅರ್ಜಿಯ ಜೊತೆಗೆ ಯಾವ್ಯಾವ (ಎ) ವಿಭಾಗದಲ್ಲಿ ಮನೆಯ ಯಜಮಾನಿಯ ಯಾವ ದಾಖಲೆಗಳನ್ನು ಸಲ್ಲಿಸಬೇಕು ಎಂಬುದನ್ನು ಉಲ್ಲೇಖಿಸಲಾಗಿದೆ. (b) ಪತಿಗೆ ಸಂಬಂಧಿಸಿದ ಯಾವ ದಾಖಲೆಗಳನ್ನು ಸಲ್ಲಿಸಬೇಕು ಎಂಬುದನ್ನು ಉಲ್ಲೇಖಿಸಲಾಗಿದೆ. ಆ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸುವುದನ್ನು ಮರೆಯಬೇಡಿ. ಮನೆಯ ಯಜಮಾನಿಗೆ ಸಂಬಂಧಿಸಿದ ದಾಖಲೆಗಳಾಗಿ, ಆಧಾರ್ ಕಾರ್ಡ್, ವೋಟರ್ ಐಡಿ ಜೆರಾಕ್ಸ್ ಪ್ರತಿ, ಬ್ಯಾಂಕ್ ಬಾಸ್ ಪುಸ್ತಕದ ಮೊದಲ ಪುಟದ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು. ಪತಿಗೆ ಸಂಬಂಧಿಸಿದ ದಾಖಲೆಗಳಾಗಿ, ಪತಿಯ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಗಳನ್ನು ಸಲ್ಸಿಬೇಕು. ಸ್ವಯಂ ಘೋಷಣೆ, ಸಹಿ ಅಥವಾ ಹೆಬ್ಬೆಟ್ಟು ಅರ್ಜಿಯ ಕೆಳಭಾಗದಲ್ಲಿ ಸ್ವಯಂ ಘೋಷಣೆಗಾಗಿ ಜಾಗವನ್ನು ಬಿಡಲಾಗಿದೆ.

 ಅಲ್ಲಿ, ನಾನು, ನನ್ನ ಪತಿಯು ಆದಾಯ ತೆರಿಗೆ ಹಾಗೂ ಜಿಎಸ್ ಟಿ ಪಾವತಿದಾರರಾಗಿರುವುದಿಲ್ಲ ಎಂಬುದನ್ನು ಸ್ವಯಂ ದೃಢೀಕರಣ ಮಾಡಬೇಕಿರುತ್ತದೆ. ಇದು ತುಂಬಾನೆ ಮಹತ್ವದ ವಿಚಾರ. ಮಾಸಿಕ 2 ಸಾವಿರ ರೂ.ಗಳಿಗಾಗಿ ಇಲ್ಲಿ ತಪ್ಪು ಮಾಹಿತಿಯನ್ನು ನೀಡಿಲ್ಲ ಎಂಬುದನ್ನು ಈ ದೃಢೀಕರಣ ಖಾತ್ರಿ ಪಡಿಸುತ್ತದೆ. ಹಾಗಾಗಿ, ಸಹಿ ಮಾಡುವ ಮುನ್ನ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡುತ್ತಿಲ್ಲ ಎಂಬುದನ್ನು ನೀವು ಖಾತ್ರಿ ಪಡಿಸಿದಂತೆ. ಸ್ವಯಂ ಘೋಷಣೆಯ ಕೆಳಗಡೆ ಇರುವ ಎಡಭಾಗದಲ್ಲಿ ಅರ್ಜಿ ಭರ್ತಿ ಮಾಡಿದ ದಿನಾಂಕ, ಸ್ಥಳವನ್ನು ನಮೂದಿಸಬೇಕು. ಬಲಭಾಗದಲ್ಲಿ ಅರ್ಜಿದಾರರ ಸಹಿ ಅಥವಾ ಎಡಗೈ ಹೆಬ್ಬೆಟ್ಟಿನ ಗುರುತನ್ನು ಹಾಕಲು ಸ್ಥಳಾವಕಾಶ ಕಲ್ಪಿಸಲಾಗಿದೆ

Post a Comment

Previous Post Next Post
CLOSE ADS
CLOSE ADS
×