ಜೂನ್ 27 ರಿಂದ 'ಗೃಹಲಕ್ಷ್ಮಿ' ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೇವಲ ಈ ಮೂರು ದಾಖಲೆ ಇದ್ರೆ ಸಾಕು

ಜೂನ್ 27 ರಿಂದ 'ಗೃಹಲಕ್ಷ್ಮಿ' ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೇವಲ ಈ ಮೂರು ದಾಖಲೆ ಇದ್ರೆ ಸಾಕು

ಜೂನ್ 27 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೇವಲ ಈ ಮೂರು ದಾಖಲೆ ಇದ್ರೆ ಸಾಕು.



ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆದ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೂನ್ 27 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಗೃಹ ಲಕ್ಷ್ಮೀ ಯೋಜನೆಗೆ ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರೆ.


ವಿಧಾನಸಭೆಯ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮತದಾರರಿಗೆ 5 ‘ಗ್ಯಾರಂಟೀ’ ಯೋಜನೆಗಳ ಘೋಷಣೆಗಳನ್ನು ಮಾಡಿದ್ದು, ಆದರೆ ಚುನಾವಣೆಯಲ್ಲಿ ಗೆದ್ದ ನಂತರ ಈ ಯೋಜನೆಗಳು ಒಂದೊಂದೇ ಪ್ರಕಟವಾಗುತ್ತಿವೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮತ್ತು ಶಕ್ತಿ ಯೋಜನೆ ಈಗಾಗಲೇ ಅನುಷ್ಠಾನದಲ್ಲಿದೆ ಮತ್ತು ಪ್ರತಿದಿನವೂ ಲಕ್ಷಾಂತರ ಮಂದಿ ಅದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ.

ಈಗ ಮತ್ತೊಂದು ಮುಖ್ಯ ಯೋಜನೆಯಾದ ‘ಗೃಹಲಕ್ಷ್ಮಿ’ ಅನುಷ್ಠಾನಕ್ಕೆ ಸಿದ್ಧತೆಗಳು ನಡೆಯುತ್ತಿವೆ ಮತ್ತು ಇದು ಆಗಸ್ಟ್ ತಿಂಗಳಿಂದ ಪ್ರಾರಂಭವಾಗುವುದೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ವರದಿಸಿದ್ದಾರೆ.


ಗೃಹಲಕ್ಷ್ಮೀ ಯೋಜನೆಗೆ ಯಲ್ಲಿ ಅರ್ಜಿ ಸಲ್ಲಿಸುವುದು ಎಂದರೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಯಾವೆಲ್ಲಾ ದಾಖಲೆಗಳು ಬೇಕು..?


1.ರೇಷನ್ ಕಾರ್ಡ್

2.ಬ್ಯಾಂಕ್ ಪಾಸ್ಬುಕ್

3.ಆಧಾರ್ ಕಾರ್ಡ್

4.ಯಾವುದಾದರೂ ಗುರುತಿನ ಚೀಟಿ.

ಗೃಹಲಕ್ಷ್ಮೀ ಯೋಜನೆಯಡಿ 2,000 ರೂ. ಪಡೆಯಲು ಈ ಕಾರ್ಡ್ ಗಳು ಇರಲೇಬೇಕು ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಯಾವುದಾದರೂ ಒಂದು ಇರಲೇಬೇಕು ಎಂದು ವರದಿಯಾಗಿದೆ.ಈ ಯೋಜನೆಗೆ ಲಾಭ ಪಡೆಯಲು ಮನೆಯೊಡತಿಯ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಅನ್ನು ಜೋಡಣೆ ಮಾಡಿರಲೇಬೇಕು ಎಂದಿದರೆ. ನೀವು ಏನಾದ್ರು ಯೋಜನೆಯ ಲಾಭ ಪಡೆಯಲು ತಪ್ಪು ಮಾಹಿತಿ ನೀಡಿದರೆ ಸರ್ಕಾರದಿಂದ ನಿಮಗೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

Post a Comment

Previous Post Next Post
CLOSE ADS
CLOSE ADS
×