2nd PUC Supplementary Result: ಇಲ್ಲಿದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಬಿಡುಗಡೆ ದಿನಾಂಕದ ಮಾಹಿತಿ

2nd PUC Supplementary Result: ಇಲ್ಲಿದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಬಿಡುಗಡೆ ದಿನಾಂಕದ ಮಾಹಿತಿ

 Supplementary Result 2023 12th Karnataka: 



ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಯಾವುದೇ ಅಡೆ ತಡೆಗಳಿಲ್ಲದೇ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ನಡೆಸಿದ್ದು, ಶೀಘ್ರದಲ್ಲೇ ಫಲಿತಾಂಶವನ್ನು ಬಿಡುಗಡೆ ಮಾಡಲು ಸಕಲ ಸಿದ್ಧತೆಯನ್ನು ನಡೆಸಿದೆ

2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಮುಕ್ತಾವಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಮೇ 23 ರಿಂದ ಜೂನ್ 03 ರ ವರೆಗೆ ನಡೆಸಿದ್ದು, ಈ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ಮಾಹಿತಿ ಪ್ರಕಾರ ಈಗಾಗಲೇ ಪೂರಕ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯು ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ವಾರದಲ್ಲಿ ಎಲ್ಲಾ ಕಾರ್ಯಗಳನ್ನು ಮುಕ್ತಾಯಗೊಳಿಸಿ, ಮುಂದಿನ ವಾರ ಅಂದರೆ ಜೂನ್ ಎರಡು ಅಥವಾ ಮೂರನೇ ವಾರದಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 74.64 ರಷ್ಟು ಫಲಿತಾಂಶ ದಾಖಲಾಗಿದ್ದು, ಇದರಲ್ಲಿ ಅನುತ್ತೀರ್ಣರಾದ ಮತ್ತು ಫಲಿತಾಂಶವನ್ನು ತಿರಸ್ಕರಿಸಿ ಪೂರಕ ಪರೀಕ್ಷೆ ಬರೆಯಲು ಬಯಸಿದ್ದ ಅಭ್ಯರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು.

ಇನ್ನು ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಯು ಆರಂಭವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಫಲಿತಾಂಶವನ್ನು ಶೀಘ್ರದಲೇ ಪ್ರಕಟಿಸಲು ಸಕಲ ತಯಾರಿಯನ್ನು ಮಾಡಿಕೊಳ್ಳುತ್ತಿದೆ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಬಿಡುಗಡೆಯಾದ ಮೇಲೆ ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಗೆ ಭೇಟಿ ನೀಡಿ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಚೆಕ ಮಾಡುವುದು ಹೇಗೆ?


ದ್ವಿತೀಯ ಪಿಯುಸಿ ಫಲಿತಾಂಶ ಚೆಕ್‌ ಮಾಡುವ ವಿಧಾನದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಇದನ್ನು ಅನುಸರಿಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆಯಬಹುದಾಗಿದೆ.


ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ www.karresults.nic.in ಅಥವಾ https://kseab.karnataka.gov.in/ ಗೆ ಭೇಟಿ ನೀಡಿ.

ಓಪನ್‌ ಆದ ಪೇಜ್‌ನಲ್ಲಿ 2nd ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.

ಆಗ ನಿಮಗೆ ಇನ್ನೊಂದು ಪೇಜ್‌ ಓಪನ್‌ ಆಗುತ್ತದೆ.

ಆ ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಟೈಪ್‌ ಮಾಡಿ.

ನಂತರ 'Submit' ಎಂಬಲ್ಲಿ ಕ್ಲಿಕ್ ಮಾಡಿ.

ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ.

ಅದನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ ತೆಗೆದುಕೊಳ್ಳಿ.

Post a Comment

Previous Post Next Post
CLOSE ADS
CLOSE ADS
×