ನಾಳೆಯಿಂದ ಆರಂಭವಾಗಬೇಕಿದ್ದ ಗೃಹ ಜ್ಯೋತಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿದ ರಾಜ್ಯ ಸರ್ಕಾರ?

ನಾಳೆಯಿಂದ ಆರಂಭವಾಗಬೇಕಿದ್ದ ಗೃಹ ಜ್ಯೋತಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿದ ರಾಜ್ಯ ಸರ್ಕಾರ?

 ಬೆಂಗಳೂರು: ನಾಳೆಯಿಂದ ಆರಂಭವಾಗಬೇಕಿದ್ದ ಕಾಂಗ್ರೆಸ್‌ ಸರ್ಕಾರದಿಂದ ಘೋಷಣೆ ಮಾಡಲಾಗಿದ್ದ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.



ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಳೆ ಇಲ್ಲ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿಕೆ ಸಾಧ್ಯತೆಯಿದೆ. ಗೃಹಜ್ಯೋತಿ ಯೋಜನೆಗೆ 18 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದರು. ಆದರೆ, ಈಗ ದಿನಾಂಕವನ್ನು ಮುಂದೂಡಿಕೆ ಮಾಡುವ ಸಾಧ್ಯತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆಯನ್ನು ಮಾಡುತ್ತಿದ್ದು, ಸಭೆಯ ನಂತರ ಅಧಿಕೃತ ಮಾಹಿತಿ ಹೊರಬೀಳಲಿದೆ. 


Post a Comment

Previous Post Next Post
CLOSE ADS
CLOSE ADS
×