ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ಈಡೇರಿದೆ. ಇದೀಗ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಬಗ್ಗೆ ಚರ್ಚೆ ಶುರುವಾಗಿದೆ. ಅದರಲ್ಲೂ ಬಾಡಿಗೆ ಮನೆ, ಹೊಸ ಮನೆಗೆ ಫ್ರೀ ಕರೆಂಟ್ ಸಿಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಖುದ್ದು ಇಂಧನ ಸಚಿವ ಕೆಜೆ ಜಾರ್ಜ್ ಅವರೇ ಉತ್ತರಿಸಿದ್ದಾರೆ.
ಫ್ರೀ ವಿದ್ಯುತ್ ನೀಡುವುದು ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಇದಕ್ಕೆ ಗೃಹಜ್ಯೋತಿ ಅಂತ ಹೆಸರಿಡಲಾಗಿದೆ. ಇದರ ಅನ್ವಯ ಪ್ರತಿ ಕುಟುಂಬಕ್ಕೆ 200 ಯುನಿಟ್ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ.
ಸರ್ಕಾರ ನೀಡಿರುವ ಮಾಹಿತಿಯಂತೆ ಇದೇ ಜುಲೈ 1, ಶನಿವಾರದಿಂದ ಈ ಯೋಜನೆ ರಾಜ್ಯಾದ್ಯಂತ ಜಾರಿಗೆ ಬರಲಿದೆ. ರಾಜ್ಯದ ಪ್ರತಿ ಕುಟುಂಬಕ್ಕೆ ಅಂದರೆ ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬಕ್ಕೂ ಉಚಿತವಾಗಿ 200 ಯುನಿಟ್ ವಿದ್ಯುತ್ ನೀಡಲಾಗುತ್ತದೆ. ಆದರೆ ಅದಕ್ಕಿಂತ ಹೆಚ್ಚು ವಿದ್ಯುತ್ ಬಳಸಿದರೆ ಅದಕ್ಕೆ ಬಿಲ್ ಪಾವತಿಸಬೇಕಾಗುತ್ತದೆ.
ಇದೀಗ ಬಾಡಿಗೆ ಮನೆ, ಹೊಸ ಮನೆಗೆ ಫ್ರೀ ಕರೆಂಟ್ ಸಿಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಖುದ್ದು ಇಂಧನ ಸಚಿವ ಕೆಜೆ ಜಾರ್ಜ್ ಅವರೇ ಉತ್ತರಿಸಿದ್ದಾರೆ.
ಗೃಹಜ್ಯೋತಿ ಯೋಜನೆಯ ಅಡಿ ಹೊಸದಾಗಿ ಮನೆ ಕಟ್ಟಿರುವವರಿಗೆ ಹಾಗೂ ಹೊಸದಾಗಿ ಮನೆ ಬಾಡಿಗೆಗೆ ಪಡೆದವರಿಗೂ ಫ್ರೀ ವಿದ್ಯುತ್ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಹೊಸ ಮನೆಯವರಿಗೆ ಹಾಗೂ ಹೊಸ ಬಾಡಿಗೆದಾರರಿಗೆ ಸರಾಸರಿ 53 ಯೂನಿಟ್ ಜತೆಗೆ ಹೆಚ್ಚುವರಿಯಾಗಿ ಶೇ. 10 ಯೂನಿಟ್ ಬಳಕೆಯ ಮಿತಿಯನ್ನು ವಿಧಿಸಲು ನಿರ್ಧರಿಸಲಾಗಿದೆ. ಈ ಸರಾಸರಿ ಬಳಕೆಯಲ್ಲಿ ವಿದ್ಯುತ್ ಬಳಸಿದರೆ ಶೂನ್ಯ ಬಿಲ್ ಲೆಕ್ಕ ಇರಲಿದೆ.
ಯಾರು ಹೊಸದಾಗಿ ಮನೆಗೆ ಬರುತ್ತಾರೆ ಅವರಿಗೆ ದಾಖಲೆ ಇರುವುದಿಲ್ಲ. ಅವರಿಗೆ ಸರಾಸರಿ 53 +10 ಶೇ ವರೆಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತದೆ. ಒಂದು ವೇಳೆ ಇದಕ್ಕಿಂತ ಹೆಚ್ಚು ಯೂನಿಟ್ ಅನ್ನು ಹೊಸ ಮನೆಯವರು, ಹೊಸ ಬಾಡಿಗೆದಾರರು ಬಳಸಿದರೆ ಹೆಚ್ಚುವರಿಯಾಗಿ ಬಳಸಿದ ವಿದ್ಯುತ್ಗೆ ಬಿಲ್ ಪಾವತಿ ಮಾಡಬೇಕಾಗುತ್ತದೆ.
ಪ್ರತಿ ತಿಂಗಳು 200 ಯುನಿಟ್ವರೆಗೆ ವಿದ್ಯುತ್ ಬಳಕೆ ಮಾಡುವ ಬಳಕೆದಾರರು ಈ ಯೋಜನೆಯ ಫಲಾನುಭವಿಗಳಾಗುತ್ತಾರೆ. ಎಪಿಎಲ್, ಬಿಪಿಎಲ್ ಪಡಿತರ ಚೀಟಿದಾರರು, ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬದವರೂ ಸಹ ಈ ಯೋಜನೆಯ ಉಪಯೋಗ ಪಡೆಯಬಹುದು.
ಸರ್ಕಾರದ ಯೋಜನೆಯ ಪ್ರಕಾರ 200 ಯುನಿಟ್ವರೆಗೆ ಮಾತ್ರ ಉಚಿತ ವಿದ್ಯುತ್ ನೀಡಲಾಗುತ್ತದೆ. ಉದಾಹರಣೆಗೆ 113 ಯುನಿಟ್ ಬಳಸುವವರು ಹೆಚ್ಚುವರಿ ವಿದ್ಯುತ್ ಬಳಕೆಗೆ ಶುಲ್ಕ ಪಾವತಿಸಬೇಕು. ಇನ್ನು 200 ಯುನಿಟ್ ಗಳಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದರೆ ಪೂರ್ಣ ಪ್ರಮಾಣದ ಶುಲ್ಕ ಭರಿಸಬೇಕಾಗುತ್ತದೆ.