Farmers: ರಾಜ್ಯದ ಎಲ್ಲಾ ರೈತರಿಗೆ ಬಂಪರ್ ಸಿಹಿಸುದ್ದಿ, ಬಡ್ಡಿ ಕಟ್ಟಬೇಕಿಲ್ಲ! ಇಲ್ಲಿದೆ ಹೊಸ ಗ್ಯಾರಂಟಿ

Farmers: ರಾಜ್ಯದ ಎಲ್ಲಾ ರೈತರಿಗೆ ಬಂಪರ್ ಸಿಹಿಸುದ್ದಿ, ಬಡ್ಡಿ ಕಟ್ಟಬೇಕಿಲ್ಲ! ಇಲ್ಲಿದೆ ಹೊಸ ಗ್ಯಾರಂಟಿ

 ಕೃಷಿ (Agricultural) ಪ್ರಧಾನವಾದ ದೇಶದಲ್ಲಿ ರೈತರು (Farmers) ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೃಷಿಗಾಗಿ ರೈತರು ವಿವಿಧ ಬ್ಯಾಂಕ್ ಗಳಲ್ಲಿ ಸಾಲವನ್ನು ಪಡೆಯುತ್ತಾರೆ. ಆದರೆ ಇದೀಗ, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಸಚಿವ ಕೆ.ಎನ್. ರಾಜಣ್ಣ (Minister K.N. Rajanna) ಹೇಳಿದ್ದಾರೆ.



ಶೂನ್ಯ ಬಡ್ಡಿ ದರ ಸಾಲವು 10 ಲಕ್ಷ ರೂ.ನಿಂದ 20 ಲಕ್ಷ ರೂಗೆ ಹೆಚ್ಚಳ:

ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಚಿವ ಕೆ.ಎನ್. ರಾಜಣ್ಣ, “ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿ ದರ ಸಾಲವನ್ನು ಮೂರು ಲಕ್ಷ ರೂ.ನಿಂದ ಐದು ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅದೇ ರೀತಿ ಶೇಕಡ ಮೂರರ ಬಡ್ಡಿ ದರದಲ್ಲಿ ನೀಡುವ ಮಧ್ಯಮಾವಧಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲು ಭರವಸೆ ನೀಡಲಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿಯೇ ಇದನ್ನು ಜಾರಿಗೊಳಿಸಿ ರೈತರಿಗೆ ಸಾಲ ಸೌಲಭ್ಯ ನೀಡಲಾಗುವುದು ಎಂದಿದ್ದಾರೆ.

“ರೈತರಿಗೆ ಗುರಿ ಮೀರಿ ಸಾಲ ನೀಡಲಾಗುತ್ತಿದೆ. ಕಳೆದ ವರ್ಷ 12,000 ಕೋಟಿ ರೂ. ಸಾಲ ನೀಡುವ ಗುರಿ ಹೊಂದಿದ್ದು, ಸುಮಾರು 20 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿದೆ. ಅದೇ ರೀತಿ ಈ ವರ್ಷವೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಸಾಲ ವಿತರಿಸಲಾಗುವುದು. ರೈತರಿಗೆ 50,000 ರೂ. 1 ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡುವ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಈ ಬಗ್ಗೆ ಶೀಘ್ರವೇ ಸಭೆ ನಡೆಸಿ ಸಾಲ ಮನ್ನಾ ಸಮರ್ಪಕ ಜಾರಿಗೆ ಕ್ರಮ ಕೈಗೊಳ್ಳುವುದಾಗಿ” ಸಚಿವರು ಹೇಳಿದ್ದಾರೆ.

Post a Comment

Previous Post Next Post
CLOSE ADS
CLOSE ADS
×