ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಅಧಿವೇಶನ ಬಳಿಕ ತಜ್ಞರೊಂದಿಗೆ ಸಭೆ ನಡೆಸುತ್ತೇನೆ; ಸಿಎಂ ಸಿದ್ದರಾಮಯ್ಯ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಅಧಿವೇಶನ ಬಳಿಕ ತಜ್ಞರೊಂದಿಗೆ ಸಭೆ ನಡೆಸುತ್ತೇನೆ; ಸಿಎಂ ಸಿದ್ದರಾಮಯ್ಯ

 ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಬಜೆಟ್‌ ಅಧಿವೇಶನದ ಬಳಿಕ ಕಾನೂನು ಮತ್ತು ಸಂವಿಧಾನ ತಜ್ಞರೊಂದಿಗೆ ಸಭೆ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭರವಸೆ ನೀಡಿದರು.



ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಒದಗಿಸುವಂತೆ ಕೋರಿ ಕೂಡಲಸಂಗಮ ಪಂಚಮಸಾಲಿ ಮಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಕಾಂಗ್ರೆಸ್‌ ಶಾಸಕರ ನಿಯೋಗವು ನಿನ್ನೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಹಿಂದಿನ ಸರ್ಕಾರ ಮೀಸಲಾತಿ ವಿಚಾರದಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಗೊಂದಲ ಸೃಷ್ಟಿಸಿದೆ. ಮೀಸಲಾತಿ ಸಾಂವಿಧಾನಿಕವಾಗಿ ಊರ್ಜಿತ ಆಗುವುದಿಲ್ಲ ಎಂದು ಬಿಜೆಪಿಗೆ ಮೊದಲೇ ಗೊತ್ತಿತ್ತು. ಆದರೂ, ಪಂಚಮಸಾಲಿ ಸಮುದಾಯಕ್ಕೆ ಮೂಗಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರಿದೆ ಎಂದು ಕಿಡಿಕಾರಿದರು.

ಬಳಿಕ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳ ಭೇಟಿ ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಕುಮಾರಕೃಪ ಅತಿಥಿಗೃಹದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿತು.

ಈ ವೇಳೆ ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ಪಂಚಮಸಾಲಿ ಪಟ್ಟಿಗೆ ಸೇರಿಸಬೇಕು ಎಂದು ಮನವಿ ಮಾಡಿದರು.


Post a Comment

Previous Post Next Post
CLOSE ADS
CLOSE ADS
×