ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಬಿ.ಇ/ಬಿ.ಟೆಕ್/ಬಿಎಸ್ಸಿ / ಬಿಸಿಎ ಹಾಗೂ ಎಂಸಿಎ / ಎಂಎಸ್ಸಿ ಪದವೀದರರಿಗೆ 6 ತಿಂಗಳ ಡಿಪ್ಲೊಮ ಕೋರ್ಸ್ ಅನ್ನು ಉಚಿತವಾಗಿ ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಮಹತ್ವದ ಮಾಹಿತಿಯೊಂದನ್ನ ನೀಡಿದೆ. ರಾಜ್ಯ ಸರ್ಕಾರದಿಂದ ಉಚಿತವಾಗಿ ನೀಡಲಾಗುವ ಆರು ತಿಂಗಳ ಡಿಪ್ಲೊಮ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
ಹೌದು, ಈ ಕರಿತು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರದಿಂದ ಉಚಿತವಾಗಿ ನೀಡಲಾಗುವ ಆರು ತಿಂಗಳ ಡಿಪ್ಲೊಮ ಕೋರ್ಸ್ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದೆ.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಬಿ.ಇ/ಬಿ.ಟೆಕ್/ಬಿಎಸ್ಸಿ / ಬಿಸಿಎ ಹಾಗೂ ಎಂಸಿಎ / ಎಂಎಸ್ಸಿ ಪದವೀದರರಿಗೆ 6 ತಿಂಗಳ ಡಿಪ್ಲೊಮ ಕೋರ್ಸ್ ಅನ್ನು ಉಚಿತವಾಗಿ ನೀಡಲಾಗುತ್ತದೆ
ಸದರಿ ಕೋರ್ಸ್ ಅವಧಿಯಲ್ಲಿ ಮಾಸಿಕ ರೂ. 10,000/- ಗಳ ಶಿಷ್ಯವೇತನವನ್ನು ನೀಡಲಾಗುತ್ತದೆ. ಇದರ ಜತೆಗೆ ವಿಫಲ ಉದ್ಯೋಗಾವಕಾಶಗಳನ್ನಿ ಸಹ ನೀಡಲಾಗುತ್ತದೆ.
ಈ ಹಿನ್ನಲೆಯಲ್ಲಿ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲಾ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗು ಈಗಾಗಲೇ ಅಂತಿಮ ವರ್ಷ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳ ಗಮನಕ್ಕೆ ತರಲು ಸೂಚಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಕೂಡಲೇ ಕ್ರಮವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.
ಆರು ತಿಂಗಳ ಡಿಪ್ಲೊಮ ಕೋರ್ಸ್‌ಗೆ ಸೇರ ಬಯಸುವ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ನಿಮ್ಮ ತಾಲೂಕು ಹಾಗು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ.