ಸಮಾಜಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ ಸಿಗಲಿದೆ 20 ರಿಂದ 35 ಸಾವಿರ ಪ್ರೈಜ್ ಮನಿ

SVR Creations
0

 ಪ್ರಸಕ್ತ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ವಿವಿಧ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.



2023ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31, 2023 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್‌ sw.kar.nic.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.


ಅರ್ಜಿ ಸಲ್ಲಿಸಲುಆಗಸ್ಟ್ 31 ಕೊನೆಯ ದಿನವಾಗಿದ್ದು, ಈ ದಿನಾಂಕದೊಳೆಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಇಲಾಖೆ ತಿಳಿಸಿದೆ. ಆನ್‌ಲೈನ್‌ ಅರ್ಜಿಗಳನ್ನು ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ

ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ, ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ sw.kar.nic.in ಗೆ ಭೇಟಿ ನೀಡಿ.

ಮುಖಪುಟದಲ್ಲಿ ಮೆಟ್ರಿಕ್ ನಂತರದ ಪ್ರೋತ್ಸಾಹಧನ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಆಗ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ. ಅಲ್ಲಿ ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಂತರ ಅಲ್ಲಿ ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.

ಅಂಕಪಟ್ಟಿ, ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಬುಕ್‌ ಪ್ರತಿ, ಫೋಟೋಗಳನ್ನು ಅಪ್‌ ಲೋಡ್‌ ಮಾಡಿ.

ಅರ್ಜಿ ಸಲ್ಲಿಸದ ಮೇಲೆ ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.

ಕೋರ್ಸ್‌ ಅನುಸಾರ ಪ್ರೋತ್ಸಾಹಧನದ ವಿವರ

ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್‌ ಡಿಪ್ಲೊಮ ವಿದ್ಯಾರ್ಥಿಗಳಿಗೆ - ರೂ. 20,000/-.

ಪದವಿ ವಿದ್ಯಾರ್ಥಿಗಳಿಗೆ - ರೂ. 25,000 /-.

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ - ರೂ. 30,000/-.

ಅಗ್ರಿಕಲ್ಚರ್‌, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ - ರೂ.35,000/-


Post a Comment

0 Comments
* Please Don't Spam Here. All the Comments are Reviewed by Admin.
Post a Comment (0)

#buttons=(Accept !) #days=(20)

Our website uses cookies to enhance your experience. Learn More
Accept !
To Top