ವಿದ್ಯಾರ್ಥಿಗಳಿಗೆ ಸಿಗಲಿದೆ 20 ರಿಂದ 35 ಸಾವಿರ ಪ್ರೋತ್ಸಾಹಧನ..ಅರ್ಜಿ ಸಲ್ಲಿಸುವುದು ಹೇಗೆ?

ವಿದ್ಯಾರ್ಥಿಗಳಿಗೆ ಸಿಗಲಿದೆ 20 ರಿಂದ 35 ಸಾವಿರ ಪ್ರೋತ್ಸಾಹಧನ..ಅರ್ಜಿ ಸಲ್ಲಿಸುವುದು ಹೇಗೆ?

 ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ವಿವಿಧ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.



ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ

2023ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನವನ್ನು ನೀಡಲಾಗುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಈ ಪ್ರೋತ್ಸಾಹಧನಕ್ಕೆ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31, 2023ರ ವರೆಗೆ ಅವಕಾಶವಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ sw.kar.nic.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಈ ದಿನಾಂಕದೊಳೆಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಸಮಾಕ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಆನ್‌ಲೈನ್‌ ಅರ್ಜಿಗಳನ್ನು ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದ್ದು, ಆಫ್‌ಲೈನ್ ಅರ್ಜಿಗಳಿಗೆ ಅವಕಾಶವಿಲ್ಲ

ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಒಂದು ವೇಳೆ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ, ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ

ಕೋರ್ಸ್‌ ಅನುಸಾರ 2023ರ ಪ್ರೋತ್ಸಾಹಧನದ ವಿವರ

ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್‌ ಡಿಪ್ಲೊಮ ವಿದ್ಯಾರ್ಥಿಗಳಿಗೆ - ರೂ. 20,000/-.

ಪದವಿ ವಿದ್ಯಾರ್ಥಿಗಳಿಗೆ - ರೂ. 25,000 /-.

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ - ರೂ. 30,000/-.

ಅಗ್ರಿಕಲ್ಚರ್‌, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ - ರೂ.35,000/-

2023ರ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ sw.kar.nic.in ಗೆ ಭೇಟಿ ನೀಡಿ.

ಮುಖಪುಟದಲ್ಲಿ ಮೆಟ್ರಿಕ್ ನಂತರದ ಪ್ರೋತ್ಸಾಹಧನ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಆಗ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ.

ಅಲ್ಲಿ ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಂತರ ಅಲ್ಲಿ ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.

ಅಂಕಪಟ್ಟಿ, ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಬುಕ್‌ ಪ್ರತಿ, ಫೋಟೋಗಳನ್ನು ಅಪ್‌ ಲೋಡ್‌ ಮಾಡಿ.

ಅರ್ಜಿ ಸಲ್ಲಿಸದ ಮೇಲೆ ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.


Post a Comment

Previous Post Next Post
CLOSE ADS
CLOSE ADS
×