ಸೋಮವಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ: ಸಚಿವ ಮುನಿಯಪ್ಪ

ಸೋಮವಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ: ಸಚಿವ ಮುನಿಯಪ್ಪ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ ಸೋಮವಾರದಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. 



ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸಂಜೆ ಚಾಲನೆ ನೀಡಲಿದ್ದಾರೆ. 15 ದಿನಗಳಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

 

ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜು.10 ರಂದು ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಡಿಬಿಟಿ ಗೆ ಚಾಲನೆ ನೀಡಲಿದ್ದಾರೆ. ಇದರಿಂದ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. 


ಸಚಿವರ ಪ್ರಕಾರ ರಾಜ್ಯದಲ್ಲಿ 4 ಸದಸ್ಯರನ್ನೊಳಗೊಂಡ 1.29 ಕೋಟಿ ಬಿಪಿಎಲ್ ಕಾರ್ಡ್ ಕುಟುಂಬಗಳಿದ್ದು ಒಟ್ಟು 41 ಕೋಟಿ ಫಲಾನುಭವಿಗಳಿದ್ದಾರೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆ.ಜಿ ಅಕ್ಕಿ ಕೊಡುವುದು ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳ ಪೈಕಿ ಒಂದಾಗಿತ್ತು.

 

Post a Comment

Previous Post Next Post

Top Post Ad

CLOSE ADS
CLOSE ADS
×