ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆ ಉಚಿತ: ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆ ಉಚಿತ: ಹೆಬ್ಬಾಳ್ಕರ್‌

 ಬೆಳಗಾವಿ: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು. ಅರ್ಜಿ ಸಲ್ಲಿಕೆ ಕೂಡ ಉಚಿತ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಟಾಳಕರ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದು ರೂಪಾಯಿ ಖರ್ಚಿಲ್ಲದೆ ಮಹಿಳೆಯರಿಗೆ ಹಣ ನೀಡಬೇಕೆನ್ನುವುದು ಸರ್ಕಾರದ ಉದ್ದೇಶ. ಹಾಗಾಗಿ ಅರ್ಜಿ ಸಲ್ಲಿಕೆ ಸಂಬಂಧ ಸೇವೆ ನೀಡುವ ಕೇಂದ್ರ ಮತ್ತು ವ್ಯಕ್ತಿಗಳಿಗೆ ಸರ್ಕಾರವೇ ಸೇವಾ ಶುಲ್ಕ ಎಂದು ಒಂದು ಅರ್ಜಿಗೆ 20 ರೂ. ನೀಡಲು ನಿರ್ಧರಿಸಿದೆ. ಆದ್ದರಿಂದ ಯಾರಿಗೂ ಹಣ ಕೊಡಬೇಡಿ.



ಕೆಲವು ಕಡೆ ಮಧ್ಯವರ್ತಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ಸುದ್ದಿ ನಮ್ಮ ಗಮನಕ್ಕೆ ಬಂದಿದೆ. ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದೆ ಮಹಿಳೆಯರ ಖಾತೆಗೆ ಹಣ ತಲುಪಬೇಕು ಎನ್ನುವುದು ನಮ್ಮ ಉದ್ದೇಶ. ಹೀಗಾಗಿ ಯಾರೂ ದುಡ್ಡು ಕೊಡಬಾರದು. ಅರ್ಜಿ ಸಲ್ಲಿಸಲು ಸಮಯ ಮಿತಿ ಇಲ್ಲದಿರುವುದರಿಂದ ಯಾವುದೇ ಅವಸರವಿಲ್ಲದೆ ನಿಧಾನವಾಗಿ ಅರ್ಜಿ ಹಾಕಲು ಅವಕಾಶ ನೀಡಲಾಗುವುದು. ಹಾಗಾಗಿ ಯಾರೂ ಹಣ ಕಳೆದುಕೊಳ್ಳಬಾರದು.

ಕಳೆದ ನಾಲ್ಕು ತಿಂಗಳಿನಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಾಲು ಪೌಡರ್‌ ಪೂರೈಕೆಯಾಗುತ್ತಿಲ್ಲ. ದರ ಹೆಚ್ಚಳವಾಗಿದ್ದರಿಂದ ಹಾಲು ಪೂರೈಸಲು ಸಾಧ್ಯವಿಲ್ಲ ಎಂದು ಕೆಎಂಎಫ್‌ನವರು ಪೂರೈಕೆ ಮಾಡುವುದನ್ನು ನಿಲ್ಲಿಸಿದ್ದಾರೆ. ಇದರ ಬಗ್ಗೆ ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲೇ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದರು.

Post a Comment

Previous Post Next Post

Top Post Ad

CLOSE ADS
CLOSE ADS
×