Gruhalakshmi – ಗೃಹಲಕ್ಷ್ಮಿ ಯೋಜನೆಯ ಪ್ರಜಾಪ್ರತಿನಿಧಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ಇಲ್ಲಿದೆ

Gruhalakshmi – ಗೃಹಲಕ್ಷ್ಮಿ ಯೋಜನೆಯ ಪ್ರಜಾಪ್ರತಿನಿಧಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ಇಲ್ಲಿದೆ

 ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಸಹಾಯ ಮಾಡಲು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಕರೆಯಲಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಸರ್ಕಾರವು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಪ್ರಜಾ ಪ್ರತಿನಿಧಿಗಳಾಗಲು ಅರ್ಜಿಗಳನ್ನು ಹೇಗೆ ಸಲ್ಲಿಸಬೇಕು?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ



ಮನೆಯ ಯಜಮಾನಿಗೆ 2 ಸಾವಿರ ರೂ. ನಗದು ನೀಡುವ ಗೃಹಲಕ್ಷ್ಮೀ ಯೋಜನೆಗೆ(ಗೃಹಳಕ್ಷ್ಮಿ scheme) ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಸಹಾಯ ಮಾಡಲೆಂದು ಪ್ರಜಾ ಪ್ರತಿನಿಧಿನೇಮಕ ಮಾಡಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ. ಈ ಸಂಬಂಧ ಸರಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಪ್ರಜಾಪ್ರತಿನಿಧಿಗಳಿಗೆ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಓರ್ವ ಮಹಿಳೆ ಸೇರಿದಂತೆ ಪ್ರತಿ 1 ಸಾವಿರ ಜನರಿಗೆ ಅಥವಾ ಒಂದು ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿ ನೇಮಕ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿ ನೇಮಕಕ್ಕೆ ನಿರ್ಧರಿಸಿದ್ದು, ಗೃಹಲಕ್ಷ್ಮಿ ಯೋಜನೆಯ ಅರ್ಜಿದಾರರು ಗ್ರಾಮ್ ಒನ್(Grama one), ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್‌ಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

ಈ ಪ್ರಜಾಪ್ರತಿನಿಧಿಗಳು ಏನು ಮಾಡುತ್ತಾರೆ?:


ಆಯ್ಕೆಯಾದ ಪ್ರಜಾ ಪ್ರತಿನಿಧಿಗಳು ಮನೆ ಮನೆಗೆ ತೆರಳಿ ತಂತ್ರಜ್ಞಾನದಲ್ಲಿ ಅಡೆತಡೆಗಳನ್ನು ಎದುರಿಸುತ್ತಿರುವ ನಾಗರಿಕರಿಗೆ ಸಹಾಯವನ್ನು ಮಾಡುತ್ತಾರೆ.

ಹಾಗೆಯೇ ನಾಗರಿಕರ ಪರವಾಗಿ ಇವರು ಅರ್ಜಿಗಳನ್ನು ಸಲ್ಲಿಸುತ್ತಾರೆ. ಇದನ್ನು ಪ್ರಜಾಪ್ರತಿನಿಧಿಗಳು ಸ್ವಯಂ ಪ್ರೇರಣೆಯಿಂದ ಮಾಡುತ್ತಿದ್ದು ನಾಗರಿಕರು ಅವರಿಗೆ ಯಾವುದೇ ರೀತಿಯ ಶುಲ್ಕವನ್ನು ಪಾವತಿಸುವ ಅವಶ್ಯಕತೆ ಇಲ್ಲ. ಸರ್ಕಾರವು ಆಯ್ಕೆಯಾದ ಪ್ರಜಾಪ್ರತಿನಿಧಿಗಳಿಗೆ ಗೌರವ ಶುಲ್ಕವನ್ನು ನೀಡುತ್ತದೆ.

ಪ್ರಜಾಪ್ರತಿನಿಧಿಗಳ ಆಯ್ಕೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಮೊದಲಿಗೆ ಸೇವಾ ಸಿಂಧುವಿನ ಸಿಟಿಜನ್ ಪೋರ್ಟಲ್ ಗೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.


https://sevasindhugs1.karnataka.gov.in/gl-sp/


ಸೂಚನೆ : ಈ ಲಿಂಕ್ ಮೂಲಕ ಮಾತ್ರ ಲಾಗಿನ್ ಆದರೆ ನಿಮಗೆ ಗೃಹಲಕ್ಷ್ಮಿ ಪ್ರಜಾ ಪ್ರತಿನಿಧಿಯ ಅರ್ಜಿ ನಮೂನೆ ಕಾಣಿಸುತ್ತದೆ


ಹಂತ 2: ನಂತರ ನಿಮ್ಮ ಸೇವಾ ಸಿಂಧುವಿನ ಅಕೌಂಟಿನ ಸಿಟಿಜನ್ ಲಾಗಿನ್ ಐಡಿ ಗಳನ್ನು ಹಾಕಿ ಕೇಳಲಾದ ಕೋಡನ್ನು ನೋಂದಣಿ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.

ಹಂತ 3: ಲಾಗಿನ್ ಆದ ನಂತರ, Apply for services ಎಂಬ ಆಯ್ಕೆಯ ಅಡಿಯಲ್ಲಿ view all available services ಎಂಬ ಆಕೆಯನ್ನು ಮಾಡಿಕೊಳ್ಳಿ. ನಂತರ ಗೃಹಲಕ್ಷ್ಮಿ ಸಿವಿ ಎನ್ರೋಲ್ಮೆಂಟ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ

ಹಂತ 5: ನಂತರ ಅರ್ಜಿ ನಮೂನೆ ತೆರೆಯುತ್ತದೆ ಅದರಲ್ಲಿ ಅರ್ಜಿದಾರರ ಮೊಬೈಲ್ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸುವವರ ವಿವರಗಳನ್ನು ಭರ್ತಿ ಮಾಡಿ.

ಹಂತ 6: ನಂತರ ಕೆಳಗಿನ ಭಾಗದ ಘೋಷಣೆಯಲ್ಲಿ ಐ ಅಗ್ರಿ ಎಂಬ ಚೆಕ್ ಬಾಕ್ಸ್ ಮೇಲೆ ಚೆಕ್ ಮಾಡಿ.

ಹಂತ 7: ನಂತರ ವೆರಿಫಿಕೇಶನ್ ಕೋಡನ್ನು ನೋಂದಣಿ ಮಾಡಿ ಅರ್ಜಿಯನ್ನು ಸಲ್ಲಿಸಿ.

ಅರ್ಜೆಗಳನ್ನು ಸಲ್ಲಿಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಸಾವಿರ ಜನಸಂಖ್ಯೆಗಿಂತ ಕಡಿಮೆ ಅಥವಾ ಅದಕ್ಕೆ ಸಮನಾದ ಪ್ರತಿ ಗ್ರಾಮಕ್ಕೆ ಎರಡು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ನೀವೇನಾದರೂ ಪ್ರಜಾಪ್ರತಿನಿಧಿಗಳಾಗಲು ಬಯಸಿದರೆ, ಮೇಲಿನ ಹಂತಗಳನ್ನು ಅನುಸರಿಸಿಕೊಂಡು ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು

Post a Comment

Previous Post Next Post
CLOSE ADS
CLOSE ADS
×