Honor 90: ಭಾರತಕ್ಕೆ ಬರುತ್ತಿದೆ 200MP ಕ್ಯಾಮೆರಾದ ಮತ್ತೊಂದು ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು?

ಅಪರೂಪಕ್ಕೆ ಆಕರ್ಷಕ ಮೊಬೈಲ್​ಗಳನ್ನು ಪರಿಚಯಿಸುವ ಪ್ರಸಿದ್ಧ ಹಾನರ್‌ ಕಂಪನಿ ಕ್ಯಾಮೆರಾ ಪ್ರಿಯರಿಗಾಗಿ 200 ಮೆಗಾಪಿಕ್ಸೆಲ್​ನ ಹೊಸ ಹಾನರ್‌ 90 ಸ್ಮಾರ್ಟ್‌ಫೋನ್ ಅನಾವರಣ ಮಾಡಲು ಸಜ್ಜಾಗಿದೆ. ಸೆಪ್ಟೆಂಬರ್​ನಲ್ಲಿ ಈ ಫೋನ್ ಭಾರತದಲ್ಲಿ ಅನಾವರಣಗೊಳ್ಳಲಿದೆ.






ಟೆಕ್ ಮಾರುಕಟ್ಟೆಯಲ್ಲಿ ಕ್ಯಾಮೆರಾ ಫೋನ್​ಗಳ ನಡುವಣ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇತ್ತೀಚೆಗಷ್ಟೆ ರಿಯಲ್ ಮಿ ತನ್ನ 11 ಪ್ರೋ+ ಫೋನಿನಲ್ಲಿ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಸ್ಮಾರ್ಟ್​ಫೋನ್ ಅನಾವರಣ ಮಾಡಿತ್ತು. ಇದೀಗ ಹಾನರ್ ಸರದಿ.

ಅಪರೂಪಕ್ಕೆ ಆಕರ್ಷಕ ಮೊಬೈಲ್​ಗಳನ್ನು ಪರಿಚಯಿಸುವ ಪ್ರಸಿದ್ಧ ಹಾನರ್‌ ಕಂಪನಿ ಕ್ಯಾಮೆರಾ ಪ್ರಿಯರಿಗಾಗಿ 200 ಮೆಗಾಪಿಕ್ಸೆಲ್​ನ ಹೊಸ ಹಾನರ್‌ 90 ಸ್ಮಾರ್ಟ್‌ಫೋನ್ ಅನಾವರಣ ಮಾಡಲು ಸಜ್ಜಾಗಿದೆ. ಸೆಪ್ಟೆಂಬರ್​ನಲ್ಲಿ ಈ ಫೋನ್ ಭಾರತದಲ್ಲಿ ಅನಾವರಣಗೊಳ್ಳಲಿದೆ.

ಹಾನರ್‌ 90 ಫೋನಿನ ಬೆಲೆ ಬಹಿರಂಗಗೊಂಡಿಲ್ಲ. ಆದರೆ, ಇತ್ತೀಚೆಗಷ್ಟೆ ವಿದೇಶದಲ್ಲಿ ಬಿಡುಗಡೆ ಆಗಿದ್ದ ಈ ಫೋನಿನ 12GB RAM + 256GB ಸ್ಟೋರೇಜ್ ಆಯ್ಕೆಗೆ CNY 2,499 ಅಂದರೆ ಇದರ ಬೆಲೆ ಭಾರತದಲ್ಲಿ ಅಂದಾಜು 29,160 ರೂ. ಎನ್ನಬಹುದು.

ಹಾನರ್‌ 90 ಸ್ಮಾರ್ಟ್‌ಫೋನ್‌ 1,200x 2,664 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. 120Hz ನ ರಿಫ್ರೆಶ್ ರೇಟ್‌ ಪಡೆದುಕೊಂಡಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 7 Gen 1 ಪ್ರೊಸೆಸರ್‌ ನೀಡಲಾಗಿದ್ದು, ಆಂಡ್ರಾಯ್ಡ್‌13 ಆಧಾರಿತ ಮ್ಯಾಜಿಕ್‌ಒಎಸ್‌ 7.1 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಹಾನರ್‌ 90 ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಎರಡೂ ಸ್ಮಾರ್ಟ್‌ಫೋನ್‌ಗಳಲ್ಲಿ ನೀಡಲಾಗಿದೆ.

ಹಾನರ್‌ 90 ದೀರ್ಘ ಸಮಯ ಬಾಳಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿವೆ. ಇದು 66W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ.

ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G ಸಪೋರ್ಟ್ ಮಾಡುತ್ತದೆ. ಉಳಿದಂತೆ 4G, Wi-Fi 6, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸುತ್ತದೆ.

Previous Post Next Post