DWDSC Karnataka Recruitment 2023:
ಕರ್ನಾಟಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ (Department for the Empowerment of Differently Abled and Senior Citizens Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ರಾಜ್ಯ ಕೋ-ಆರ್ಡಿನೇಟರ್ (State Co-Ordinator) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. DWDSC ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ, ಜುಲೈ 24, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್ (Offline) ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ
ಹುದ್ದೆ ರಾಜ್ಯ ಕೋ-ಆರ್ಡಿನೇಟರ್
ಒಟ್ಟು ಹುದ್ದೆ 1
ವಿದ್ಯಾರ್ಹತೆ ಪದವಿ
ವೇತನ ತಿಂಗಳಿಗೆ 50,000 ರೂ.
ಉದ್ಯೋಗದ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 24, 2023
ಶೈಕ್ಷಣಿಕ ಅರ್ಹತೆ:
ಕರ್ನಾಟಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಕಂಪ್ಯೂಟರ್ ಸೈನ್ಸ್/ ಐಟಿಯಲ್ಲಿ ಡಿಪ್ಲೊಮಾ, ಕಂಪ್ಯೂಟರ್ ಎಜುಕೇಷನ್ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 24, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಕರ್ನಾಟಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 50,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಕರ್ನಾಟಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕರ ಕಛೇರಿ
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
ಪೋಡಿಯಂ ಬ್ಲಾಕ್
ವಿ.ವಿ ಟವರ್
ಡಾ. ಬಿ.ಆರ್. ಅಂಬೇಡ್ಕರ್ ವೇದಿಕೆ
ಬೆಂಗಳೂರು-560001
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/07/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 24, 2023
ಇನ್ನೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22866066, 22860907 ಗೆ ಕರೆ ಮಾಡಿ.