Ration Card Aadhar Link : ಉಚಿತ ಅಕ್ಕಿ ಜೊತೆ 170 ರೂ ಪಡೆಯಲು ರೇಷನ್ ಕಾರ್ಡ್ ನೊಂದಿಗೆ ಆಧಾರ್ ಲಿಂಕ್ ಮಾಡುವ ಸುಲಭ ವಿಧಾನ

Ration Card Aadhar Link : ಉಚಿತ ಅಕ್ಕಿ ಜೊತೆ 170 ರೂ ಪಡೆಯಲು ರೇಷನ್ ಕಾರ್ಡ್ ನೊಂದಿಗೆ ಆಧಾರ್ ಲಿಂಕ್ ಮಾಡುವ ಸುಲಭ ವಿಧಾನ

 ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಆಧಾರ್ ಕಾರ್ಡ್(Aadhar card)ನೊಂದಿಗೆ ಪಡಿತರ ಚೀಟಿ(ration card)ಯನ್ನು ಲಿಂಕ್ ಮಾಡುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. 

ನಿಮಗೆಲ್ಲರಿಗೂ ತಿಳಿದಿರುವಂತೆ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಲಿಂಕ್ ಆಗುವುದು ಕಡ್ಡಾಯವಾಗಿದೆ. ನಿಮ್ಮ ಆಧಾರ್ ಕಾರ್ಡ್ ರೇಷನ್ ಕಾರ್ಡ್ ನೊಂದಿಗೆ ಈಗಾಗಲೇ ಲಿಂಕ್ ಆಗಿದೆಯೇ?, ಅದರ ಸ್ಟೇಟಸ್ ಅನ್ನು ಹೇಗೆ ಚೆಕ್ ಮಾಡುವುದು?, ಆಧಾರ್ ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ



ಆಧಾರ್-ರೇಷನ್ ಕಾರ್ಡ್ ಲಿಂಕ್ ಏಕೆ ಮಾಡಬೇಕು?:


ರಾಜ್ಯ ಮತ್ತು ಕೇಂದ್ರ ಸರ್ಕಾರ ಪಡಿತರ ಚೀಟಿ ವಿಚಾರದಲ್ಲಿ ಕಟ್ಟುನಿಟಿನ ನಿಯಮಗಳನ್ನು ಜಾರಿಗೊಳಿಸಿದೆ. ಉಚಿತ ಅಂತ್ಯೋದಯ ಅನ್ನ ಯೋಜನೆ ಯೋಜನೆಯನ್ನು ಪಡೆಯಲು ಆಧಾರ್‌ನೊಂದಿಗೆ ಪಡಿತರ ಚೀಟಿಯನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆಧಾರ್-ಪಡಿತರ ಚೀಟಿ ಲಿಂಕ್ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30 ಕೊನೆಯ ದಿನಾಂಕವಾಗಿತ್ತು. ಇದೀಗ ಈ ಗಡುವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡುವ ಮೂಲಕ, ವ್ಯಕ್ತಿಗಳು ಬಹು ಪಡಿತರ ಚೀಟಿಗಳನ್ನು ಪಡೆಯುವ ನಿದರ್ಶನಗಳಿಗೆ ಸರ್ಕಾರವು ಕಡಿವಾಣ ಹಾಕಲು ಸಾಧ್ಯವಾಗುತ್ತದೆ. ಅವರ ಆದಾಯವು ಪಡಿತರ ಮಿತಿಗಿಂತ ಹೆಚ್ಚಿರುವುದರಿಂದ ಪಡಿತರಕ್ಕೆ ಅನರ್ಹರಾಗಿರುವ ವ್ಯಕ್ತಿಗಳನ್ನು ತಡೆಯಲು ಸರ್ಕಾರಕ್ಕೆ ಸಾಧ್ಯವಾಗುತ್ತದೆ

ಆನ್ಲೈನ್ ನಲ್ಲಿ ಆಧಾರ್- ರೇಷನ್ ಕಾರ್ಡ್ ಲಿಂಕ್ ಮಾಡುವ ವಿಧಾನ :


ಹಂತ 1: ಮೊದಲಿಗೆ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ಪುಟ ತೆರೆದ ಮೇಲೆ ಇ-ಸೇವೆಗಳು ಎಂಬ ಆಯ್ಕೆಯನ್ನು ಮಾಡಿ ನಂತರ ಇ -ಪಡಿತರ ಚೀಟಿಯಲ್ಲಿ ಯು ಐ ಡಿ ಲಿಂಕ್ ಮಾಡಿ ಎಂಬ ಆಯ್ಕೆಯನ್ನು ಮಾಡಿ.

ಹಂತ 3: ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು, UID ಲಿಂಕಿಂಗ್ ಫಾರ್ RC ಮೆಂಬರ್ಸ್ ಎಂಬ ಆಯ್ಕೆಯನ್ನು ಮಾಡಿಕೊಳ್ಳಿ.

ಹಂತ 4: ನಂತರ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ನಮೂದಿಸಿ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ

ಹಂತ 5: ಮುಂದುವರೆದು ನೀವು ನೋಂದಾಯಿಸಿದ ಮೊಬೈಲ್ ನಂಬರಿಗೆ ಓಟಿಪಿಯು ಬರುತ್ತದೆ ಅದನ್ನು ಹಾಕಿ ಗೋ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ

ಹಂತ 6: ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ನಮೂದಿಸಿ ಸಬ್ಮಿಟ್ ಮಾಡಿ


ಹಂತ 7: ಹೀಗೆ ಮಾಡುವುದರಿಂದ ಕೊನೆಯದಾಗಿ ನಿಮಗೆ ಲಿಂಕ್ ಆಗಿರುವ ನೋಟಿಫಿಕೇಶನ್ ಬರುತ್ತದೆ

ಆಧಾರ್-ರೇಷನ್ ಕಾರ್ಡ್ ಲಿಂಕ್ ಆಗಿದೆಯೇ ಎಂಬ ಸ್ಟೇಟಸ್ ಚೆಕ್ ಮಾಡುವುದು ಹೇಗೆ?:

ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಿ :https://ahara.kar.nic.in/Home/EServices

ಹಂತ 2: ನಂತರ ಪುಟ ತೆರೆದ ಮೇಲೆ ಇ-ಸೇವೆಗಳು ಎಂಬ ಆಯ್ಕೆಯನ್ನು ಮಾಡಿ

ಹಂತ 3: ಮುಂದುವರೆದು ಇ-ಸ್ಥಿತಿ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ಅದರಲ್ಲಿ ನೀವು ಹೊಸ ಅಥವಾ ಹಾಲಿ ಪಡಿತರ ಚೀಟಿ ಸ್ಥಿತಿ ಎಂಬ ಆಯ್ಕೆಯನ್ನು ಮಾಡಿಕೊಳ್ಳಿ

ಹಂತ 4: ನಂತರ ನಿಮ್ಮ ಜಿಲ್ಲೆಯನ್ನು ಹೊಂದಿದ ಲಿಂಕ್ ಬರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.

ನಂತರ ಪಡಿತರ ಚೀಟಿ ವಿವರ ಆಪ್ಷನ್ ಮೇಲೆ ಕ್ಲಿಕ್ ಮಾಡಿ

ನಂತರ with out OTP ಆಪ್ಷನ್ ಸೆಲೆಕ್ಟ್ ಮಾಡಿಕೊಂಡು ಮುಂದುವರೆಯಿರಿ

ಹಂತ 5: ಸ್ಟೇಟಸ್ ಆಫ್ ರೇಶನ್ ಕಾರ್ಡ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ. ಹೀಗೆ ನೀವು ನಿಮ್ಮ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿರುವ ಸ್ಟೇಟಸ್ ಅನ್ನು ನೋಡಬಹುದು

ರೇಷನ್ ಹಾಗೂ ಆಧಾರ್ ಕಾರ್ಡನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ ಹಾಗೆಯೇ ಲಿಂಕ್ ಮಾಡುವ ದಿನಾಂಕವನ್ನು ಸೆಪ್ಟೆಂಬರ್ 30ಕ್ಕೆ ವಿಸ್ತರಿಸಲಾಗಿದೆ. ಎಲ್ಲರಿಗೂ ಅವಶ್ಯವಿರುವ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು

Post a Comment

Previous Post Next Post
CLOSE ADS
CLOSE ADS
×