ನೇಕಾರರ ವಿಶೇಷ ಯೋಜನೆಯಡಿ ವಿದ್ಯುತ್‌ ಪೂರೈಕೆ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ ಭರವಸೆ

ನೇಕಾರರ ವಿಶೇಷ ಯೋಜನೆಯಡಿ ವಿದ್ಯುತ್‌ ಪೂರೈಕೆ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ ಭರವಸೆ

 

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು (ಜುಲೈ 24) ನೇಕಾರರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.






ನೇಕಾರರ ವಿಶೇಷ ಯೋಜನೆಯಡಿ ವಿದ್ಯುತ್‌ ಪೂರೈಕೆ ಮುಂದುವರಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭರವಸೆ ನೀಡಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು (ಜುಲೈ 24) ನೇಕಾರರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.


ತಪಸಿಹಳ್ಳಿ ದಿವ್ಯಜ್ಞಾನಾಂದಶ್ರೀ, ಬಾಗಲಕೋಟೆ ಜಿಲ್ಲೆ ನೀರಲಕೇರಿ ಸಿದ್ಧಾರೂಢ ಮಠದ ಘನಲಿಂಗಶ್ರೀ, ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಹಂಪಿ ಗಾಯತ್ರಿ ಪೀಠದ ದಯಾನಂದ ಪುರಿ ಶ್ರೀಗಳ ನೇತೃತ್ವದ ನೇಕಾರರ ನಿಯೋಗವು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂತರಾಜ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.


ತಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವನ್ನೂ ನೀಡುವಂತೆ ನಿಯೋಗ ಮನವಿ ಮಾಡಿಕೊಂಡಿದ್ದು, ಒಕ್ಕೂಟಕ್ಕೆ ಬೆಂಗಳೂರು ಮಹಾನಗರದಲ್ಲಿ ನಿವೇಶನ ನೀಡುವುದು, ಕಾಂತರಾಜ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿಕೊಂಡಿದೆ.



ಬೇಡಿಕೆಗಳ ಪೈಕಿ 1.25 ರೂ. ದರದಲ್ಲಿ ವಿದ್ಯುತ್‌ ಪೂರೈಕೆಯ ಯೋಜನೆ ಮುಂದುವರಿಕೆ ಮಾಡುವುದಾಗಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಇದಲ್ಲದೆ 10 ಹೆಚ್​ಪಿ ವರೆಗಿನ ಘಟಕಗಳಿಗೆ 250 ಯುನಿಟ್‌ ವರೆಗೆ ಉಚಿತ ವಿದ್ಯುತ್‌ ಒದಗಿಸಲು ಆಯವ್ಯಯದಲ್ಲಿ ಘೋಷಿಸಲಾಗಿದ್ದು, ಶೀಘ್ರವೇ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದರು.

Post a Comment

Previous Post Next Post
CLOSE ADS
CLOSE ADS
×