ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.. ಅರ್ಜಿಗೆ ಜುಲೈ 30 ಕೊನೆ ದಿನ

ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.. ಅರ್ಜಿಗೆ ಜುಲೈ 30 ಕೊನೆ ದಿನ

 Vidyadhan scholarship application deadline: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣಕ್ಕೆ ಬೆಂಬಲಿಸಲು ಸರೋಜಿನಿ ದಾಮೋದರನ್ ಫೌಂಡೇಷನ್ 'ವಿದ್ಯಾಧನ್' ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿವೇತನಕ್ಕೆ 10ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.



ಸರೋಜಿನಿ ದಾಮೋದರನ್ ಪ್ರತಿಷ್ಠಾನದ ವತಿಯಿಂದ 2023-24ನೇ ಸಾಲಿನ 'ವಿದ್ಯಾಧನ್" ವಿದ್ಯಾರ್ಥಿವೇತನಕ್ಕೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣಕ್ಕೆ ಬೆಂಬಲಿಸಲು ಸರೋಜಿನಿ ದಾಮೋದರನ್ ಫೌಂಡೇಷನ್ 'ವಿದ್ಯಾಧನ್' ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.


ಈ ವಿದ್ಯಾರ್ಥಿವೇತನಕ್ಕೆ 10ನೇ ತರಗತಿಯಲ್ಲಿ ಉತ್ತೀರ್ಣರಾದ, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಮೇಲೆ ವಿದ್ಯಾರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ಪದವಿಯವರೆಗೂ ವಿದ್ಯಾರ್ಥಿವೇತನವನ್ನು ಮುಂದುವರೆಸಲಾಗುವುದು

ಯಾರು ಅರ್ಜಿ ಸಲ್ಲಿಸಲು ಅರ್ಹರು

ಮಾನ್ಯತೆ ಪಡೆದ ಶಾಲೆಗಳಿಂದ SSLC/ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡ 90 ರಷ್ಟು ಅಂಕಗಳನ್ನು ಪಡೆದಿರಬೇಕು.

ಎಲ್ಲಾ ಮೂಲಗಳಿಂದ ಕುಟುಂಬದ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು. ವಿಕಲಚೇತನ ವಿದ್ಯಾರ್ಥಿಗಳಿಗೆ 75% ರಷ್ಟು ಅಂಕಪಡೆದಿರಬೇಕು.

ಸರೋಜಿನಿ ದಾಮೋಧರನ್ ಫೌಂಡೇಷನ್ ವಿದ್ಯಾರ್ಥಿಗಳು ಒದಗಿಸಿದ ಶೈಕ್ಷಣಿಕ ಸಾಧನೆ ಹಾಗೂ ಅರ್ಜಿಯ ಮಾಹಿತಿಯನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ಮಾಡಲಾಗುತ್ತದೆ.


ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಕೋರ್ಸ್‌ಗೆ ಅನುಗುಣವಾಗಿ ವಾರ್ಷಿಕ ರೂ. 10,000 ದಿಂದ ರೂ. 60,000 ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 31-07-2023.

ಪರೀಕ್ಷೆ/ ಸಂದರ್ಶನ ದಿನಾಂಕ - 20-08-2023.

ಪರೀಕ್ಷೆ ಹಾಗೂ ಸಂದರ್ಶನ ನಡೆಯುವ ಸ್ಥಳ ಮತ್ತು ದಿನಾಂಕವನ್ನು ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ತಿಳಿಸಲಾಗುವುದು.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು

ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ.

10ನೇ ತರಗತಿ ಪರೀಕ್ಷೆಯ ಅಂಕ ಪಟ್ಟಿ.

ಆದಾಯ ಪ್ರಮಾಣ ಪತ್ರ.

ವಿಕಲಚೇತನ ದೃಡಿಕರಣ ಪತ್ರ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಇ-ಮೇಲ್ ಐಡಿ ಮೂಲಕ ವಿದ್ಯಾದನ್ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ ಅರ್ಜಿ ಸಲ್ಲಿಸಬೆಕು. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://www.vidyadhan.org/apply

Post a Comment

Previous Post Next Post
CLOSE ADS
CLOSE ADS
×