ಗೃಹಲಕ್ಷ್ಮೀ ಯೋಜನೆಗೆ ಶೇ.86 ರಷ್ಟು ಯಜಮಾನಿಯರು ನೋಂದಣಿ! ಆ. 30ಕ್ಕೆ 2,000 ರೂ. ಜಮೆ - ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆಗೆ ಶೇ.86 ರಷ್ಟು ಯಜಮಾನಿಯರು ನೋಂದಣಿ! ಆ. 30ಕ್ಕೆ 2,000 ರೂ. ಜಮೆ - ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

 Gruha lakshmi Yojana Launch Program: ಗೃಹಲಕ್ಷ್ಮೀ ಯೋಜನೆ ಚಾಲನೆಗೆ ದಿನಗಣನೆ ಆರಂಭವಾಗಿದೆ. ಈವರೆಗೂ 1.1 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಆಗಸ್ಟ್‌ 30ರಂದು ಯೋಜನೆಗೆ ರಾಹುಲ್‌ ಗಾಂಧಿ ಚಾಲನೆ ನೀಡಲಿದ್ದು, ಅಂದೇ ಗೃಹಲಕ್ಷ್ಮೀಯರ ಖಾತೆಗೆ 2000 ರೂ. ಜಮೆಯಾಗಲಿದೆ.



ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಈವರೆಗೂ ಶೇ. 86 ರಷ್ಟು ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮಾತ್ರವಲ್ಲದೇ, ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಗೆ ಚಾಲನೆ ಸಿಗುತ್ತಿದ್ದು, ಸಮಾರಂಭದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆಕೊಟ್ಟಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರೈಸುತ್ತಿದ್ದು, ಈ 'ಗೃಹಲಕ್ಷ್ಮಿ' ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಶನಿವಾರ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಸಚಿವೆ ಮಾತನಾಡಿದರು.


1.10 ಕೋಟಿ ಮಂದಿ ಜಮೆ

ಕಾಂಗ್ರೆಸ್ ಪಕ್ಷ ಬಸವಣ್ಣನ ತತ್ವ ಸಿದ್ದಾಂತದ ಮೇಲೆ ನಿಂತಿದೆ. ಗೃಹಲಕ್ಷ್ಮಿ ಯೋಜನೆಯ 1.28 ಕೋಟಿ ಫಲಾನುಭವಿಗಳ ಪೈಕಿ ಈಗಾಗಲೇ 1.10 ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಆಗಸ್ಟ್ ತಿಂಗಳಿಂದಲೇ ಮನೆಯ ಯಜಮಾನಿಗೆ ಹಣ ಸಂದಾಯವಾಗಲಿದೆ ಎಂದರು.

ಮಹಿಳೆಯರ ಸಬಲೀಕರಣದ ದೃಷ್ಟಿಯಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತಿದ್ದು,‌ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು, ಜನ ಸಾಮಾನ್ಯರು ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು.ಗೃಹಲಕ್ಷ್ಮಿ ಯೋಜನೆ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲೂ ಯಶಸ್ವಿಯಾಗುವಂತೆ ನೋಡಿಕೊಳ್ಳೋಣ ಎಂದು ಸಚಿವರು ತಿಳಿಸಿದರು.

2,000 ಬಸ್‌ ವ್ಯವಸ್ಥೆ

‘‘ರಾಜ್ಯಾದ್ಯಂತ ಏಕಕಾಲಕ್ಕೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಆನ್‌ಲೈನ್‌ ಮೂಲಕ ಸಂವಾದಕ್ಕೂ ವ್ಯವಸ್ಥೆ ಮಾಡುತ್ತೇವೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, 2 ಸಾವಿರ ಬಸ್‌ ವ್ಯವಸ್ಥೆ ಮಾಡಲಾಗಿದೆ,’’ ಎಂದು ಸಚಿವೆ ತಿಳಿಸಿದರು.


140 ಸ್ಕ್ರೀನ್‌ ಗಳಲ್ಲಿ ಪ್ರಸಾರ

‘‘ಇದು ಕಾಂಗ್ರೆಸ್‌ ಪಕ್ಷದ ಕಾರ‍್ಯಕ್ರಮವಲ್ಲ. ಸರಕಾರಿ ಕಾರ್ಯಕ್ರಮವಾಗಿದ್ದು, ಪಕ್ಷಾತೀತವಾಗಿರಲಿದೆ. ಎಲ್ಲಾ ಪಕ್ಷಗಳ ಶಾಸಕರು ಕಾರ್ಯಕ್ರಮದಲ್ಲಿಭಾಗಿಯಾಗಿಬಹುದು. ಕಾರ್ಯಕ್ರಮ ಸ್ಥಳದಲ್ಲಿಒಂದು ಲಕ್ಷ ಚೇರ್‌ ಅಳವಡಿಸಲಾಗುತ್ತದೆ. ವೇದಿಕೆಗೆ 140 ಅಡಿ ಸ್ಕ್ರೀನ್‌ ಅಳವಡಿಸಲಾಗುತ್ತದೆ. ಎಲ್ಲಾಗೃಹಲಕ್ಷ್ಮಿ ಫಲಾನುಭವಿಗಳು ತಮ್ಮ ಮನೆ ಎದುರು ‘ನಾ ಗೃಹಲಕ್ಷ್ಮಿ’ ಹಾಗೂ ‘ನಾ ನಾಯಕಿ’ ಎಂಬ ಬರಹವನ್ನು ರಂಗೋಲಿ ಮೂಲಕ ಬರೆದುಕೊಳ್ಳಲಿದ್ದಾರೆ. ಪ್ರತಿ ಪಂಚಾಯಿತಿಗೂ ಒಬ್ಬ ನೋಡಲ್‌ ಅಧಿಕಾರಿಯನ್ನು ನೇಮಕ ಮಾಡಲಾಗಿದೆ,’’ ಎಂದು ಸಚಿವರು ತಿಳಿಸಿದರು


Post a Comment

Previous Post Next Post
CLOSE ADS
CLOSE ADS
×