ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ 4 ಗ್ಯಾರಂಟಿ ಯೋಜನೆಗಳು ಈಗಾಗಲೇ ಚಾಲನೆಗೊಂಡಿವೆ. ರಜೆ ಸರ್ಕಾರದಿಂದ ಸಾಕಷ್ಟು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಜನತೆಗೆ ಒಂದು ಶಾಕಿಂಗ್ ಸುದ್ದಿ ನೀಡಿದೆ. ರಾಜ್ಯ ಸರ್ಕಾರ ಉಚಿತವಾಗಿ ಘೋಷಿಸಿರುವ ಯೋಜನೆಗಳಲ್ಲಿ ಗೃಹ ಜ್ಯೋತಿ ಯೋಜನೆ (Gruha Jyothi Yojana) ಕೂಡ ಒಂದು ಈ ಯೋಜನೆಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸಿಗುವ ವಿಚಾರ ನಿಮಗೆಲ್ಲಾ ಗೊತ್ತಿದೆ.
ಲೋಡ್ ಶೆಡ್ಡಿಂಗ್ ಭೀತಿ:
ಗೃಹ ಜ್ಯೋತಿ ಯೋಜನೆ (Gruha Jyothi Yojana) ಯ ಅಡಿಯಲ್ಲಿ ಲಕ್ಷಾಂತರ ಕುಟುಂಬಗಳು ಒಂದೇ ಒಂದು ರೂಪಾಯಿಗಳ ಬಿಲ್ಲನ್ನು ಕೂಡ ಕಳೆದ ತಿಂಗಳಿನಿಂದ ಪಾವತಿ ಮಾಡುವ ಅಗತ್ಯ ಇಲ್ಲ ಎಷ್ಟೋ ಜನರಿಗೆ 0 ಬಿಲ್ ಬಂದಿರುವುದು ತೃಪ್ತಿ ನೀಡಿದೆ. ಆದರೆ ಈಗ ಮತ್ತೊಂದು ಶಾಕಿಂಗ್ ಸುದ್ದಿಯನ್ನು, ಸಚಿವ ಜಿ ಪರಮೇಶ್ವರ್ (G Parameshwar) ಅವರು ತಿಳಿಸಿದ್ದಾರೆ. ಶೂನ್ಯ ವಿದ್ಯುತ್ ಬಿಲ್ ಅಂದರೆ ಬಿಲ್ ನಿಂದ ಪಾವತಿಸಬೇಕಾಗಿದ್ದ ಮೊತ್ತವನ್ನು ರಾಜ್ಯ ಸರ್ಕಾರವೇ ನೋಡಿಕೊಳ್ಳಬೇಕು ಇಂತಹ ಸಂದರ್ಭದಲ್ಲಿ ವಿದ್ಯುತ್ ಇಲಾಖೆಗೆ ಇದು ಬಹಳ ದೊಡ್ಡ ಹೊರೆ ಆಗುತ್ತದೆ. ಆದ್ದರಿಂದ ಈ ಎಲ್ಲ ವಿಚಾರವನ್ನು ಸರಿದೂಗಿಸುವ ಸಲುವಾಗಿ ಲೋಡ್ ಶೆಡ್ಡಿಂಗ್ ಅನಿವಾರ್ಯ ಎಂದು ಜಯ ಪರಮೇಶ್ವರ್ ಅವರು ತಿಳಿಸಿದ್ದಾರೆ.
ಈ ವರ್ಷ ಮಳೆ ಭಾರಿ ಪ್ರಮಾಣದಲ್ಲಿ ಬಂದಿಲ್ಲ ಹಾಗಾಗಿ ವಿದ್ಯುತ್ ಉತ್ಪಾದನೆ ಮೇಲೆ ಇದು ಪರಿಣಾಮ ಬೀರುತ್ತದೆ ಜಾಸ್ತಿಯಾಗಿಲ್ಲ ಆದ್ದರಿಂದ ಲೋಡ್ ಶೆಡ್ಡಿಂಗ್ ಮಾಡುವ ಅನಿವಾರ್ಯತೆ ಇದೆ ಎಂದು ಸಚಿವರು ತಿಳಿಸಿದ್ದಾರೆ. ನಿನ್ನೆ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ತುಮಕೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ ಸಚಿವರು ಮಳೆಯ ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲಿ ಸಮಸ್ಯೆ ಆಗುತ್ತಿದೆ ಎಂಬುದನ್ನು ಜನತೆಗೆ ತಿಳಿಸಿದರು.
ಮಳೆ ಕಡಿಮೆಯಾಗಿರುವುದು ಜಲವಿದ್ಯುತ್ ಉತ್ಪಾದನೆಗೆ ಸಮಸ್ಯೆ ಉಂಟುಮಾಡಿದೆ. ಈ ಬಾರಿ ರಾಜ್ಯದಲ್ಲಿ 11 ಜಿಲ್ಲೆಗಳಲ್ಲಿ ಸರಾಸರಿಗಿಂತಲೂ ಕಡಿಮೆ ಮಳೆಯಾಗಿದೆ ಇದರಿಂದಾಗಿ ವಿದ್ಯುತ್ ಬೇಡಿಕೆಯನ್ನು ನಿರ್ವಹಿಸುವುದಕ್ಕಾಗಿ ಲೋಡ್ ಶೆಡ್ಡಿಂಗ್ ಕೂಡ ಅನಿವಾರ್ಯ ಎಂದು ತಿಳಿಸಿದ್ದಾರೆ. ಮಳೆ ಕಡಿಮೆಯಾಗಿರುವುದರಿಂದ ರಾಜ್ಯದ ಕೆಲವು ಭಾಗಗಳನ್ನು ಬರಬೇಡಿತ ಪ್ರದೇಶ ಎಂದೇ ಘೋಷಿಸಲಾಗುವುದು.
ತುಮಕೂರಿನಲ್ಲಿ 35 ಪರ್ಸೆಂಟ್ ರೈತರು ಮಾತ್ರ ಬಿತ್ತನೆ ಆರಂಭಿಸಿದ್ದಾರೆ. ಇಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆ ಆಗಿಲ್ಲ. ಹಾಗಾಗಿ ತುಮಕೂರು ಸೇರಿಸಿ ಬೇರೆ ಯಾವ ಸ್ಥಳದಲ್ಲಿ ಕಡಿಮೆ ಆಗಿದೆಯೋ ಆ ಪ್ರದೇಶದ ಮಾಹಿತಿ ಪಡೆದುಕೊಂಡು ಬರಪೀಡಿತ ಪ್ರದೇಶ ಎಂದು ಘೋಷಿಸುತ್ತೇವೆ ಎಂಬುದಾಗಿ ಪರಮೇಶ್ವರ್ ಅವರು ತಿಳಿಸಿದ್ದಾರೆ.
ಮಾಧ್ಯಮದ ವರದಿಯ ಪ್ರಕಾರ 31 ಜಿಲ್ಲೆಗಳಲ್ಲಿ 18 ಜಿಲ್ಲೆಗಳಲ್ಲಿ ಮಾತ್ರ ಅಗಸ್ಟ್ 11ರ ವರೆಗಿನ ಲೆಕ್ಕಾಚಾರದಲ್ಲಿ ಸಾಮಾನ್ಯ ಮಳೆಯಾಗಿದೆ. ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಅಂಕಿ ಅಂಶಗಳ ಪ್ರಕಾರ ಕಳೆದ ಬಾರಿ ತುಂಬಿ ತುಳುಕಿದ್ದ ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯದಲ್ಲಿ ಅಗಸ್ಟ್ 11ರ ಲೆಕ್ಕಾಚಾರದಲ್ಲಿ ನೋಡುವುದಾದರೆ ಪೂರ್ಣ ಪ್ರಮಾಣದ ಸಂಗ್ರಹಕ್ಕಿಂತ ಅರ್ಧದಷ್ಟು ನೀರು ಮಾತ್ರ ಇದೆ ಎಂದು ಹೇಳಲಾಗಿದೆ. ಇದರಿಂದಾಗಿ ವಿದ್ಯುತ್ ಉತ್ಪಾದನೆ ಈ ಬಾರಿ ಬಹಳ ಕಡಿಮೆ ಆಗುವ ಸಾಧ್ಯತೆ ಇದೆ ಇದರಿಂದಾಗಿ ಲೋಡ್ ಶೆಡ್ಡಿಂಗ್ ಎನ್ನುವುದು ಅನಿವಾರ್ಯ ಎಂದು ಸಚಿವರು ತಿಳಿಸಿದ್ದಾರೆ.
ಬರಪೀಡಿತ ಪ್ರದೇಶಕ್ಕೆ ಪರಿಹಾರ:
ಪ್ರದೇಶದಲ್ಲಿ ರೈತರಿಗೆ ಸರ್ಕಾರದಿಂದ ಪರಿಹಾರ ಸಿಗಬೇಕು ಸಾವಿರಾರು ಕೋಟಿ ಹೊರೆ ಆಗುವ ಸಾಧ್ಯತೆ ಇದೆ ಒಟ್ಟಾರೆಯಾಗಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕವಾಗಿ 52,000 ಕೋಟಿ ರೂಪಾಯಿಗಳು ಹೆಚ್ಚುವರಿಯಾಗಿ ಖರ್ಚಾಗಲಿದೆ ಎಂದು ವರದಿಯಾಗಿದೆ