ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೋಮಾ, ಐಟಿಐ ಪಾಸಾದವರಿಗೆ ಆ.30ರಂದು ನೇರ ನೇಮಕಾತಿ ಸಂದರ್ಶನ

 ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೋಮಾ, ಐಟಿಐ ಪಾಸಾದವರಿಗೆ ಆ.30ರಂದು ನೇರ ನೇಮಕಾತಿ ಸಂದರ್ಶನ…



ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಆಗಸ್ಟ್ 30ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.  

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪೆÇ್ಲಮೋ, ಐಟಿಐ ಹಾಗೂ ಯಾವುದೇ ಪದವಿ ವಿದ್ಯಾರ್ಹತೆವುಳ್ಳ 18 ರಿಂದ 30 ವರ್ಷದೊಳಗಿನ ವಯೋಮಿತಿಯುಳ್ಳವರು ಸಂದರ್ಶನದಲ್ಲಿ ಭಾಗವಹಿಸಬಹುದು.

ಬಯೋಡಾಟಾ-5 ಪ್ರತಿ, ವಿದ್ಯಾರ್ಹತೆ ಪ್ರಮಾಣ ಪತ್ರಗಳು, ಫೆÇೀಟೋಸ್, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7022459064, 8310785143 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ಮಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.


Previous Post Next Post