ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷ ಏನೆಂದರೆ, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಪಿಂಕ್ ಸ್ಮಾರ್ಟ್ ಕಾರ್ಡ್ ನ ಬಗ್ಗೆ. ಹೊಸದಾಗಿ ಪಿಂಕ್ ಸ್ಮಾರ್ಟ್ ಕಾರ್ಡ್ ಗಳನ್ನೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದಂತಹ ಮಹಿಳೆಯರಿಗೆ ನೀಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಹಾಗಾದರೆ ಪಿಂಕ್ ಸ್ಮಾರ್ಟ್ ಕಾರ್ಡ್ ಎಂದರೇನು? ಈ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ಯಾವಾಗ ನೀಡಲಾಗುತ್ತದೆ ಈ ಪಿಂಕ್ ಸ್ಮಾರ್ಟ್ ಕಾರ್ಡ್ ಗೆ ಏನೆಲ್ಲಾ ಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದಾಗಿದೆ.
ಗೃಹ ಲಕ್ಷ್ಮಿ ಯೋಜನೆಯ ಪಿಂಕ್ ಸ್ಮಾರ್ಟ್ ಕಾರ್ಡ್ :
ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದು ಅದರಲ್ಲಿ ಈಗ ಮತ್ತೊಂದು ಹೊಸ ಬದಲಾವಣೆಯನ್ನು ಜಾರಿಗೆ ತಂದಿದೆ. ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರವು ಬೆಳಗಾವಿಯಲ್ಲಿ ಆಗಸ್ಟ್ 27ರಂದು ಚಾಲನೆ ನೀಡಲಾಗುತ್ತದೆ ಎಂದು ಹೇಳಲಾಗಿದೆ. ಆಗಸ್ಟ್ 27 ರಂದೆ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪಿಂಕ್ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಸಹ ತಿಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಬೆಳಗಾವಿಯಲ್ಲಿ ಆಗಸ್ಟ್ 27ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಸಮಾರಂಭ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಆ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ ,ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ ಹಾಗೂ ಐಪಿಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಕೂಡ ಹಾಜರಿರುತ್ತಾರೆ. ಗೃಹ ಲಕ್ಷ್ಮಿ ಯೋಜನೆ ಗೆ ರಾಜ್ಯದ 11000 ಕಡೆ ಏಕಕಾಲಕ್ಕೆ ಚಾಲನೆ ಸಿಗಲಿದೆ ಹಾಗೂ ಅದೇ ಸಮಯದಲ್ಲಿಯೇ ಪಿಂಕ್ ಕಾರ್ಡ್ ಮಾದರಿಯನ್ನು ಸಹ ಪರಿಚಯಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಪಿಂಕ್ ಸ್ಮಾರ್ಟ್ ಕಾರ್ಡ್ ನಲ್ಲಿ ಏನೆಲ್ಲಾ ಇರುತ್ತದೆ :
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಂಗಳೂರಿನ ಆಡಳಿತ ವಿಸೃತವಾದ ವಿಕಾಸ ಸೌಧದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಇನ್ನು ಮುಂದೆ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ಗುರುಲಕ್ಷ್ಮೀ ಯೋಜನೆಯ ಅಡಿಯಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಲಭ್ಯವಿರುವ ಪಿಂಕ್ ಸ್ಮಾರ್ಟ್ ಕಾರ್ಡ್ ನಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ರವರ ಭಾವಚಿತ್ರವನ್ನು ಹೊಂದಿರುತ್ತದೆ. ಗೃಹಲಕ್ಷ್ಮಿ ಯೋಜನೆಯ ಈ ಸ್ಮಾರ್ಟ್ ಕಾರ್ಡ್ ಪಿಂಕ್ ಬಣ್ಣ ಆಗಿರುವುದರಿಂದ ಇದಕ್ಕೆ ಪಿಂಕ್ ಸ್ಮಾರ್ಟ್ ಕಾರ್ಡ್ ಎಂದು ಕರೆಯಲಾಗುತ್ತಿದ್ದು ಅದರಲ್ಲಿ 2000 ಗಳು ಎಂದು ನಮೂದಿಸಲಾಗಿರುತ್ತದೆ. ಇದನ್ನು ಆಗಸ್ಟ್ 27ರಂದು ರಾಜ್ಯ ಸರ್ಕಾರವು ಬೆಳಗಾವಿಯಲ್ಲಿ ಪ್ರಕಟಣೆ ಮಾಡುತ್ತದೆ.
ಪಿಂಕ್ ಸ್ಮಾರ್ಟ್ ಕಾರ್ಡ್ ಯಜಮಾನಿಯಾರ ಪಟ್ಟಿ ಬಿಡುಗಡೆ :
ಮಹಿಳೆಯರು ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಆಗಸ್ಟ್ ತಿಂಗಳಿನಲ್ಲಿ ಪಡೆಯಬಹುದಾಗಿದೆ. ಆಗಸ್ಟ್ ತಿಂಗಳಲ್ಲಿ ಮನೆ ಯಜಮಾನ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು ಅದರಲ್ಲಿ ತಮ್ಮ ಹೆಸರು ಇದೆ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರು ತಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ ನೆರವಾದ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ. ಸರ್ಕಾರದ ಅಧಿಕೃತ ವೆಬ್ಸೈಟ್ ಎಂದರೆ https://ahara.kar.nic.in/Home/EServices ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ತಮ್ಮ ಹೆಸರು ಇದೆಯೇ ಇಲ್ಲವೇ ಎಂಬುದರ ಬಗ್ಗೆ ತಿಳಿದುಕೊಳ್ಳಬಹುದು.
ಹೀಗೆ ರಾಜ್ಯ ಸರ್ಕಾರವು ಜಾರಿಗೆ ತಂದಂತಹ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹಲವಾರು ಹೊಸ ಹೊಸ ಬದಲಾವಣೆಗಳನ್ನು ಜಾರಿಗೆ ತರುತ್ತಿದ್ದು ಅದರಲ್ಲಿ ಈಗ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರಿಂದ ಮಹಿಳೆಯರು ಸುಲಭವಾಗಿ ಪಿಂಕ್ ಸ್ಮಾರ್ಟ್ ಕಾರ್ಡ್ ನ ಮೂಲಕ ಗೃಹಲಕ್ಷ್ಮಿ ಯೋಜನೆಯ ಸಾವಿರ ರೂಪಾಯಿಗಳ ಹಣವನ್ನು ಪಡೆಯಲು ಸಹಾಯವಾಗುತ್ತದೆ ಎಂದು ಹೇಳಬಹುದಾಗಿದೆ. ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ನೀಡಲಾಗುತ್ತಿದೆ ಎಂಬುದರ ಬಗ್ಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಹಾಗೂ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೂ ಸಹ ಪಿಂಕ್ ಸ್ಮಾರ್ಟ್ ಕಾರ್ಡ್ ಯೋಜನೆಯ ಬಗ್ಗೆ ತಿಳಿಸಿ ಧನ್ಯವಾದಗಳು.