ಕರ್ನಾಟಕ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದಾಗಿದೆ. ಈಗಾಗಲೇ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಅಷ್ಟೇ ಅಲ್ಲ ಇದೇ ಆಗಸ್ಟ್ 24 ರಂದು ಫಲಾನಭವಿಗಳ ಬ್ಯಾಂಕ್ ಖಾತೆಗೆ ಹಣ ಕೂಡ ಜಮಾವಣೆ ಆಗಲಿದೆ.
ಹೌದು, ಆಗಸ್ಟ್ 24 ರಿಂದ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಹಾಕಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆಲ್ಲಾ ಹಣ ಜಮಾವಣೆ ಆಗಲಿದ ಎಂದು ಹೇಳಲಾಗುವುದಿಲ್ಲ. ಆದರಿಂದ ನೀವು ಕೂಡ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದರೆ ಅದರ ಸ್ಟೇಟಸ್ ಚೆಕ್ ಮಾಡುವುದು ಉತ್ತಮ. ಹಾಗಾದ್ರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಗೃಹಲಕ್ಷ್ಮೀ ಯೋಜನೆಯ ರಾಜ್ಯದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಾಯಮಾಡಲಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಎರಡು ಸಾವಿರ ರೂ.ಗಳನ್ನು ನೀಡಲಾಗುತ್ತದೆ. ಈ ಯೋಜನೆಯ ಲಾಭ ಪ್ರತಿ ಮನೆಯ ಯಜಮಾನಿಗೆ ಮಾತ್ರ ಲಭ್ಯವಾಗಲಿದೆ. ಒಂದು ಕುಟುಂಬದಲ್ಲಿ ಒಬ್ಬ ಮಹಿಳಾ ಯಜಮಾನಿಗೆ ಮಾತ್ರ ಇದರ ಪ್ರಯೋಜನ ಸಿಗಲಿದೆ.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
* ಮೊದಲಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಲಾಗ್ ಇನ್ ಆಗಿರಿ
* ನಂತರ Check Application/Beneficiary Status ಆಯ್ಕೆಯ ಮೇಲೆ ಟ್ಯಾಪ್ ಮಾಡಿ
* ಇದರಲ್ಲಿ ನಿಮ್ಮ ಅಪ್ಲಿಕೇಶನ್‌ನ ರೆಫೆರೆನ್ಸ್ ನಂಬರ್ ಅನ್ನು ನಮೂದಿಸಿರಿ
* ನಂತರ ನಿಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಲು ವಿವರಗಳನ್ನು ನಮೂದಿಸಿ ಸಬ್ಮಿಟ್ ಮಾಡಿ
* ಇದೀಗ ನೀವು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಲೀಸ್ಟ್‌ನಲ್ಲಿ ಇದ್ದೀರಾ ಅನ್ನೊದನ್ನ ಖಚಿತಪಡಿಸಿಕೊಳ್ಳಿರಿ
ವಾಟ್ಸಾಪ್ ಮೂಲಕವೇ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ
ಇನ್ನು ಕರ್ನಾಟಕ ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನಗೆ ಅರ್ಜಿ ಸಲ್ಲಿಸುವುದಕ್ಕಾಗಿಯೇ ವಾಟ್ಸಾಪ್ ಚಾಟ್‌ಬಾಟ್ ನಂಬರ್ ಅನ್ನು ಪರಿಚಯಿಸಿದೆ. ಚಾಟ್‌ಬಾಟ್‌ಗೆ ಲಿಂಕ್ ಆಗಿರುವ ವಾಟ್ಸಾಪ್ ಸಂಖ್ಯೆ 8147500500 ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕಾಗಿ ವಾಟ್ಸಾಪ್ ಬಳಕೆದಾರರು ಈ ನಂಬರ್‌ಗೆ ತಮ್ಮ ವಿವರಗಳನ್ನು ಸಲ್ಲಿಸುವ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಿದೆ.
ಇನ್ನು ವಾಟ್ಸಾಪ್ ಚಾಟ್‌ಬಾಟ್ ಈ ಅರ್ಜಿಯನ್ನು ಬೆಂಗಳೂರುಒನ್, ಕರ್ನಾಟಕ ಒನ್ ಮತ್ತು ಗ್ರಾಮಒನ್ ಕಚೇರಿಗಳಿಗೆ ವರ್ಗಾಯಿಸುತ್ತದೆ. ಅಲ್ಲಿ ಎಲ್ಲ ಪರಿಶೀಲನೆ ನಡೆಯಲಿದ್ದು, ಈ ಮೂಲಕ ನಿಮ್ಮ ಅರ್ಜಿ ಸ್ವೀಕಾರವಾಗಲಿದೆ. ಸದ್ಯ ಇಲ್ಲಿಯವರೆಗೆ ವಾಟ್ಸಾಪ್ ಚಾಟ್‌ಬಾಟ್ ಮೂಲಕವೇ ರಾಜ್ಯದಲ್ಲಿ ಏಳು ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎನ್ನಲಾಗಿದೆ. ಇನ್ನು ಅರ್ಜಿ ಸಲ್ಲಿಸುವಾಗ ಅರ್ಜಿದಾರರು ತಮ್ಮ ಆಧಾರ್ ಕಾರ್ಡ್ ಜೊತೆಗೆ ತಮ್ಮ ಪಡಿತರ ಚೀಟಿಯಾದ ಬಿಪಿಎಲ್ ಕಾರ್ಡ್ ಅನ್ನು ಒದಗಿಸಬೇಕಾಗುತ್ತದೆ. ಅಲ್ಲದೆ ಆಧಾರ್ ಕಾರ್ಡ್ ಮಾಹಿತಿ ಜೊತೆಗೆ ಪಾಸ್‌ಬುಕ್ ವಿವರಗಳನ್ನು ಸಲ್ಲಿಸಬೇಕಿದೆ.
ರೇಷನ್ ಕಾರ್ಡ್‌ಗೆ ಲಿಂಕ್ ಮಾಡಲಾದ ಮೊಬೈಲ್ ನಂಬರ್ ನಿಮ್ಮ ಬಳಿ ಇಲ್ಲವೇ ಹೀಗೆ ಮಾಡಿ?
ರೇಷನ್ ಕಾರ್ಡ್‌ಗೆ ಲಿಂಕ್ ಮಾಡಿರುವ ಮೊಬೈಲ್ ನಂಬರ್ ನಿಮ್ಮ ಬಳಿ ಇಲ್ಲದೇ ಹೋದರೆ ನಿಮಗೆ ಬೇರೆ ಆಯ್ಕೆಗಳನ್ನು ನೀಡಲಾಗಿದೆ. ಅದರಂತೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕ ತಿಳಿದುಕೊಳ್ಳಲು ನಂಬರ್ 8147500500 ಸಂಖ್ಯೆಗೆ ಸಂದೇಶ ಕಳುಹಿಸಬೇಕಾಗುತ್ತದೆ. ಅಂದರೆ ಈ ನಂಬರ್‌ಗೆ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ಎಸ್‌ಎಂಎಸ್ ಕಳುಹಿಸಿದರೆ ನಿಮಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರಗಳನ್ನು ತಿಳಿದುಕೊಳ್ಳಲು ಸಾಧ್ಯವಾಗಲಿದೆ.