Free laptop scheme:
ನಮ್ಮ ರಾಜ್ಯದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲು ಮುಂದಾಗಿರುವಂತಹ ಕಾಂಗ್ರೆಸ್ ಸರ್ಕಾರವು, ಪದವಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಮೂಲಕ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಲು ಉತ್ತೇಜಿಸಲು ಮುಂದಾಗಿದೆ.
ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಸಿದ್ದರಾಮಯ್ಯನವರು ಟ್ವೀಟ್ ಮೂಲಕ ಘೋಷಿಸಿದ್ದು, ಈ ಯೋಜನೆಗಾಗಿ ಸರ್ಕಾರವು 230 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಟ್ಟಿದೆ ಹಾಗೂ ಈ ಯೋಜನೆಯನ್ನು ಸದ್ಯದಲ್ಲಿ ಜಾರಿಗೆ ತರಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಲ್ಯಾಪ್ಟಾಪ್ ಪಡೆಯಲು ಅರ್ಹತೆಗಳು?
– ಪ್ರಮುಖವಾಗಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
– ಈ ಯೋಜನೆಯಡಿ ಡಿಗ್ರಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ
ಎಸ್ ಎಸ್ ಎಲ್ ಸಿ, PUC ಅಥವಾ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಯೋಜನೆ ಅನ್ವಯವಾಗುವುದಿಲ್ಲ
– ಇನ್ನೊಂದು ಗಮನಿಸಬೇಕಾದಂತಹ ಪ್ರಮುಖ ಅಂಶವೇನೆಂದರೆ ಈ ಯೋಜನೆಯಡಿ ಎಸ್ಸಿ ಎಸ್ಟಿ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಲ್ಯಾಪ್ಟಾಪ್ ಅನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಯೋಜನೆಯ ಬಗ್ಗೆ ಸನ್ಮಾನ ಸಿದ್ದರಾಮಯ್ಯನವರು ಟ್ವೀಟ್ ಮೂಲಕ ತಿಳಿಸಿದ್ದು ಆದಷ್ಟು ಬೇಗ ಶೀಘ್ರದಲ್ಲೇ ಈ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಹಾಗಾಗಿ ಇದರ ಬಗ್ಗೆ ಇನ್ನೂ ಅಧಿಕೃತ ಅಪಡೇಟ್ಸ್ಗಳು ಬರದ ಕಾರಣ,ಬಂದ ತಕ್ಷಣ ತಿಳಿಸಲಾಗುವುದು