ಉಚಿತ ಬೋರ್‌ವೇಲ್ ಯೋಜನೆ-ಆನ್‌ಲೈನ್‌ ಅರ್ಜಿ ಆಹ್ವಾನ | Karnataka Ganga Kalyana Scheme 2023 Apply Online

ಉಚಿತ ಬೋರ್‌ವೇಲ್ ಯೋಜನೆ-ಆನ್‌ಲೈನ್‌ ಅರ್ಜಿ ಆಹ್ವಾನ | Karnataka Ganga Kalyana Scheme 2023 Apply Online

ಎಲ್ಲರಿಗೂ ನಮಸ್ಕಾರ, ನೀವು ಬೋರ್‌ವೇಲ್ ಕೊರೆಸಬೇಕೆ? ನಿಮಗೆ ಕೊಳವೆಬಾವಿ ಕೊರೆಸಲು ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಲು ಸರ್ಕಾರದಿಂದ ಸಹಾಯಧನ ಪಡೆಯಬೇಕೆ? ಹಾಗಿದ್ದರೆ ಈ ಲೇಖನ ನಿಮಗಾಗಿ. 

Karnataka Ganga Kalyana Scheme 2023 ಆನ್‌ಲೈನ್‌ ಅರ್ಜಿ ಆರಂಭವಾಗಿದ್ದು, ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.



ಗಂಗಾ ಕಲ್ಯಾಣ ಯೋಜನೆ:

 ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸುವ ಯೋಜನೆಯಾಗಿದ್ದು, ಈ ಯೋಜನೆಯಡಿ ಸಂಪೂರ್ಣ ಸಹಾಯಧನ ಪಡೆಯಬಹುದಾಗಿದೆ

Karnataka Ganga Kalyana Scheme 2023:

ಯೋಜನೆಯ ಹೆಸರು: ಗಂಗಾ ಕಲ್ಯಾಣ ಯೋಜನೆ

ಸಹಾಯಧನ ಮೊತ್ತ: 3 ಲಕ್ಷ ರೂ. ಮತ್ತು 4 ಲಕ್ಷ ರೂ.

ಅರ್ಜಿದಾರರ ವಯಸ್ಸು: 18 ರಿಂದ 55 ವರ್ಷ

ನಿಗಮದ ಹೆಸರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ


ವೈಯಕ್ತಿಕ ಕೊಳವೆ ಬಾವಿ ಯೋಜನೆಗಾಗಿ ಸರ್ಕಾರವು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು ಜಿಲ್ಲೆಗಳಿಗೆ ರೂ.4 ಲಕ್ಷಗಳನ್ನು ನೀಡುತ್ತದೆ. ಮತ್ತು ಇತರೆ ಇನ್ನೂಳಿದ ಜಿಲ್ಲೆಗಳಿಗೆ ರೂ.3 ಲಕ್ಷಗಳನ್ನು ನಿಗದಿಪಡಿಸಿರುತ್ತದೆ.


Karnataka Ganga Kalyana Scheme ಅರ್ಹತೆ:

ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.

ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಖುಷ್ಕಿ ಜಮೀನಿರಬೇಕು,ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಇಂತಹ ಜಿಲ್ಲೆಗಳಲ್ಲಿ ಜಮೀನಿನ ಲಭ್ಯತೆ ಬಹಳ ಕಡಿಮೆ ಇರುವುದರಿಂದ ಕನಿಷ್ಠ 1 ಎಕರೆ ಜಮೀನನ್ನು ಹೋದಿರತಕ್ಕದ್ದು.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.

ಅರ್ಜಿದಾರರು ಸಣ್ಣ /ಅತಿ ಸಣ್ಣ ಹಿಡುವಳಿದಾರ ರೈತರಾಗಿರಬೇಕು.

ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 96,000/- ಗಳನ್ನು ಮೀರಬಾರದು.

ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.

Karnataka Ganga Kalyana Scheme- ಬೇಕಾಗುವ ದಾಖಲೆಗಳು:


ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ

ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ

ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)

ಇತ್ತೀಚಿನ ಆರ್‌ಟಿಸಿ ಪ್ರತಿ

ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಸಣ್ಣ/ ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ

ಬ್ಯಾಂಕ್ ಪಾಸ್ ಬುಕ್ ಪ್ರತಿ

ಭೂ-ಕಂದಾಯ ಪಾವತಿಸಿದ ರಸೀದಿ

ಸ್ವಯಂ ಘೋಷಣೆ ಪತ್ರ

ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಲಿಂಕ್‌ನ್ನು ಕೇಳಗೆ ನೀಡಲಾಗಿದೆ.


Karnataka Ganga Kalyana Scheme Online Application Link:

ಆನ್‌ಲೈನ್‌ ಅರ್ಜಿ ಲಿಂಕ್‌: ಇಲ್ಲಿ ಕ್ಲಿಕ್‌ ಮಾಡಿ

ಅಧಿಕೃತ ವೆಬ್‌ಸೈಟ್:‌ kmdc.karnataka.gov.in, kmdconline.karnataka.gov.in


Ganga Kalyana Yojana ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-09-2023



Post a Comment

Previous Post Next Post
CLOSE ADS
CLOSE ADS
×