ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಿಗೆ ಸ್ವಯಂ ಉದ್ಯೋಗ ನೇರ ಸಾಲವಾಗಿ ರೂ.50,000 ಗಳಿಂದ ಗರಿಷ್ಠ Rs.1,00,000 ಗಳನ್ನು ನೀಡುತ್ತಿದೆ. ಆಸಕ್ತರು ಅಗತ್ಯ ವಿವರಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಾಗೂ ಈ ಯೋಜನೆಗಳಡಿ ಸ್ವಯಂ ಉದ್ಯೋಗ ನೇರ ಸಾಲ-ಸೌಲಭ್ಯವನ್ನು ನೀಡುತ್ತಿದ್ದು, ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18-09-2023
ಸ್ವಯಂ ಉದ್ಯೋಗ ನೇರ ಸಾಲ ಕುರಿತು ವಿವರ
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000 ಗಳ ಮಿತಿಯೊಳಗಿರಬೇಕು.
ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿರಬೇಕು.
ಈ ಯೋಜನೆಯಲ್ಲಿ ಕನಿಷ್ಠ ರೂ.50,000 ಗಳಿಂದ ಗರಿಷ್ಠ Rs.1,00,000 ಗಳ ಸಾಲ ಒದಗಿಸಲಾಗುವುದು.
ಈ ಮೊತ್ತದಲ್ಲಿ ಶೇಕಡ.20 ರಷ್ಟು ಸಹಾಯಧನ ಹಾಗೂ ಶೇಕಡ.80 ರಷ್ಟು ಸಾಲವನ್ನು ವಾರ್ಷಿಕ ಶೇಕಡ.4 ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು.
2 ತಿಂಗಳ ವಿರಾಮ ಅವಧಿ ಇರುತ್ತದೆ. ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು
- ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು) .
- ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
- ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು.
- ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು.
- ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇಕಡ.33 ವಿಕಲಚೇತನರಿಗೆ ಶೇಕಡ.3 ಹಾಗೂ ತೃತೀಯ ಲಿಂಗಿಗಳಿಗೆ ಶೇಕಡ.5 ಮೀಸಲಾತಿ ಇರಿಸಿದೆ.
- ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಮಾತ್ರವಲ್ಲದೇ - ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ - 94484 51111.
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧಿಕೃತ ವೆಬ್‌ಸೈಟ್ ವಿಳಾಸ : kacdc.karnataka.gov.in
ಸ್ವಯಂ ಉದ್ಯೋಗ ನೇರ ಸಾಲಕ್ಕೆ ಅರ್ಜಿ ಸಲ್ಲಿಸುವಾಗ ಅರ್ಹತೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ