ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿಗೆ ಮಿಲಿಟರಿ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳ ಪರೀಕ್ಷಾ ಪೂರ್ವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸೌಲಭ್ಯಕ್ಕಾಗಿ ಅರ್ಜಿ ಹಾಕಲು ಅರ್ಹತೆ, ದಿನಾಂಕಗಳು, ಇತರೆ ಮಾಹಿತಿ ಇಲ್ಲಿದೆ.
ಭಾರತೀಯ ಸೇನೆ ಮತ್ತು ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2A, 3A, 3B ಗಳ ಅರ್ಹ ಅಭ್ಯರ್ಥಿಗಳಿಗೆ, ಪರೀಕ್ಷಾ ಪೂರ್ವ ಸಿದ್ಧತೆಗೆ ಉಚಿತ ತರಬೇತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುತ್ತಿದೆ. 2023-24ನೇ ಸಾಲಿನಲ್ಲಿ ಈ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ಉಚಿತವಾಗಿ ಪಡೆಯಲು ಇಚ್ಚಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಸೌಲಭ್ಯ ಬಾಲಕರಿಗೆ ಮಾತ್ರ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು
ವಾರ್ಷಿಕ ಆದಾಯ ಪ್ರವರ್ಗ-1 ಕ್ಕೆ ರೂ.2.50 ಲಕ್ಷ, 2A, 3A, 3B ವರ್ಗಗಳಿಗೆ ರೂ.1.00 ಲಕ್ಷ.
ಕನಿಷ್ಠ ವಿದ್ಯಾರ್ಹತೆ - ಕನಿಷ್ಠ ಶೇಕಡ.33 ಅಂಕಗಳೊಂದಿಗೆ 10ನೇ ತರಗತಿ ಪಾಸ್ ಮಾಡಿರಬೇಕು.
ಡಿಸೆಂಬರ್ 31, 2023 ಕ್ಕೆ ಕನಿಷ್ಠ 17. 1/2 ವರ್ಷ, ಗರಿಷ್ಠ 21 ವರ್ಷ ನಿಗದಿಪಡಿಸಲಾಗಿದೆ.
ತರಬೇತಿ ನೀಡುವ ಸ್ಥಳಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ತರಬೇತಿ ನೀಡಲಾಗುವುದು
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ತರಬೇತಿ ನೀಡುವ ಮೇಲಿನ ಮೂರು ಜಿಲ್ಲೆಗಳಲ್ಲಿ ತಾವು ಆಯ್ಕೆ ಮಾಡಿಕೊಂಡ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು
ಅರ್ಜಿ ನಮೂನೆ ಹಾಗೂ ಇತರೆ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್ ಗೆ ಭೇಟಿ ನೀಡಿ ಪಡೆಯಬಹುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ :
15ನೇ ಸೆಪ್ಟೆಂಬರ್ 2023
ತರಬೇತಿ ಅವಧಿಯು ಒಟ್ಟು 4 ತಿಂಗಳು ಇರುತ್ತದೆ. ಈ ವೇಳೆ ಉಚಿತ ವಸತಿ, ಊಟದ ಸೌಲಭ್ಯ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿ ಕೇಂದ್ರದಲ್ಲಿಯೇ ಉಳಿದುಕೊಳ್ಳಬೇಕಾಗಿರುತ್ತದೆ. ತರಬೇತಿ ಅವಧಿಯಲ್ಲಿ ದೈಹಿಕ ಸಹಿಷ್ಣುತೆ ಹಾಗೂ ಲಿಖಿತ ಪರೀಕ್ಷೆಗೆ ಸಂಬಂಧಪಟ್ಟಂತೆ ತರಬೇತಿ ನೀಡಲಾಗುವುದು. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಶೇಕಡ.80 ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ. ಪೂರ್ಣಗೊಂಡ ನಂತರ ಪ್ರಮಾಣ ಪತ್ರವನ್ನು ವಿತರಿಸಲಾಗುವುದು
ಅಭ್ಯರ್ಥಿಗಳ ಅರ್ಜಿ ಮತ್ತು ಸಲ್ಲಿಸಿರುವ ದಾಖಲೆಗಳ ಪರಿಶೀಲನೆ ನಂತರ ಅಭ್ಯರ್ಥಿಗಳು ತರಬೇತಿಗೆ ಆಯ್ಕೆ ಮಾಡಿಕೊಂಡಿರುವ ಜಿಲ್ಲೆಯನ್ನಾಧರಿಸಿ ನಿಗದಿತ ಸ್ಥಳದಲ್ಲಿ ವೈದ್ಯಕೀಯ / ದೈಹಿಕ ಪರೀಕ್ಷೆಯನ್ನು ಆಯೋಜಿಸಿ ಅಂತಿಮವಾಗಿ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುತ್ತದೆ. ಇದರ ಸ್ಥಳ, ದಿನಾಂಕ, ಸಮಯ ಮುಂತಾದ ಮಾಹಿತಿಯನ್ನು ಕಛೇರಿಯಿಂದ ತಿಳಿಸಲಾಗುವುದು.
ತರಬೇತಿ ನೀಡುವ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಾಯವಾಣಿ ಸಂಖ್ಯೆಗಳು
ದಕ್ಷಿಣ ಕನ್ನಡ : 0824-2225078
ಉಡುಪಿ: 0820-2574881
ಉತ್ತರ ಕನ್ನಡ : 08382-226589
ಕೇಂದ್ರ ಕಛೇರಿ : 8050770004
Download notification