ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದವರ ಹೆಸರು ಈ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸೆಪ್ಟೆಂಬರ್ ತಿಂಗಳ ಹಣ ಅವರ ಖಾತೆಗೆ ಜಮೆಯಾಗಲಿದೆ. ಹೌದು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಮಾತ್ರಕ್ಕೆ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುವುದಿಲ್ಲ. ಈ ಯೋಜನೆಗೆ ಕೆಲವು ಅರ್ಹತೆಗಳನ್ನು ಮಾಡಲಾಗಿದೆ. ಆ ಅರ್ಹತೆ ಹೊಂದಿರುವವರೊಂದಿಗೆ ದಾಖಲೆಗಳಲ್ಲಿ ಏನೇನು ಮಾಹಿತಿ ಇರಬೇಕು? ಯಾರಿಗೆ ಜಮೆಯಾಗಲಿದೆ ಯಾರಿಗೆ ಜಮೆಯಾಗುವುದಿಲ್ಲ ಎಂಬುದನ್ನು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಗೃಹಲಕ್ಷ್ಮೀ ಯೋಜನೆಗೆ ಅರ್ಹತೆ ಪಟ್ಟಿಯಲ್ಲಿ ಹೆಸರು ಚೆಕ್ ಮಾಡುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಗೆ ಯಾರು ಯಾರು ಅರ್ಹತೆ ಹೊಂದಿದ್ದಾರೆ ಅವರ ಹೆಸರು ಚೆಕ್ ಮಾಡಲು ಈ
https://ahara.kar.nic.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಈ ಪಡಿತರ ಚೀಟಿ (e Ration card) ಮೇಲೆ ಕ್ಲಿಕ್ ಮಾಡಬೇಕು. ನಂತರ show village list (ಹಳ್ಳಿ ಪಟ್ಟಿ) ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ಹಾಗೂ ಗ್ರಾಮ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ಪಡಿತರ ಚೀಟಿ ಹೊಂದಿರುವವರ ಪಟ್ಟಿ ಕಾಣಿಸುತ್ತದೆ. ಅಲ್ಲಿ ಪಡಿತರ ಚೀಟಿ ಸಂಖ್ಯೆ ಹಾಗೂ ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಹೆಸರು ಕಾಣಿಸುತ್ತದೆ. ಅಲ್ಲಿ ಮಹಿಳೆಯ ಹೆಸರಿರಬೇಕು. ಇದರೊಂದಿಗೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ ಹೊಂದಿರುವರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುವ ಸಾಧ್ಯತೆಯಿದೆ.
53 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಇನ್ನೂ ಜಮೆಯಾಗಿಲ್ಲ ಗೃಹಲಕ್ಷ್ಮೀ ಯೋಜನೆಯ ಹಣ
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದರೂ ಕೆಲವು ತಾಂತ್ರಿಕ ಕಾರಣಗಳಿಂದ ಇನ್ನೂ 53 ಸಾವಿರಕ್ಕೂ ಹೆಚ್ಚಿನ ಜನರಿಗೆ ಇನ್ನೂ ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲ. ಹೀಗಾಗಿ ಹಲವಾರು ಪಡಿತರ ಚೀಟಿ ಮಹಿಳಾ ಕುಟುಂಬ ಮುಖ್ಯಸ್ಥರು ಸೌಲಭ್ಯದಿಂದ ವಂಚಿತರಾಗಿದ್ದಾರೆ.
ಬ್ಯಾಂಕ್ ಖಾತೆ ಸಂಖ್ಯೆ ತಪ್ಪಾಗಿದ್ದರೆ, ಆಧಾರ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಸಂಖ್ಯೆ ಜೋಡಣೆ ಆಗಿರದಿದ್ದರೆ ಬ್ಯಾಂಕ್ ಖಾತೆ ನಿಷ್ಕ್ರೀಯವಾಗಿದ್ದರೆ ್ಕ್ರೀಯವಾಗಿದ್ದರೆಮತ್ತು ಬೇರೆ ಬೇರೆ ತಾಂತ್ರಿಕ ಕಾರಣಗಳಿಂದಹಣ ಪಾವತಿ ಆಗುತ್ತಿಲ್ಲ. ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗದೆ ಇರುವವರು ತಮ್ಮ ಬ್ಯಾಂಕ್ ಖಾತೆ ಮತ್ತು ದಾಖಲೆಗಳನ್ನು ಪುನರ್ ಪರಿಶೀಲಿಸಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ ಇಲ್ಲಿಯವರೆಗೆ ಸುಮಾರು 1 ಕೋಟಿ ಜನರು ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇದರಲ್ಲಿ 80 ಲಕ್ಷಕ್ಕೂ ಹೆಚ್ಚು ಜನರಿಗೆ ಆಗಸ್ಟ್ ತಿಂಗಳ ಮೊದಲ ಕಂತಿನ ಹಣ 2ಸಾವಿರ ರೂಪಾಯಿ ಜಮೆಯಾಗಿದೆ. ಇದರಲ್ಲಿಯೂ ಕೆಲವರು ತಾಂತ್ರಿಕ ಕಾರಣಗಳಿಂದ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಕಳೆದ ತಿಂಗಳು ಜಮೆಯಾಗದೆ ಇರುವ ಫಲಾನುಭವಿಗಳು ಸ್ಟೇಟಸ್ ಚೆಕ್ ಮಾಡಿ ತಿಳಿದುಕೊಳ್ಳಬಹುದು.
ಲಿಂಕ್ ಮೇಲೆ ಕ್ಲಿಕ್ ಮಾಡಬಹುದು.
ಜನಜಾಗರಣವು ಈಗ ಜನರಿಗೆ ಸರ್ಕಾರದ ಯೋಜನೆಗಳು, ಕೃಷಿಗೆ ಸಂಬಂಧಿಸಿದ ಹಾಗೂ ಸಾರ್ವಜನಿಕರಿಗೆ ಉಪಯೋಗವಾಗುವ ಮಾಹಿತಿಗಳನ್ನು ನೀಡಲು ಜನಜಾಗರಣ ವ್ಯಾಟ್ಸ್ ಆ್ಯಪ್ ಚಾನೆಲ್ ಆರಂಭಿಸಿದೆ. ಆಸಕ್ತರು ಜನಜಾಗರಣ ವ್ಯಾಟ್ಸ್ ಆ್ಯಪ್ ಚಾನೆಲೆಗೆ ಸೇರಿ ಫಾಲೋ ಬಟನ್ ಮೇಲೆ ಕ್ಲಿಕ್ ಸೇರಬಹುದು. ದಿನನಿತ್ಯ ನೋಟಿಫಿಕೇಶನ್ ಬರಲು ಬೆಲ್ ಬಟನ್ ಒತ್ತಬಹುದು.