ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

 ರೈತರು ತಮ್ಮ ಬೆಳೆಗಳ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.



ಹೌದು, ರೈತರಿಗೆ ಇನ್ನೂ ಮುಂದೆ ಬೆಳೆಹಾನಿ, ಬೆಳೆ ವಿಮೆ ಸೇರಿದಂತೆ ಸರ್ಕಾರದ ಸೌಲಭ್ಯ ಪಡೆಯಲು ತಮ್ಮ ಬೆಳೆಗಳ ಸಮೀಕ್ಷೆ ಮಾಡುವುದು ಕಡ್ಡಾಯವಾಗಿದೆ. ತಮ್ಮ ಬೆಳೆಗಳ ಸಮೀಕ್ಷೆ ಮಾಡಿದರೆ ಮಾತ್ರ ಅವರಿಗೆ ಬೆಳೆ ಹಾನಿ, ಬೆಳೆ ವಿಮೆಯಂತಹ ಸೌಲಭ್ಯ ಸಿಗುವುದು. ಆದರೆ ರೈತರು ಬೆಳೆ ವಿಮೆ ಸರಿಯಾಗಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಚೆಕ್ ಮಾಡುವುದು ಹೇಗೆ?

ಮುಂಗಾರು ಹಂಗಾಮಿಗೆ ಕೆಲವು ರೈತರು ತಾವೇ ಬೆಳೆ ಸಮೀಕ್ಷೆ ಮಾಡಿರುತ್ತಾರೆ. ಇನ್ನೂ ಕೆಲವು ರೈತರು ರೈತ ಪ್ರತಿನಿಧಿಯಿಂದ ಸಮೀಕ್ಷೆ ಮಾಡಿಸಿರುತ್ತಾರೆ. ಆದರೆ ಬೆಳೆ ಸಮೀಕ್ಷೆಯಲ್ಲಿ ಮಾಹಿತಿಗಳು ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದರ ಬಗ್ಗೆ ಗೊತ್ತಿರುವುದಿಲ್ಲ. ಒಂದು ವೇಳೆ ಬೆಳೆ ಸಮೀಕ್ಷೆ ಸರಿಯಾಗಿ ಆಗಿರದಿದ್ದರೆ ಮತ್ತೊಮ್ಮೆ ಮಾಡಲು ಅವಕಾಶವಿರುತ್ತದೆ. ಆದರೆ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆ ಸರಿಯಾಗಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://play.google.comistore/appsidetails: id=com.crop.offcskharif 2021 

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ದರ್ಶಕ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು install ಮೇಲೆ ಕ್ಲಿಕ್ ಮಾಡಬೇಕು. ಆಗ ನಂತರ ಓಪನ್ ಮೇಲೆ ಕ್ಲಿಕ್ ಮಾಬೇಕು. ನಂತರ ಬೆಳೆ ದರ್ಶಕ್ 2023-24 ಆ್ಯಪ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಬೆಳೆ ಸಮೀಕ್ಷೆ ಮಾಹಿತಿ ವೀಕ್ಷಣೆ ಕಾಣಿಸುತ್ತದೆ. ಅಲ್ಲಿ ನೀವು ರೈತ ಮೇಲೆ ಕ್ಲಿಕ್ ಮಾಡಬೇಕು. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು.


ಸರ್ವೆ ನಂಬರ್ ಕೆಳಗಡೆ ವರ್ಷ 2023-24 ಆಯ್ಕೆ ಮಾಡಿಕೊಳ್ಳಬೇಕು. ಋತು ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಸರ್ವೆ ನಂಬರ್ ಹಾಕಬೇಕು. ವಿವರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಅದರ ಕೆಳಗಡೆ ಸರ್ವೆ ನಂಬರ್ ಹಿಸ್ಸಾ ಆಯ್ಕೆ ಮಾಡಿಕೊಳ್ಳಬೇಕು. ಹಿಸ್ಸಾ ನಂಬರ್ ಕಾಣಿಸದಿದ್ದರೆ ಅಲ್ಲಿ ಕಾಣುವ ಸರ್ವೆನಂಬರ್ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ಮಾಲಿಕರ ವಿವರಕ್ಕಾಗಿ ಕ್ಲಿಕ್ ಮಾಡಿ ಮೇಲೆ ಕ್ಲಿಕ್ ಮಾಡಬೇಕು.ಆಗ ನೀವು ನಮೂದಿಸಿ ಸರ್ವೆ ನಂಬರ್ ನಲ್ಲಿರುವ ಮಾಲಿಕರ ಹೆಸರು ಕಾಣಿಸುತ್ತದೆ. ನಿಮ್ಮ ಹೆಸರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಕೆಳಗಡೆ ಸೂಚನೆ ಕಾಣಿಸುತ್ತದೆ.

ಸೂಚನೆ ನಿಮ್ಮಸರ್ವೆ ನಂಬರ್ ಬೆಳೆ ಸಮೀಕ್ಷೆಯನ್ನು ಬಳಕೆದಾರರು ಕೆಳಗೆ ನಮೂದಿಸಿದ್ದಾರೆ. ಅಂದರೆ ಯಾವ ದಿನಾಂಕದಂದು ಬೆಳೆ ಸಮೀಕ್ಷೆ ಆಗಿದೆ ಆ ದಿನ, ನಿಮ್ಮ ಹೆಸರು ಹಾಗೂ ನಿಮ್ಮ ಮೊಬೈಲ್ ನಂಬರ್ ಕಾಣಿಸುತ್ತದೆ. ನಿಮ್ಮ ಹೆಸರು ಮೇಲೆ ಕ್ಲಿಕ್ ಮಾಡಿದರೆ ಬೆಳೆ ವಿವರ ದಾಖಲಿಸಿರುವುದುರ ಸರಿಯಿಲ್ಲವಾದರೆ ತಮ್ಮ ಆಕ್ಷೇಪಣೆಯನ್ನು ಸಲ್ಲಿಸಬಹುದು. ಅಲ್ಲಿ ಕಾಣುವ ಆಕ್ಷೇಪಣೆ ಮೇಲೆ ಕ್ಲಿಕ್ ಮಾಡಿದರೆ ಸಲ್ಲಿಸಬಹುದು.


ನೀವು ಮಾಡಿದ ಬೆಳೆ ಸಮೀಕ್ಷೆ ಸರಿಯಾಗಿ ಆಗಿದೆ ಎಂಬ ಮೆಸೆಜ್ ಸಹ ನಿಮಗೆ ಕಾಣಿಸುತ್ತದೆ. ಸರಿಯಾಗಿ ಇದೆ ಎಂದಾದರೆ ನೀವು ಆಕ್ಷೇಪಣೆಗೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.


ಬೆಳೆ ಸಮೀಕ್ಷೆ ಹಾಗೂ ಬೆಳೆ ದರ್ಶಕ್ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.

Post a Comment

Previous Post Next Post
CLOSE ADS
CLOSE ADS
×