Gruha Lakshmi Scheme Karnataka Launched:
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾಗಿರುವ ಬಹುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಯನ್ನು ಅದ್ದೂರಿಯಾಗಿ ಚಾಲನೆ ನೀಡಲಾಯಿತು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವ ಸಂಪುಟದ ಸಚಿವರು, ಶಾಸಕರು ಭಾಗವಹಿಸಿದ್ದರು.
ಡಿಜಿಟಲ್ ಬಟನ್ ಒತ್ತಿ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಿದರು. ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿತರ ಖಾತೆಗೆ ₹2000 ರೂ. ಯನ್ನು ಅಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ.
Gruha Lakshmi Scheme Karnataka
ಗೃಹ ಲಕ್ಷ್ಮಿ ಯೋಜನೆ (Gruha Lakshmi Scheme Karnataka) ಗೆ ಅಂದಾಜು 1.28 ಕೋಟಿ ಕುಟುಂಬದ ಯಜಮಾನಿಯರು ನೋಂದಣಿ ಮಾಡಿಕೊಂಡಿದ್ದು, ಅರ್ಹ ಫಲಾನುಭವಿಗಳ ಖಾತೆಗೆ 2000 ರೂ. ವರ್ಗಾವಣೆ ಮಾಡಲಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ 2 ಸಾವಿರ ರೂ. ನೇರ ವರ್ಗಾವಣೆ (DBT) ಮಾಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮಕ್ಕಾಗಿ ರೂ. 17,500 ಕೋಟಿ ಮೀಸಲಿಡಲಾಗಿದೆ. ರಾಜ್ಯದ ಎಲ್ಲಾ ಅರ್ಹ ಕುಟುಂಬಗಳಿಗೆ ಯೋಜನೆಯ ಲಾಭ ತಲುಪಿಸಿ, ಬಡಜನರಿಗೂ ಸ್ವಾವಲಂಬಿ ಬದುಕು ಕಟ್ಟಿಕೊಡಬೇಕು ಎಂಬ ನಮ್ಮ ಆಶಯಕ್ಕೆ ನಿಮ್ಮ ಬೆಂಬಲವಿರಲಿ ಎಂದು ಸಿಎಂ ಮನವಿ ಮಾಡಿದ್ದಾರೆ.
ಹೀಗೆ SMS ಬರುತ್ತದೆ.
“ಅಭಿನಂದನೆಗಳು, ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಂಖ್ಯೆ GL002S23*****7 ಅನ್ನು ಅನುಮೋದಿಸಲಾಗಿದೆ. ಆಗಸ್ಟ್ 2023 ರಿಂದ ರೂ.2000 ಮೊತ್ತವನ್ನು ನೋಂದಾಯಿಸಿಕೊಂಡಿದ್ದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಧನ್ಯವಾದಗಳು – ನಿಮ್ಮ ಕರ್ನಾಟಕ ಸರ್ಕಾರ” ಎಂಬ ಮೇಸೆಜ್ ಬರುತ್ತದೆ. ನಿಮಗೂ ಬಂತಾ?
ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವ ಬಗ್ಗೆ SMS ಹೀಗೆ ಬರುತ್ತದೆ.