ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಉಚಿತ ವಸತಿ, ಊಟ ಸಹಿತ ವಿವಿಧ ಕೌಶಲ ತರಬೇತಿ: ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಉಚಿತ ವಸತಿ, ಊಟ ಸಹಿತ ವಿವಿಧ ಕೌಶಲ ತರಬೇತಿ: ಅರ್ಜಿ ಆಹ್ವಾನ

 2023-24ನೇ ಸಾಲಿನಲ್ಲಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿದ್ಯಾವಂತ ನಿರುದ್ಯೋಗಿ ಯುವಕ / ಯುವತಿಯರಿಗೆ ಬೆಂಗಳೂರಿನಲ್ಲಿ ಸ್ಟೈಫಂಡ್ ಮೂಲಕ ಊಟ -ವಸತಿಯೊಂದಿಗೆ ವಿವಿಧ ಕ್ಷೇತ್ರಗಳ ಕೌಶಲಗಳ ತರಬೇತಿಯನ್ನು, ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಹಮ್ಮಿಕೊಳ್ಳಲಾಗಿದೆ. ಈ ತರಬೇತಿಗಳನ್ನು ಪಡೆಯಲು ಆಸಕ್ತಿ ಇರುವವರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ



ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಈ ತರಬೇತಿಗಳನ್ನು ಪಡೆಯಲು ಅರ್ಹರಾಗಿದ್ದಾರೆ.

ಇತರೆ ಅರ್ಹತೆಗಳು

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.

ಎಲ್ಲಾ ಮೂಲಗಳಿಂದ ಅಭ್ಯರ್ಥಿಯ ಕುಟುಂಬ ವಾರ್ಷಿಕ ಆದಾಯವು ರೂ.8.00 ಲಕ್ಷಗಳನ್ನು ಮೀರಿರಬಾರದು.

ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳಾಗಿರಬೇಕು.


ಅರ್ಜಿ ಸಲ್ಲಿಸಲು ಕೊನೆ ದಿನಾಂಕ :

 16-09-2023

ಅರ್ಜಿ ಸಲ್ಲಿಸಲು ವೆಬ್‌ಸೈಟ್‌ ವಿಳಾಸ :

ಜಿಲ್ಲಾವಾರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಪರ್ಕ ಸಂಖ್ಯೆಗಳು

ರಾಮನಗರ - 7259306155

ದಕ್ಷಿಣ ಕನ್ನಡ ಜಿಲ್ಲೆ - 9449006285

ಬೆಳಗಾವಿ - 8197705896

ದಾವಣಗೆರೆ - 9886635499

ಕಲಬುರಗಿ - 9449161217

ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಅಂಕಪಟ್ಟಿಗಳು, ಆಧಾರ್ ಕಾರ್ಡ್‌, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವೈಯಕ್ತಿಕ ವಿವರಗಳು ಬೇಕಾಗುತ್ತವೆ. ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ. ಇತರೆ ಯಾವುದೇ ಮಾರ್ಗದ ಮೂಲಕ ಅರ್ಜಿಗೆ ಅವಕಾಶ ಇಲ್ಲ. ಆದರೆ ಹೆಚ್ಚಿನ ಮಾಹಿತಿಗಳನ್ನು ಆಯಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಛೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು


Post a Comment

Previous Post Next Post
CLOSE ADS
CLOSE ADS
×