ಪ್ರವಾಸೋದ್ಯಮ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿ ಹಾಗೂ ದೇಶದ ಆರ್ಥಿಕ ಸುಧಾರಣೆ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ತಿಳಿಸಿದರು.
ನಗರದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಗದಗ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ವಿಶಿಷ್ಟ ವಿದೇಶಿ ನೀತಿಗಳಿಂದ ಪ್ರವಾಸೋದ್ಯಮವು ಸಾಕಷ್ಟು ಬೆಳವಣಿಗೆಯನ್ನು ಹೊಂದುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.
ವಿ.ಡಿ.ಎಸ್.ಟಿ. ಮಹಾವಿದ್ಯಾಲಯದ ಉಪನ್ಯಾಸಕರಾದ ದತ್ತಪ್ರಸನ್ನ ಪಾಟೀಲ ಅವರು ಕರ್ನಾಟಕ ಪ್ರವಾಸಿ ಸ್ಥಳಗಳ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿ ಪ್ರವಾಸಿ ತಾಣಗಳ ವೀಕ್ಷಣೆಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಜ್ಞಾನ ಹಾಗೂ ಮನಸ್ಸಿಗೆ ಮುದ ದೊರೆಯುತ್ತದೆ. ರಾಜ್ಯದಲ್ಲಿ ಧಾರ್ಮಿಕ, ಮನರಂಜನಾ, ಐತಿಹಾಸಿಕ ಪ್ರವಾಸೋದ್ಯಮ ಎಂದು ಅನೇಕ ಮಜಲುಗಳಿವೆ. ರೇಷ್ಮೆ, ಸಾಂಬಾರ ಪದಾರ್ಥ, ಕಾಫಿಬೀಜ, ಶ್ರೀಗಂಧ, ಶಿಲ್ಪಕಲೆ, ಆಕರ್ಷಕ ಹಾಗೂ ನೈಸರ್ಗಿಕ ತಾಣಗಳನ್ನು ಹೊಂದಿರುವಂತಹ ಕರ್ನಾಟಕ ರಾಜ್ಯವು ಅನೇಕ ಐತಿಹಾಸಿಕ, ಧಾರ್ಮಿಕ ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೆÇಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ವೀರನಾರಾಯಣ ದೇವಸ್ಥಾನ ಮತ್ತು ತ್ರಿಕೂಟೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಕೆ.ಡಿ. ಗೋಡಖಿಂಡಿ, ವೀರನಾರಾಯಣ ದೇವಸ್ಥಾನ ಮತ್ತು ತ್ರಿಕೂಟೇಶ್ವರ ದೇವಸ್ಥಾನ ಸಮಿತಿಯ ಕಾರ್ಯದರ್ಶಿಗಳಾದ ಆನಂದ ಪೆÇೀತ್ನೀಸ್, ಗಣ್ಯರುಗಳಾದ ಶ್ರೀನಿವಾಸ ಹುಯಿಲಗೋಳ, ಪ್ರಭು ಬುರಬುರೆ, ಜಮಾದಾರ, ಅ.ದ.ಕಟ್ಟಿಮನಿ, ವಿವೇಕಾನಂದಗೌಡ ಪಾಟೀಲ, ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.