ಹನಿ ನೀರಾವರಿ, ತುಂತುರು ನೀರಾವರಿ, ಸೌರಚಾಲಿತ ಪಂಪ್’ಸೆಟ್ ಹಾಗೂ ಯಂತ್ರೋಪಕರಣ ಖರೀದಿ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…
Solar Pumpset & Irrigation Machinery Subsidy :
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಭೂಜಲ್ ಯೋಜನೆಯಡಿ ಹನಿ ಮತ್ತು ತುಂತುರು ನೀರಾವರಿ ಘಟಕಗಳ ನಿರ್ಮಾಣ, ಯಂತ್ರೋಪಕರಣ ಖರೀಸುವವರಿಗೆ ಹಾಗೂ ಸೌರಶಕ್ತಿ ಚಾಲಿತ ಪಂಪ್’ಸೆಟ್ ಖರೀದಿಸಿದವರಿಗೆ ಸಹಾಯಧನ ನೀಡಲು ರಾಜ್ಯದ ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತುಂತುರು ನೀರಾವರಿ ಘಟಕಗಳ ನಿರ್ಮಾಣ
ಕೃಷಿ ಇಲಾಖೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಭೂಜಲ್ ಯೋಜನೆಯಡಿ ಶೇ.90 ರಷ್ಟು ರಿಯಾಯಿತಿ ದರದಲ್ಲಿ ಹನಿ ಮತ್ತು ತುಂತುರು ನೀರಾವರಿ ಘಟಕಗಳ ನಿರ್ಮಾಣಕ್ಕೆ ಅರ್ಹ ರೈತರು ಅರ್ಜಿ ಸಲ್ಲಿಸಬಹುದು. ದಾಖಲಾತಿಗಳನ್ನು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ನೀಡಿ ಕೆ-ಕಿಸಾನ್ ತಂತ್ರಾ೦ಶದಲ್ಲಿ ನೋಂದಾಯಿಸಿಕೊಳ್ಳಬೇಕು.
ಅರ್ಜಿ ಪ್ರತಿ, ಪಹಣಿ, ಬೆಳೆ ದೃಢೀಕರಣ, ಕೊಳವೆ ಬಾವಿ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳಿಂದ ನಿರಾಕ್ಷೇಪಣ ಪತ್ರ, 20 ರೂಪಾಯಿ ಸ್ಟಾಂಪ್ ಪೇಪರ್, ಪರಿಶಿಷ್ಟ ಜಾತಿ, ಪಂಗಡ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಲ್ಲಿಬೇಕು. ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಧಿಕಾರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಚಿಕ್ಕಬಳ್ಳಾಪುರ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸೌರಶಕ್ತಿ ಚಾಲಿತ ಪಂಪ್’ಸೆಟ್ ಖರೀದಿಗೆ ಸಹಾಯಧನ
2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಉಪಕರಣ ಖರೀದಿಸುವವರಿಗೆ ಹಾಗೂ ಸೌರಶಕ್ತಿ ಚಾಲಿತ ಪಂಪ್ ಸೆಟ್ ಖರೀದಿಸಿದವರಿಗೆ ಸಹಾಯಧನ ನೀಡಲು ತೋಟಗಾರಿಕೆ ಇಲಾಖೆ ಅರ್ಜಿ ಆಹ್ವಾನಿಸಿದೆ.
ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ರೈತರು ಆಗಿದ್ದಲ್ಲಿ ಆರ್‌ಡಿ ಸಂಖ್ಯೆ ಹೊಂದಿರುವ ಜಾತಿ ಪ್ರಮಾಣ ಪತ್ರದೊಂದಿಗೆ ಸೆಪ್ಟೆಂಬರ್ 20ರೊಳಗೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಿಗೆ ಅರ್ಜಿ ಸಲ್ಲಿಸಬಹುದು.
ಹನಿ ನೀರಾವರಿ ಅಳವಡಿಕೆಗೆ ಸಹಾಯಧನ
2023-24ನೇ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳಿಗೆ ಅನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90ರಷ್ಟು ಸಹಾಯಧನ ಹಾಗೂ ಇತರೆ ವರ್ಗದ ರೈತರಿಗೆ ಶೇ.75ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ, ತಾಲ್ಲೂಕು ಕಚೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ : 080-27623770/ 9880210892, ದೇವನಹಳ್ಳಿ : 080-27681204/ 9480461234, ಹೊಸಕೋಟೆ : 080-27904760/ 8217210320, ನೆಲಮಂಗಲ : 080-27726213/ 9880461607 ದೂರವಾಣಿ ಸಂಪರ್ಕಿಸಬಹುದಾಗಿದೆ.
.jpeg)