ಹಿಂದುಳಿದ ವರ್ಗಗಳ ನಿಗಮದಿಂದ OBC ವಿದ್ಯಾರ್ಥಿಗಳಿಗೆ 5 ರಿಂದ 20 ಲಕ್ಷವರೆಗೆ ಶೈಕ್ಷಣಿಕ ಸಾಲ: ಅರ್ಜಿ ಹಾಕಿ

ಹಿಂದುಳಿದ ವರ್ಗಗಳ ನಿಗಮದಿಂದ OBC ವಿದ್ಯಾರ್ಥಿಗಳಿಗೆ 5 ರಿಂದ 20 ಲಕ್ಷವರೆಗೆ ಶೈಕ್ಷಣಿಕ ಸಾಲ: ಅರ್ಜಿ ಹಾಕಿ

 Devaraj Arasu Education Loans 2023-24:

 ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಅರಿವು ಶೈಕ್ಷಣಿಕ ಸಾಲ ಹಾಗೂ ವಿದೇಶಿ ವ್ಯಾಸಂಗ ಕೋರ್ಸ್‌ಗಳಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ ಅನುಷ್ಠಾನಗೊಳಿಸುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು



ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ನೀಡಲಾಗುತ್ತಿರುವ ಅರಿವು ಎಜುಕೇಷನ್‌ ಲೋನ್‌ ಹಾಗೂ ಫಾರಿನ್ ಸ್ಟಡಿ ಎಜುಕೇಷನ್ ಲೋನ್‌ಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹೆಚ್ಚಿನ ವಿವರಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಬಹುದು.

ಅರಿವು ಶೈಕ್ಷಣಿಕ ಸಾಲ

ಸಿಇಟಿ ಮೂಲಕ ಆಯ್ಕೆಯಾಗಿ ವಿವಿಧ ವೃತ್ತಿಪರ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ಈ ಸಾಲ ನೀಡಲಾಗುತ್ತದೆ. ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್‌ಗಳ ವ್ಯಾಸಂಗಕ್ಕೆ ವಾರ್ಷಿಕ 1.00 ಲಕ್ಷ ರೂ.ಗಳಂತೆ ಕೋರ್ಸ್‌ ನ ಅವಧಿಗೆ ಗರಿಷ್ಠ 4.00 ಲಕ್ಷ ರೂ.ಗಳಿಂದ ರೂ.5.00 ಲಕ್ಷ ರೂ.ಗಳಿಗೆ ಶೇಕಡ.2 ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು ರೂ.3.50 ಲಕ್ಷಗಳ ಮಿತಿಯಲ್ಲಿರಬೇಕು.


ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್‌ಡಿ ಪೋಸ್ಟ್‌ ಡಾಕ್ಟ್ರಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್, ಟೆಕ್ನಾಲಜಿ, ಮ್ಯಾನೇಜ್ಮೆಂಟ್, ಕಾಮರ್ಸ್‌, ಸೈನ್ಸ್‌ ಮತ್ತು ಟೆಕ್ನಾಲಜಿ, ಅಗ್ರಿಕಲ್ಚರ್ ಅಲೈಡ್ ಸೈನ್ಸಸ್ / ಟೆಕ್ನಾಲಜಿ, ಮೆಡಿಸಿನ್, ಹ್ಯೂಮ್ಯಾನಿಟೀಸ್ ಮತ್ತು ಸೋಷಿಯಲ್ ಸೈನ್ಸ್‌) ಅಧ್ಯಯನಗಳಿಗೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2A, 3A, 3B ಗೆ ಸೇರಿದವರಾಗಿರಬೇಕು.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಪಡೆಯಲು ಇತರೆ ಅರ್ಹತೆಗಳು

ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 8.00 ಲಕ್ಷ ರೂ ಮೀರಿರಬಾರದು.

ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇಕಡ.60 ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು.

QS World Ranking 500 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು.

ವಾರ್ಷಿಕ ಗರಿಷ್ಠ 10.00 ಲಕ್ಷ ಹಾಗೂ ಪೂರ್ಣ ಕೋರ್ಸ್‌ನ ಅವಧಿಗೆ ರೂ.20.00 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು.

ವಿದ್ಯಾರ್ಥಿಗಳು ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ / ಜಾಮೀನುದಾರ / ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ, ವಿದ್ಯಾರ್ಥಿಯ ವಿಸಾ ಪಾಸ್‌ ಪೋರ್ಟ್‌ ಅನ್ನು ಏರ್‌ ಟಿಕೇಟ್ ಪ್ರತಿ ಒದಗಿಸಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

ಮೇಲ್ಕಂಡ ಸಾಲ ಸೌಲಭ್ಯಗಳನ್ನು ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.


ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ವಿಳಾಸ: www.dbcdc.karnataka.gov.in

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-10-2023

Post a Comment

Previous Post Next Post

Top Post Ad

CLOSE ADS
CLOSE ADS
×