free sewing machine scheme-2023: ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!
holige yantra application- ಜಿಲ್ಲಾ ಪಂಚಾಯತ್, ಗ್ರಾಮೀಣ ಕೈಗಾರಿಕೆ ವಿಭಾಗ ರವರ ಕಛೇರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಔಧ್ಯಮಿಕ ಕೇಂದ್ರ ಯೋಜನೆ ಹಾಗೂ ವೃತ್ತಿಪರ ಕುಶಲಕರ್ಮಿಗಳ ಯೋಜನೆಯಡಿ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ವೃತ್ತಿ ನಿರ್ವಹಿಸುತ್ತಿರುವ ಕುಶಲಕರ್ಮಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.
ಅರ್ಹ ಅರ್ಜಿದಾರರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅಗತ್ಯ ದಾಖಲಾತಿಗಳ ಸಮೇತ ಅನ್ಲೈನ್ ಮೂಲಕ ಅರ್ಜಿ ಹಾಕಬಹುದು
ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಸಲು ಯಾವೆಲ್ಲ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಇತ್ಯಾದಿ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಈ ಮಾಹಿತಿ ಉಪಯುಕ್ತಯಾಗಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಿಗೆ ಶೇರ್ ಮಾಡಿ.
free sewing machine scheme-2023: ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರ?
ಹೊಲಿಗೆಯಂತ್ರ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷಗಳು ಇರತಕ್ಕದ್ದು.
ಅರ್ಜಿದಾರರು ಕನಿಷ್ಠ 7 ನೇ ತರಗತಿ ಉತ್ತೀರ್ಣರಾಗಿರಬೇಕು.
1) ವಿದ್ಯುತ್ ಚಾಲಿತ ಹೊಲಿಗೆಯಂತ್ರ ಪಡೆಯುವುದಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಮಹಿಳಾ ಅಭ್ಯರ್ಥಿ ಮಾತ್ರ ಅರ್ಜಿ ಸಲ್ಲಿಸಬವುದು.
2) ಗ್ರಾಮೀಣ ಪ್ರದೇಶದ ಬಿ.ಪಿ.ಎಲ್. ಕುಟುಂಬದ ಸದಸ್ಯರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
3) ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
4) ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶ.
Required documents for free free sewing machine scheme in karnataka- ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಅರ್ಜಿದಾರರು ನಿಮ್ಮ ಬಳಿ ಈ ಕೆಳಗಿನ ದಾಖಲೆಗಳನ್ನು ಇಟ್ಟುಕೊಳ್ಳಬೇಕು.
1) ಪಾಸ್ಪೋರ್ಟ್ ಗಾತ್ರದ ಭಾವಚಿತ್ರ (in JPG format),
2) ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ವರ್ಗಾವಣೆ ಪ್ರಮಾಣಪತ್ರ / ಎಸ್.ಎಸ್.ಎಲ್.ಸಿ ಅಂಕಪಟ್ಟಿ / ಇನ್ನಿತರ ಪ್ರಮಾಣಪತ್ರ) (in PDF file),
3) ಶೈಕ್ಷಣಿಕ ಅರ್ಹತೆ (ವರ್ಗಾವಣೆ ಪ್ರಮಾಣಪತ್ರ / ಅಂಕಪಟ್ಟಿ) (in PDF file),
4) ಜಾತಿ ಪ್ರಮಾಣ ಪತ್ರ (ಪ.ಜಾ , ಪ.ಪಂ ಮತ್ತು ಅಲ್ಪಸಂಖ್ಯಾತರವರಿಗೆ ಮಾತ್ರ) (in PDF file),
5) ಪಡಿತರ ಚೀಟಿ (in PDF file),
6) ಆಯಾ ಗ್ರಾಮ ಪಂಚಾಯತಿಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ ಹೊಲಿಗೆ (ಟೈಲರಿಂಗ್) ವೃತ್ತಿ ಮಾಡುತ್ತಿರುವ ಬಗ್ಗೆ ಧೃಢೀಕರಣ ಪ್ರಮಾಣಪತ್ರ (in PDF file).
ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಇಲ್ಲಿ ಕ್ಲಿಕ್ ಮಾಡಿ> Apply Now ಆನ್ಲೈನ್ ಮೂಲಕ ವಿವರ ಭರ್ತಿ ಮಾಡಿ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು.
Late date for application- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
1)ಬೀದರ್: 18-10-2023
2)ಹಾಸನ: 25-10-2023
3)ರಾಯಚೂರು: 27-10-2023
ಇತರೆ ಜಿಲ್ಲೆಯ ಮಾಹಿತಿ ಲಭ್ಯವಿಲ್ಲ
ಪ್ರಸ್ತುತ ಯಾವೆಲ್ಲ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ:
ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ಸಧ್ಯ ಬೀದರ್ , ಯಾದಗಿರಿ, ರಾಯಚೂರು, ವಿಜಯನಗರ, ಹಾಸನ. ಈ ಜಿಲ್ಲೆಗಳಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಉಳಿದ ಜಿಲ್ಲೆಯ ಆಸಕ್ತ ನಾಗರಿಕರು ಒಮ್ಮೆ ನಿಮ್ಮ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಭೇಟಿ ಮಾಡಿ ಅರ್ಜಿ ಆಹ್ವಾನದ ಕುರಿತು ಮಾಹಿತಿ ಪಡೆಯಬವುದು
ಅರ್ಜಿ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?
ನಿಗದಿಪಡಿಸಿರುವ ಗುರಿಗಿಂತ ಹೆಚ್ಚಿನ ಅರ್ಜಿಗಳು ಸ್ವೀಕೃತವಾಗಿದ್ದಲ್ಲಿ, ಲಾಟರಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯ ಉಪನಿರ್ದೇಶಕರು(ಗ್ರಾಮೀಣ ಕೈಗಾರಿಕೆ) ರವರ ಕಛೇರಿ ಅಥವಾ ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಬಹು.
