Gram panchayat jobs-2023: PUC ಮುಗಿಸಿದವರಿಗೆ ಗ್ರಂಥಾಲಯ ಮೇಲ್ವಿಚಾರಕ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

Gram panchayat jobs-2023: PUC ಮುಗಿಸಿದವರಿಗೆ ಗ್ರಂಥಾಲಯ ಮೇಲ್ವಿಚಾರಕ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

PUC ಮುಗಿಸಿದ ಅಭ್ಯರ್ಥಿಗಳಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ ಮಾಡಲಾಗಿದೆ.




ಕಲಬುರ್ಗಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ 68 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳು ಖಾಲಿ ಇದ್ದು ಇವುಗಳ ನೇಮಕಾತಿಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದ್ದಾರೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗಿರುವ ಮಾಹಿತಿಯು ಇಲ್ಲಿದೆ.  

ನಾವು ಈ ಲೇಖನದ ಕೊನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅಧಿಕೃತ ಜಾಲತಾಣ (official website) ಮತ್ತು ಅಧಿಕೃತ ಅಧಿಸೂಚನೆಯನ್ನು (official notification ) ನೀಡಿರುತ್ತೇವೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿ ಒದಗಿಸಿ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬವುದು. ಈ ಮಾಹಿತಿಯನ್ನು ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಿಗೆ ಶೇರ್ ಮಾಡಿ ಉದ್ಯೋಗಕ್ಕಾಗಿ ಹುಡುಕುತ್ತಿರುವವರಿಗೆ ಸಹಾಯವಾಗುತ್ತದೆ.

ಹುದ್ದೆಗಳ ಮಾಹಿತಿ: 

 ಒಟ್ಟು 68 ಹುದ್ದೆಗಳು ಖಾಲಿ ಇವೆ.

ಜಿಲ್ಲಾವಾರು ವಿಂಗಡಣೆ :

• ಬಾಗಲಕೋಟೆ - 23

• ಕಲಬುರಗಿ - 45


Educational Qualification- ಶೈಕ್ಷಣಿಕ ವಿದ್ಯಾರ್ಹತೆ :

 ಅಧಿಸೂಚನೆಯ ಪ್ರಕಾರ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC ಪಾಸಾಗಿರಬೇಕು.

 ಇದರ ಜೊತೆಗೆ ಸರ್ಟಿಫಿಕೇಶನ ಇನ್ ಲೈಬ್ರರಿ ಕೋರ್ಟ್ನ ಪ್ರಮಾಣ ಪತ್ರ ಮತ್ತು ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು.

Age limit - ವಯೋಮಿತಿಯ ವಿವರ :

 ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯೋಮಿತಿ ವರ್ಗಗಳ ಪ್ರಕಾರ ಈ ಕೆಳಗಿನಂತಿದೆ.

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 35 ವರ್ಷ 

• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 38 ವರ್ಷ 

• ಪ. ಜಾತಿ & ಪ. ಪಂಗಡದವರಿಗೆ - 40 ವರ್ಷ

Selection process- ಮೇಲ್ವಿಚಾರಕರ ಹುದ್ದೆಗಳ ಆಯ್ಕೆ ವಿಧಾನ:

Granthalaya Melvicharakaru ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು PUC ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Melvicharakaru salary - ವೇತನದ ವಿವರ :

ಮೇಲ್ವಿಚಾರಕರಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು

₹15,196 ವೇತನದ ಜೊತೆಗೆ ತುಟ್ಟಿ ಭತ್ಯೆಯನ್ನು ಪಾವತಿಸಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?


ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ನೀಡಿರುವ ವಿಳಾಸಕ್ಕೆ ಭೇಟಿ ನೀಡಿ ₹40 ಪಾವತಿಸಿ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿ ಖುದ್ದಾಗಿ ಕಚೇರಿಗೆ ಸಲ್ಲಿಸಬೇಕು.

ವಿಳಾಸ: ಉಪನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ ಕಲಬುರಗಿ.

ಅರ್ಜಿ ಶುಲ್ಕ:

ಕಲಬುರಗಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಪಡೆಯಲು 40 ರೂಪಾಯಿ ಪಾವತಿಸಿಬೇಕು.

ಬಾಗಲಕೋಟೆ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಈ ಕೆಳಗಿನಂತಿದೆ.

 - ಸಾಮಾನ್ಯ ವರ್ಗದವರಿಗೆ 500 ರೂ.

 - ಹಿಂದುಳಿದ ವರ್ಗದವರಿಗೆ 300 ರೂ.

- ಪ. ಜಾತಿ, ಪ. ಪಂಗಡ, ಪ್ರವರ್ಗ 1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 200ರೂ.

- ವಿಶೇಷ ಚೇತನ ಅಭ್ಯರ್ಥಿಗಳಿಗೆ 100ರೂ. ಅರ್ಜಿ ಶುಲ್ಕವಾಗಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು :

ಕಲಬುರಗಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು

 -ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 25.09.2023

 -ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 13.10.2023


ಬಾಗಲಕೋಟೆ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು

- ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 26.09.2023

- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 19.10.2023

ಕಲಬುರಗಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಿಂಕ್: Apply Now


ಕಲಬುರಗಿ ಜಿಲ್ಲೆ ಹುದ್ದೆ ಅಧಿಸೂಚನೆ:

ಬಾಗಲಕೋಟೆ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಿಂಕ್: Apply Now


ಕಲಬುರಗಿ ಜಿಲ್ಲೆ ಹುದ್ದೆ ಅಧಿಸೂಚನೆ:


ಇತರೆ ಜಿಲ್ಲೆಯವರು ಒಮ್ಮೆ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿ ಭೇಟಿ ಮಾಡಿ ಹುದ್ದೆ ನೇಮಕಾತಿ ಕುರಿತು ಮಾಹಿತಿ ಪಡೆಯಬವುದು.

Post a Comment

Previous Post Next Post

Top Post Ad

CLOSE ADS
CLOSE ADS
×