2023 24 ನೇ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ/ ಸಮಾಜ ಕಲ್ಯಾಣ ಇಲಾಖೆಯು ಅನುಷ್ಠಾನಗೊಳಿಸುತ್ತಿರುವಂತಹ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಒಂದನೇ ತರಗತಿಯಿಂದ 10ನೇ ತರಗತಿ ಓದುತ್ತಿರುವ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಅಧಿಕೃತ ವೆಬ್ಸೈಟ್ ಆದ
https://ssp.karnataka.gov.in ಗೆ ಭೇಟಿ ನೀಡುವ ಮೂಲಕ ಅಕ್ಟೋಬರ್ 20 ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕೆಂದು ತಿಳಿಸಲಾಗಿದೆ.
ಭದ್ರಾವತಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ 2023 24 ನೇ ಸಾಲಿನಲ್ಲಿ ಇರುವ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿ ವೇತನದ ಅಧಿಕೃತ ಜಾಲತಾಣದಲ್ಲಿ ನವೀನ ಹಾಗು ನವೀಕರಣ ವಿದ್ಯಾರ್ಥಿಗಳಿಗೆ SATS ID ಮೊಲಕ ಅರ್ಜಿ ಆಹ್ವಾನಿಸಲಾಗಿದೆ.
- ಅರ್ಜಿಯಲ್ಲಿ ಪೋಷಕರ ಮೊಬೈಲ್ ಸಂಖ್ಯೆ ವಿದ್ಯಾರ್ಥಿಯ ಆಧಾರ ಕಾರ್ಡ್ ಸಂಖ್ಯೆ ಪೋಷಕರ ಆಧಾರ್ ಸಂಖ್ಯೆ,
- ಈಐಡಿ ಸಂಖ್ಯೆ ಮತ್ತು ಆಧಾರ್ ಕಾರ್ಡ್ ನಲ್ಲಿ ಇರುವ ಹೆಸರು ಒಂದೇ ಇರಬೇಕಾಗುತ್ತದೆ.
- ವಿದ್ಯಾರ್ಥಿಯ ಹೆಸರಿನಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಿಡಿಂಗ್ ಹಾಗು NPCI mapping ಆಗಿರುವಂತಹ ರಾಷ್ಟ್ರೀಕೃತ ಬ್ಯಾಂಕ್ ಖಾತೆಯ ಸಂಖ್ಯೆ ಹೊಂದಿರಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈಗಲೂ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ ಈ 08282 263761 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ.