ರಚಿತಾ ರಾಮ್ ನಟನೆಯ ಮುಂಬರುವ 7 ಸಿನಿಮಾಗಳ ಪಟ್ಟಿ | Rachita Ram's most awaited upcoming movies

ಡಿಂಪಲ್ ಕ್ವೀನ್ ಎಂದೇ ಕರೆಯಲ್ಪಡುವ ಗುಳಿಕೆನ್ನೆ ಬೆಡಗಿ ರಚಿತಾ ರಾಮ್ ಚಂದನವನದ ಪ್ರಮುಖ ನಾಯಕಯಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಎಲ್ಲಾ ಪ್ರಮುಖ ನಟರೊಂದಿಗೆ ತೆರೆ ಹಂಚಿಕೊಂಡಿರುವ ರಚಿತಾ, 2013ರಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಇಲ್ಲಿ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ಮುಂಬರುವ ಸಿನಿಮಾಗಳ ಪಟ್ಟಿಯನ್ನು ನೀಡಲಾಗಿದೆ.


1) ಲವ್ ಮಿ ಆರ್ ಹೇಟ್ ಮಿ

ಡಾರ್ಲಿಂಗ್ ಕೃಷ್ಣ ಮತ್ತು ರಚಿತಾ ರಾಮ್ ನಟಿಸುತ್ತಿರುವ 'ಲವ್ ಮಿ ಆರ್ ಹೇಟ್ ಮಿ' ಚಿತ್ರವನ್ನು ದೀಪಕ್ ಗಂಗಾಧರ್ ನಿರ್ದೇಶಿಸುತ್ತಿದ್ದಾರೆ. ಮದನ್ ಗಂಗಾಧರ್ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಕೆ.ಎಂ. ಪ್ರಕಾಶ್ ಸಂಕಲನ ಮತ್ತು ವಿ ಸಂಭ್ರಮ ಶ್ರೀಧರ್ ಸಂಗೀತ ನಿರ್ದೇಶನವಿದೆ. ಈ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದ್ದು, ಸದ್ಯದಲ್ಲೇ ತೆರೆಗೆ ಬರುವ ನಿರೀಕ್ಷೆಯಿದೆಲಿಲ್ಲಿ

2) ಲಿಲ್ಲಿ

ವಿಜಯ್ ಎಸ್ ಗೌಡ ಕಥೆ ರಚಿಸಿ ನಿರ್ದೇಶನ ಮಾಡುತ್ತಿರುವ `ಲಿಲ್ಲಿ' ಸೈ-ಫೈ ಚಿತ್ರದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಎಸ್ ಸುಬ್ರಮಣಿ ಮತ್ತು ನಾಗರಾಜ್ ಬಂಡವಾಳ ಹೂಡಿದ್ದಾರೆ. ವೀರೇಶ್ ಗೌಡ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. 


3) ಡಾಲಿ

ಟಗರು ಚಿತ್ರದಲ್ಲಿ ಡಾಲಿ ಪಾತ್ರದಲ್ಲಿ ಕಂಗೊಳಿಸಿದ್ದ ಧನಂಜಯ್ ಅದೇ ಹೆಸರಿನ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ನಾಯಕಿಯಾಗಿ ರಚಿತಾ ರಾಮ್ ಆಯ್ಕೆಯಾಗಿದ್ದಾರೆ. ಗಣಪ ಚಿತ್ರ ಖ್ಯಾತಿ ಪ್ರಭು ಶ್ರೀನಿವಾಸ ನಿರ್ದೇಶನ ಮಾಡುತ್ತಿದ್ದರೆ, ಧನಂಜಯ್ ಅವರ `ಎರಡನೇ ಸಲ' ಚಿತ್ರವನ್ನು ನಿರ್ಮಸಿದ್ದ ಯೋಗೇಶ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. 


4) ಮ್ಯಾಟ್ನಿ

ಸತೀಶ್ ನೀನಾಸಂ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ 'ಮ್ಯಾಟ್ನಿ' ಚಿತ್ರವನ್ನು ಮನೋಹರ್ ಕಾಂಪಲ್ಲಿ ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಎಸ್ ಪಾರ್ವತಿ ಬಂಡವಾಳ ಹೂಡುತ್ತಿದ್ದಾರೆ. ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದ್ದರೆ, ಕೆ.ಎಂ.ಪ್ರಕಾಶ್ ಸಂಕಲನವಿದೆ. ಈ ಸಿನಿಮಾದ ಚಿತ್ರೀಕರಣ ಬಹುತೇಕ ಕಂಪ್ಲೀಟ್ ಆಗಿದ್ದು, ರಿಲೀಸ್‌ಗೆ ರೆಡಿಯಾಗಿದೆ. 

5) ಬ್ಯಾಡ್ ಮ್ಯಾನರ್ಸ್

ದುನಿಯಾ ಸೂರಿ ನಿರ್ದೇಶನದಲ್ಲಿ ಮೂಡಿ ಬಂದಿರುವ 'ಬ್ಯಾಡ್ ಮ್ಯಾನರ್ಸ್' ಚಿತ್ರದಲ್ಲಿ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ನಾಯಕನಾಗಿ ಹಾಗೂ ನಾಯಕಿಯಾಗಿ ರಚಿತಾ ರಾಮ್ ನಟಿಸಿದ್ದಾರೆ. ಚಿತ್ರಕ್ಕೆ ಕೆ.ಎಂ.ಸುಧೀರ್ ಬಂಡವಾಳ ಹೂಡಲಿದ್ದು. ಚರಣರಾಜ್ ಸಂಗೀತ ನೀಡಲಿದ್ದಾರೆ. ದೀಪು ಎಸ್ ಕುಮಾರ್ ಸಂಕಲನ ಮತ್ತು ಶೇಖರ್ ಎಸ್ ಛಾಯಾಗ್ರಹಣವಿದೆ. ಈ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ


6) ಸಂಜು ವೆಡ್ಸ್ ಗೀತಾ 2

2011ರಲ್ಲಿ ತೆರೆಕಂಡ ಸಂಜು ವೆಡ್ಸ್ ಗೀತಾ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ನಾಗಶೇಖರ್ ಸಂಜು ವೆಡ್ಸ್ ಗೀತಾ 2 ನಿರ್ದೇಶಿಸುವ ಜೊತೆಗೆ ನಿರ್ಮಿಸುತ್ತಿದ್ದಾರೆ. ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ನಾಯಕನಾಗಿ ನಟಿಸಲಿದ್ದು, ರಚಿತಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ನವೆಂಬರ್‌ನಿಂದ ಸಂಜು ವೆಡ್ಸ್ ಗೀತಾ 2 ಶೂಟಿಂಗ್ ಆರಂಭವಾಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದ್ದು, 2024ರಲ್ಲಿ ಸಿನಿಮಾ ತೆರೆಗೆ ಬರಲಿದೆ


7) ಶಬರಿ Searching For ರಾವಣ

ಶಬರಿ Searchin For ರಾವಣ ಎಂಬ ಥ್ರಿಲ್ಲರ್ ಚಿತ್ರದಲ್ಲಿ ರಚಿತಾ ರಾಮ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕಿರಣ್ ಕುಮಾರ್ ಸಿ ಗೌಡ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದರೆ, ಬಿ ಅಜನೀಶ್ ಲೋಕನಾಥ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ


Previous Post Next Post