ನೋಕಿಯಾ (Nokia) ಪೋನ್‌ಗಳೆಂದರೆ ಭಾರತೀಯರಿಗೆ ವಿಶೇಷವಾದ ಪ್ರೀತಿ. ಈ ಕಾರಣಕ್ಕೆ ಇತ್ತೀಚೆಗೆ ಅಗ್ಗದ ಬೆಲೆಯಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳನ್ನು ನೋಕಿಯಾ ಅನಾವರಣ ಮಾಡಿಕೊಂಡು ಬಂದಿದೆ. ಇದರ ಜೊತೆಗೆ ಈಗ ಪ್ರಮುಖ ಇ-ಕಾಮರ್ಸ್ ಸೈಟ್‌ವೊಂದರಲ್ಲಿ ನೋಕಿಯಾದ ಈ ಜನಪ್ರಿಯ ಫೋನ್‌ಗೆ ಆಫರ್ ನೀಡಲಾಗಿದೆ.
ಹೌದು, ಸ್ಮಾರ್ಟ್‌ಫೋನ್ ಗಳು ಇಂದು ಅಗ್ಗದ ಬೆಲೆಯಿಂದ ಹಿಡಿದು ದುಬಾರಿ ಬೆಲೆಯಲ್ಲಿ ಲಭ್ಯ ಇವೆ. ಈ ಮೂಲಕ ಗ್ರಾಹಕರು ತಮಗೆ ಅಗತ್ಯ ಇರುವ ಸ್ಮಾರ್ಟ್‌ಫೋನ್ ಅನ್ನು ಖರೀದಿ ಮಾಡಬಹುದು. ಈ ನಡುವೆ ನಿತ್ಯ ಬಳಕೆಗೆ ಸಾಮಾನ್ಯ ಫೋನ್ ಬೇಕು ಎಂದವರು ಈ ನೋಕಿಯಾ C12 ಪ್ರೊ ಸ್ಮಾರ್ಟ್‌ಫೋನ್ (Nokia C12 Pro Smartphone) ಖರೀದಿ ಮಾಡಬಹುದಾಗಿದೆ. ಇದು 6.3 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದೆ. ಹಾಗಿದ್ರೆ, ಈ ಫೋನ್ ಪ್ರಮುಖ ಫೀಚರ್ಸ್ ಹಾಗೂ ಆಫರ್ ಬೆಲೆ ಎಷ್ಟು ಎಂಬಿತ್ಯಾದಿ ಮಾಹಿತಿ ಇಲ್ಲಿದೆ ನೋಡಿ.
ನೋಕಿಯಾ C12 ಪ್ರೊ ಸ್ಮಾರ್ಟ್‌ಫೋನ್ ಆಫರ್ ವಿವರ: ಈ ಫೋನ್ 9,999ರೂ.ಗಳ ಸಾಮಾನ್ಯ ಬೆಲೆಯಲ್ಲಿ ಫ್ಲಿಪ್‌ಕಾರ್ಟ್‌ನಲ್ಲಿ ಕಾಣಿಸಿಕೊಂಡಿದೆ. ಆದರೆ ನೀವು ಇದನ್ನು 7,899 ರೂ.ಗಳಿಗೆ ಖರೀದಿ ಮಾಡಬಹುದು. ಯಾಕೆಂದರೆ ಇದಕ್ಕೆ 21% ರಿಯಾಯಿತಿ ನೀಡಲಾಗಿದೆ. ಇಷ್ಟೇ ಅಲ್ಲದೆ ಕೆಲವು ಬ್ಯಾಂಕ್ ಕಾರ್ಡ್‌ಗಳ ಮೇಲೂ ಭಾರೀ ಆಫರ್ ಇದ್ದು, ಈ ಮೂಲಕ ಹೆಚ್ಚಿನ ಹಣ ಉಳಿತಾಯ ಮಾಡಬಹುದಾಗಿದೆ.
ಈ ಸ್ಮಾರ್ಟ್‌ಫೋನ್ ಅನ್ನು ನೀವು ಖರೀದಿ ಮಾಡುವಾಗ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ (Flipkart Axis Bank Card) ಬಳಕೆ ಮಾಡಿದರೆ 5% ಕ್ಯಾಶ್‌ಬ್ಯಾಕ್ ಸಿಗಲಿದೆ. ಜೊತೆಗೆ ಪಾರ್ಟನರ್‌ಶಿಫ್ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್ ಪೇ ಲೇಟರ್ ಮೂಲಕ ಖರೀದಿ ಮಾಡಿದ್ರೆ 20,000ರೂ. ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಬೆನಿಫಿಟ್‌ಗಳನ್ನು ಪಡೆದುಕೊಳ್ಳಬಹುದು. ಇದರೊಂದಿಗೆ ಫ್ಯೂಚರ್ ನೌ ಮೋರ್ ನಲ್ಲಿ ಒಂದು ಅನಿರೀಕ್ಷಿತ ಕ್ಯಾಶ್‌ಬ್ಯಾಕ್ ಕೂಪನ್ ಸಹ ಸಿಗಲಿದೆ. ಉಳಿದಂತೆ ಡೆಬಿಟ್ ಕಾರ್ಡ್ ಇಎಮ್‌ಐ ಮೂಲಕ ನೀವು ತಿಂಗಳಿಗೆ 490ರೂ.ಗಳನ್ನು ಪಾವತಿ ಮಾಡಿ ಈ ಫೋನ್ ಖರೀದಿ ಮಾಡಬಹುದು.
ನೋಕಿಯಾ C12 ಪ್ರೊ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ವಿವರ: ಈ ಫೋನ್ 6.3 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ (IPS LCD display) ಆಯ್ಕೆ ಪಡೆದುಕೊಂಡಿದ್ದು, 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ 278 ppi ಪಿಕ್ಸೆಲ್ ಸಾಂದ್ರತೆ ಆಯ್ಕೆ ಇರುವುದರಿಂದ ಈ ಫೋನ್ ಬಳಕೆದಾರರು ಅದ್ಭುತವಾದ ಚಿತ್ರಗಳನ್ನು ವೀಕ್ಷಣೆ ಮಾಡಬಹುದಾಗಿದೆ.
ನೋಕಿಯಾ C12 ಪ್ರೊ ಸ್ಮಾರ್ಟ್‌ಫೋನ್ ಪ್ರೊಸೆಸೆರ್ ಬಲ: ಈ ಸ್ಮಾರ್ಟ್‌ಫೋನ್ ಯುನಿಸೊಕ್ SC9863A1 ಸಿಪಿಯು (Unisock SC9863A1 CPU) ಬಲ ಹೊಂದಿದ್ದು, 3GB RAM ಹಾಗೂ ಪವರ್ ವಿಆರ್ GE8322 ಗ್ರಾಫಿಕ್ಸ್‌ನಿಂದ ರನ್ ಆಗಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಉತ್ಪಾದನಾ ಪ್ರಕ್ರಿಯೆಯು 22nm ತಂತ್ರಜ್ಞಾನವನ್ನು ಬಳಕೆ ಮಾಡಲಿದ್ದು, ಈ ಮೂಲಕ ಬಳಕೆದಾರರು ಉತ್ತಮ ಕಾರ್ಯಕ್ಷಮತೆ ನಿರೀಕ್ಷೆ ಮಾಡಬಹುದಾಗಿದೆ. ಇಷ್ಟೇ ಅಲ್ಲದೆ 64GB ಇಂಟರ್ ಸ್ಟೋರೇಜ್ ಆಯ್ಕೆಯ ಈ ಫೋನ್‌ನಲ್ಲಿ ಎಸ್‌ಡಿ ಕಾರ್ಡ್ ಬಳಕೆ ಮಾಡುವ ಮೂಲಕ 256GB ವರೆಗೆ ವಿಸ್ತರಣೆ ಮಾಡಿಕೊಳ್ಳಬಹುದು.
ನೋಕಿಯಾ C12 ಪ್ರೊ ಸ್ಮಾರ್ಟ್‌ಫೋನ್ ಕ್ಯಾಮೆರಾ ಹಾಗೂ ಇತರೆ: ಇನ್ನು ಈ ಫೋನ್ 8 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದ್ದು, ಇದು 3264 x 2448 ಪಿಕ್ಸೆಲ್‌ಗಳ ರೆಸಲ್ಯೂಶನ್ ಸಾಮರ್ಥ್ಯದ ಚಿತ್ರಗಳನ್ನು ಸೆರೆಹಿಡಿಯುತ್ತದೆ. ಜೊತೆಗೆ ಹೆಚ್ಚಿನ ಡೈನಾಮಿಕ್ ರೇಂಜ್ (HDR) ಶೂಟಿಂಗ್ ಸೆಟ್ಟಿಂಗ್ ಆಯ್ಕೆಯನ್ನೂ ಸಹ ಪಡೆದುಕೊಂಡಿದೆ. ಇದರೊಂದಿಗೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾದಲ್ಲಿ ಈ ಫೋನ್ ಕಾಣಿಸಿಕೊಂಡಿದ್ದು, 4000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದೆ.