ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಒಪ್ಪೋ A2m ಸ್ಮಾರ್ಟ್‌ಫೋನ್‌! ಪ್ರೀಮಿಯಂ ಡಿಸೈನ್‌ ವಿಶೇಷ

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಒಪ್ಪೋ A2m ಸ್ಮಾರ್ಟ್‌ಫೋನ್‌! ಪ್ರೀಮಿಯಂ ಡಿಸೈನ್‌ ವಿಶೇಷ

ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್‌ ವಲಯದಲ್ಲಿ ಭಾರಿ ಡಿಮ್ಯಾಂಡ್‌ ಇದೆ. ತನ್ನ ವಿಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ಒಪ್ಪೋ A2m ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.



ಹೌದು, ಒಪ್ಪೋ A2m ಸ್ಮಾರ್ಟ್‌ಫೋನ್‌ ಮೊಬೈಲ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಎಡಭಾಗದಲ್ಲಿ ವಾಲ್ಯೂಮ್ ಬಟನ್‌ಗಳೊಂದಿಗೆ ಫ್ಲಾಟ್ ಫ್ರೇಮ್ ವಿನ್ಯಾಸವನ್ನು ಹೊಂದಿದೆ. ಜೊತೆಗೆ ಫೋನ್‌ನ ಹಿಂಭಾಗವು ಆಧುನಿಕ ಮತ್ತು ಪ್ರೀಮಿಯಂ ಆಗಿ ಕಾಣುತ್ತದೆ. ಇದು ಡ್ಯೂಡ್ರಾಪ್‌ ನಾಚ್ಡ್‌ ಡಿಸ್‌ಪ್ಲೇ ವಿನ್ಯಾಸದ ಮೂಲಕ ಗಮನಸೆಳೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ A2m ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ರಚನೆ

ಒಪ್ಪೋ A2m ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 269 PPI ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದೆ. ಜೊತೆಗೆ ಡಿಸ್‌ಪ್ಲೇ 720 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ನೀಡಲಿದೆ.

ಒಪ್ಪೋ A2m ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು?

ಒಪ್ಪೋ A2m ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 6020 SoC ಪ್ರೊಸಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ColorOS 13.1ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM + 256GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಒಪ್ಪೋ A2m ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಒಪ್ಪೋ A2m ಸ್ಮಾರ್ಟ್‌ಫೋನ್‌ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಒಪ್ಪೋ A2m ಸ್ಮಾರ್ಟ್‌ಫೋನ್‌ ಬ್ಯಾಟರಿ ಮತ್ತು ಇತರೆ ಸೌಲಭ್ಯ

ಒಪ್ಪೋ A2m ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ವೈರ್ಡ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5 ಜಿ, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.3, ಜಿಎನ್‌ಎಸ್‌ಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್‌ ಅನ್ನು ಒಳಗೊಂಡಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್, ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಸಿಂಗಲ್ ಸ್ಪೀಕರ್ ಅನ್ನು ಸಹ ಒಳಗೊಂಡಿದೆ.

ಒಪ್ಪೋ A2m ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ

ಒಪ್ಪೋ A2m ಸ್ಮಾರ್ಟ್‌ಫೋನ್‌ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆ ಆಗಿದೆ. ಆದರಿಂದ ಚೀನಾದಲ್ಲಿ 6GB RAM ಮತ್ತು 128GB ಸ್ಟೊರೇಜ್‌ ಆಯ್ಕೆಗೆ CNY 1,499 (ಸುಮಾರು 17,300ರೂ)ಬೆಲೆಯನ್ನು ಹೊಂದಿದೆ. ಆದರೆ 8GB RAM ಮತ್ತು 256GB ಇಂಟರ್‌ ಸ್ಟೋರೇಜ್ ಆಯ್ಕೆಯು CNY 1,799 (ಅಂದಾಜು 20,700ರೂ)ಬೆಲೆ ಪಡೆದಿದೆ. ಇನ್ನು ಸ್ಮಾರ್ಟ್‌ಫೋನ್‌ 12GB RAM ಮತ್ತು 256GB ಸ್ಟೋರೇಜ್‌ ಆಯ್ಕೆಯು CNY 2,099 (ಸುಮಾರು 23,900ರೂ)ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಸ್ಟಾರಿ ನೈಟ್ ಬ್ಲ್ಯಾಕ್ ಅಥವಾ ಫ್ಲೈಯಿಂಗ್ ಫ್ರಾಸ್ಟ್ ಪರ್ಪಲ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.


Post a Comment

Previous Post Next Post

Top Post Ad

CLOSE ADS
CLOSE ADS
×