ರಿಲಯನ್ಸ್ ಜಿಯೋ: ಐಫೋನ್ 15 ಖರೀದಿಸಿದರೆ 6 ತಿಂಗಳು ಫ್ರೀ ಪ್ಲಾನ್

 ಹೊಸದಾಗಿ ಲಾಂಚ್ ಆಗಿರುವ ಆಪಲ್ ಐಫೋನ್ 15 (Apple iPhone 15) ಖರೀದಿಯ ಮೇಲೆ ರಿಲಯನ್ಸ್ ಜಿಯೋ (Reliance Jio) ಬಂಪರ್ ಆಫರ್ ಘೋಷಣೆ ಮಾಡಿದೆ.



ರಿಲಯನ್ಸ್ ರಿಟೇಲ್ ಸ್ಟೋರ್‌ಗಳು, ರಿಲಯನ್ಸ್ ಡಿಜಿಟಲ್ ಆನ್‌ಲೈನ್ ಅಥವಾ ಜಿಯೋಮಾರ್ಟ್‌ನಲ್ಲಿ ಜಿಯೋ ಐಫೋನ್ 15 ಖರೀದಿ ಮಾಡಿದರೆ 2,394 ರೂ.ಮೌಲ್ಯದ ಆರು ತಿಂಗಳ ಪ್ಲಾನ್ ಅನ್ನು ಉಚಿತವಾಗಿ ಬಳಕೆದಾರರಿಗೆ ನೀಡಲಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಬಳಕೆದಾರರ ನಾಡಿ ಮಿಡಿತವನ್ನು ಅರಿತು ಕೊಂಡಿರುವ ರಿಲಯನ್ಸ್ ಜಿಯೋ, ಆಪಲ್ ಐಫೋನ್ 15 ಖರೀದಿಸುವವರಿಗೆ 399 ರೂ. ಪ್ಲಾನ್ ಅನ್ನು ಆರು ತಿಂಗಳುಗಳ ವರೆಗೆ ಉಚಿತವಾಗಿ ನೀಡಲಿದೆ. ಇದರ ಒಟ್ಟು ಮೌಲ್ಯ 2,394 ರೂ. ಗಳಾಗಲಿದ್ದು, ಬಳಕೆದಾರರಿಗೆ ಹೆಚ್ಚಿನ ಲಾಭವನ್ನು ಮಾಡಿಕೊಡಲಿದೆ.

ರಿಲಯನ್ಸ್ ಜಿಯೋ, ಆಪಲ್ ಐಫೋನ್ 15 ಖರೀದಿಸುವವರಿಗೆ ನೀಡುತ್ತಿರುವ 399 ರೂ. ಪ್ಲಾನ್ ನಲ್ಲಿ ಬಳಕೆದಾರರಿಗೆ ಪ್ರತಿ ನಿತ್ಯ 3 ಜಿಬಿ ಹೈ ಸ್ಪೀಡ್ ಡೇಟಾ ಬಳಕೆಗೆ ದೊರೆಯಲಿದ್ದು, ಜೊತೆಗೆ ಸಂಪೂರ್ಣ ಅನ್ ಲಿಮಿಟೆಡ್ ಕಾಲಿಂಗ್ ಸಹ ಸಿಗಲಿದೆ. ಅಲ್ಲದೇ ಪ್ರತಿನಿತ್ಯ 100 ಎಸ್ಎಂಎಸ್ ಗಳನ್ನು ಸಹ ಉಚಿತವಾಗಿ ಕಳುಹಿಸಬಹುದಾಗಿದೆ.






Previous Post Next Post