ಬೆಳೆ ಹಾನಿ ಪರಿಹಾರ ಯಾವಾಗ ಯಾರಿಗೆ ಜಮೆ ಆಗುತ್ತದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಅಧ್ಯಯನಗೈಯಲು ಕೇಂದ್ರದಿಂದ ಮೂರು ತಂಡಗಳು ಮುಂದಿನ ವಾರದಲ್ಲಿ ಆಗಮಿಸುತ್ತಿದ್ದು, ಬರಗಾಲ ತಂಡ ಪರಿಶೀಲಿಸಿದ ನಂತರ ಬೆಳೆಹಾನಿ ಪರಿಹಾರ ಹಣ ಜಮೆ ಮಾಡಲಾಗುವುದು.



ಹೌದು, ಈ ಕುರಿತು ರಾಜ್ಯದ ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಅಧ್ಯಯನಗೈಯಲು ಕೇಂದ್ರದಿಂದ ಅಕ್ಟೋಬರ್ 10 ರೊಳಗೆ ತಂಡಗಳು ಆಗಮಿಸಲಿವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 161 ತಾಲೂಕುಗಳಲ್ಲಿ ತೀವ್ರ, 34 ತಾಲೂಕುಗಳಲ್ಲಿ ಸಾಧಾರಣ ಹೀಗೆ ಒಟ್ಟು 195 ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಈಗಾಗಲೇ ಘೋಷಣೆ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿದ ಹಿನ್ನೆಲೆಯಲ್ಲಿ ಬರಗಾಲ ಪರಿಸ್ಥಿತಿ ಅರಿಯಲು ಕೇಂದ್ರ ಸರ್ಕಾರವು ಬರ ಅಧ್ಯಯನ ತಂಡಗಳನ್ನು ಕಳುಹಿಸುವುದಕ್ಕಾಗಿ ಮಾಹಿತಿ ನೀಡಿದೆ. ಇದೇ ಅಕ್ಟೋಬರ್ 10 ರೊಳಗೆ ತಂಡಗಳು ಆಗಮಿಸಲಿವೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

ಒಂದೆಡೆ ಅತೀವೃಷ್ಟಿ ಮತ್ತೊಂದೆಡೆ ಅನಾವೃಷ್ಟಿ ಪರಿಸ್ಥಿತಿಯಿದೆ. ಹೆಚ್ಚಿನ ಪ್ರಮಾಣದಲ್ಲಿ ಬರಗಾಲವಿದೆ. ಬೆಳೆಹಾನಿ ಸಮೀಕ್ಷೆ ನಡೆದಿದ್ದು, ಈಗಾಗಲೇ ಶೇ. 95 ರಷ್ಟು ಬೆಳೆ ಹಾನಿ ಸಮೀಕ್ಷೆಯಾಗಿದೆ. ತಂಡಗಳು ಆಗಮಿಸುವ ಹೊತ್ತಿಗೆ ಸಮೀಕ್ಷೆ ಪೂರ್ಣಗೊಂಡು ವರದಿ ಅಂತಿಮಗೊಳ್ಳಲಿದೆ.

ಪ್ರಾಥಮಿಕ ವರದಿ ಪ್ರಕಾರ ಈಗಾಗಲೇ 40 ಲಕ್ಷ ಹೆಕ್ಟೇರ್ ದಲ್ಲಿ ಸುಮಾರು 29 ಸಾವಿರ ಕೋಟಿ ರೂಪಾಯಿ ಅಂದಾಜಿಸಲಾಗಿದೆ. 4000 ಕೋಟಿ ರೂಪಾಯಿ ಪರಿಹಾರ ನೀಡಲು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.


ಬೆಳೆ ಸಮೀಕ್ಷೆ ಜಮೆಯ ಸ್ಟೇಟಸ್ ಎಲ್ಲಿ ಚೆಕ್ ಮಾಡಬೇಕು?

ಬೆಳೆ ಸಮೀಕ್ಷೆಯ ಸ್ಟೇಟಸನ್ನು ರೈತರು ಚೆಕ್ ಮಾಡಲು ಈ


https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪರಿಹಾರ ಹಣ ಸಂದಾಯ ವರದಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಆಧಾರ್ ಸಂಖ್ಯೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ಸೆಲೆಕ್ಟ್ ಇಯರ್ ಟೈಪ್ ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆಧಾರ್ ಸಂಖ್ಯೆ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು. ನಂತರ ವಿವರಗಳನ್ನು ಪಡೆಯಲು / Fetch Details ಮೇಲೆ ಕ್ಲಿಕ್ ಮಾಡಬೇಕು. ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಬಹುದು.

ಬೆಳೆ ಹಾನಿ ಪರಿಹಾರ ಹಣ ಪಡೆಯಲು ಬೆಳೆ ಸಮೀಕ್ಷೆ ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ನೀವು ಬೆಳೆ ಸಮೀಕ್ಷೆ ಮಾಡಿಸಿದ್ದರೆ ಬೆಳೆ ಸಮೀಕ್ಷೆ ಸರಿಯಾಗಿ ಆಗಿದೆಯೋ ಇಲ್ಲವೋ ಎಂಬುದನ್ನು ಸಹ ಚೆಕ್ ಮಾಡಿಕೊಳ್ಳಬಹುದು. ಹೌದು, ರೈತರು ಗೂಗಲ್ ಪ್ಲೇ ಸ್ಟೇರ್ ನಲ್ಲಿ Bele Darshak 2023-2024 ಎಂದು ಟೈಪ್ ಮಾಡಿ ಬೆಳೆ ದರ್ಶಕ್ ಆ್ಯಪ್ ನ್ನು ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡು ಬೆಳೆ ಸಮೀಕ್ಷೆ ಸರಿಯಾಗಿ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು.


ಬೆಳೆ ಹಾನಿ ಪರಿಹಾರ ಯಾರಿಗೆ ಜಮೆಯಾಗಲಿದೆ?

ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆಗಳನ್ನು ಯಾರು ಬೆಳೆ ಸಮೀಕ್ಷೆ ಮಾಡಿಸಿದ್ದಾರೋ ಅಂತಹ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಬಿಡುಗಡೆ ಮಾಡಲಾಗುವುದು. ಹೌದು, ರೈತರು ತಮ್ಮ ಬೆಳೆಗಳಿಗೆ ತಮ್ಮ ಮೊಬೈಲ್ ಮೂಲಕ ಬೆಳೆ ಸಮೀಕ್ಷೆ ಮಾಡಿಸಿರಬೇಕು. ಇಲ್ಲದಿದ್ದರೆ ಪ್ರತಿ ಗ್ರಾಮ ಪಂಚಾಯತಿಗೆ ಸಮೀಕ್ಷೆ ಮಾಡಲು ಪ್ರತಿನಿಧಿಯನ್ನು ನಿಯೋಜಿಸಲಾಗಿರುತ್ತದೆ. ಅವರ ಕಡೆಯಿಂದಲೂ ಬೆಳೆ ಸಮೀಕ್ಷೆ ಮಾಡಿಸಿರಬೇಕು

Previous Post Next Post