ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ. ಶೀಘ್ರವೇ ಗ್ರಾಮ ಲೆಕ್ಕಾಧಿಕಾರಿ ಮತ್ತು ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಯನ್ನು ಮಾಡುವ ಸುಳಿವನ್ನು ಸರ್ಕಾರ ನೀಡಿದೆ.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಶಶೀಲ್ ಜಿ. ನಮೋಶಿ (ಶಿಕ್ಷಕರ ಕ್ಷೇತ್ರ) ಕೇಳಿದ್ದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉತ್ತರ ನೀಡಿದ್ದಾರೆ. ಗ್ರಾಮ ಲೆಕ್ಕಾಧಿಕಾರಿ (village accountant), ಗ್ರಾಮ ಆಡಳಿತಾಧಿಕಾರಿ (panchayat development officer) ನೇಮಕಾತಿ ಕುರಿತು ಮಾಹಿತಿ ನೀಡಿದ್ದಾರೆ.
ಸದಸ್ಯರು ಪ್ರಸ್ತುತ ರಾಜ್ಯದಲ್ಲಿ ಖಾಲಿಯಿರುವ ಗ್ರಾಮ ಗ್ರಾಮ ಲೆಕ್ಕಾಧಿಕಾರಿ/ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಸಂಖ್ಯೆ ಎಷ್ಟು ಎಂದು ಕೇಳಿದ್ದರು. ಜಿಲ್ಲಾವಾರು, ತಾಲ್ಲೂಕುವಾರು ಮಾಹಿತಿ ನೀಡಬೇಕು ಎಂದು ಪ್ರಶ್ನಿಸಿದ್ದರು.
ಗ್ರಾಮ ಆಡಳಿತಾಧಿಕಾರಿಗಳ ಪ್ರಮುಖ ಕರ್ತವ್ಯ ಜವಾಬ್ದಾರಿಗಳ ಮಾಹಿತಿಯನ್ನು ನೀಡುವುದು ಮತ್ತು ಈ ಹುದ್ದೆಗೆ ನಿಗದಿ ಪಡಿಸಿರುವ ವೇತನ ಎಷ್ಟು? ಎಂದು ಕೇಳಿದ್ದರು. ಸಚಿವರು ತಮ್ಮ ಉತ್ತರದಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನಿಗದಿ ಪಡಿಸಿರುವ ವೇತನ ಶ್ರೇಣಿ ರೂ. 21400 ರಿಂದ 42000 ರೂ. ಎಂದು ಮಾಹಿತಿ ನೀಡಿದ್ದಾರೆ.
ಹುದ್ದೆಗಳ ಭರ್ತಿ ಹೇಗೆ?
ಗ್ರಾಮ ಆಡಳಿತ ಅಧಿಕಾರಿಗಳನ್ನು ನೇಮಿಸಲು ವಿದ್ಯಾರ್ಹತೆಯ ಮೆರಿಟ್ ಹುದ್ದೆಗಳನ್ನು ಪರಿಗಣಿಸಲಾಗುತ್ತದೆಯೇ? ಅಥವಾ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆಯೇ? ಎಂದು ಕೇಳಿದ್ದರು. ಸಚಿವರು ತಮ್ಮ ಉತ್ತರದಲ್ಲಿ ಜಿಲ್ಲಾ ಮತ್ತು ತಾಲೂಕುವಾರು ಮಾಹಿತಿ ನೀಡಿ ಖಾಲಿ ಇರುವ ಒಟ್ಟು ಗ್ರಾಮ ಆಡಳಿತ ಅಧಿಕಾರಿಗಳ ಒಟ್ಟು ಹುದ್ದೆಗಳು 1839 ಎಂದು ಮಾಹಿತಿ ನೀಡಿದ್ದಾರೆ.
ಸಚಿವರು ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡಲು ಪ್ರಸ್ತುತ ಇರುವ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದಾರೆ.
ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ವಿಳಂಬಕ್ಕೆ ಕಾರಣಗಳೇನು?. ನೇಮಕಾತಿ ವಿಳಂಬದಿಂದಾಗಿ ಜನ ಸಾಮಾನ್ಯರ ಸೇವೆಗಳಿಗೆ ತೊಡಕು ಉಂಟಾಗುವುದಿಲ್ಲವೇ? ಯಾವ ಕಾಲಮಿತಿಯಲ್ಲಿ ಸದರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಕೇಳಿದ್ದರು. ಸಚಿವರು ಈ ನಿಟ್ಟಿನಲ್ಲಿ ಪ್ರಕ್ರಿಯೆಯನ್ನು ಅಂತಿಗೊಳಿಸಿ ಖಾಲಿಯಿರುವ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಕರ್ನಾಟಕ ಸರ್ಕಾರ ನೀಡಿದ್ದ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು ಖಾಲಿ ಇರುವ ಹುದ್ದೆಗಳು ಪಿಡಿಒ 660. ಕಾರ್ಯದರ್ಶಿ 350 ಮತ್ತು ಕಾರ್ಯದರ್ಶಿ ಗ್ರೇಡ್-2 415. ಪಿಡಿಒ 150, ಕಾರ್ಯದರ್ಶಿ ಗ್ರೇಡ್-1 135, ಕಾರ್ಯದರ್ಶಿ ಗ್ರೇಡ್-2, ದ್ವಿತೀಯ ದರ್ಜೆ ಲೆಕ್ಕ ಸಹಾಯಕ 105 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುತ್ತದೆ.