ಬೆಂಗಳೂರು ನಗರದಲ್ಲಿ ಒಂದೇ ಸೂರಿನಡಿ ಹಲವು ನಾಗರಿಕ ಸೇವೆಗಳನ್ನು ನೀಡಲು 'ಬೆಂಗಳೂರು ಒನ್' ಕೇಂದ್ರಗಳನ್ನು ತೆರೆಯಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಕರ್ನಾಟಕ ಸರ್ಕಾರ 'ಕರ್ನಾಟಕ ಒನ್' ಸೇವಾಕೇಂದ್ರವನ್ನು ಆರಂಭಿಸಿದೆ.
ಪ್ರಸ್ತುತ ಕರ್ನಾಟಕದಲ್ಲಿ 60ಕ್ಕೂ ಹೆಚ್ಚು ಕರ್ನಾಟಕ ಒನ್ ಸೇವಾ ಕೇಂದ್ರಗಳಿವೆ. ಹಲವು ಜಿಲ್ಲೆಗಳಲ್ಲಿ ಹೊಸ ಕೇಂದ್ರಗಳನ್ನು ತೆರೆಯಲು ಆಗಾಗ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ನಾಗರಿಕರಿಗೆ ಹಲವು ವಿವಿಧ ಸೇವೆ ನೀಡುವ ಈ ಕೇಂದ್ರ ಆರಂಭಿಸಲು ಬೇಕಾದ ಅರ್ಹತೆಗಳೇನು?, ಅರ್ಜಿ ಸಲ್ಲಿಕೆ ಹೇಗೆ? ಮುಂತಾದ ಮಾಹಿತಿಗಳು ಇಲ್ಲಿವೆ.
ಆಸಕ್ತರು https://www.karnatakaone.gov.in/Public/FranchiseeTerms ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಕೆ ಮಾಡಲು ಜನವರಿ 2, 2014 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವವರು ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಪದವಿ, ಸ್ನಾತ್ತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕರ್ನಾಟಕ ಒನ್ ಕೇಂದ್ರ ಸ್ಥಾಪಿಸಲು ಕನಿಷ್ಠ 100 ಚದರ ಅಡಿ ವಿಸ್ತೀರ್ಣವುಳ್ಳ ಸುಸಜ್ಜಿತ ಕಟ್ಟಡ, ಕಂಪ್ಯೂಟರ್, ಪ್ರಿಂಟರ್, ಸ್ಕ್ಯಾನರ್, ಬಯೋಮೆಟ್ರಿಕ್ ಡಿವೈಸ್ ಮತ್ತು 8 ಗಂಟೆಗಳ ವಿದ್ಯುತ್ ಪರ್ಯಾಯ ವ್ಯವಸ್ಥೆ ಹೊಂದಿರಬೇಕು.
ಈಗಾಗಲೇ ಸರಕಾರದಿಂದ ಅಸ್ತಿತ್ವದಲ್ಲಿರುವ ಕರ್ನಾಟಕ ಒನ್ ಕೇಂದ್ರದಿಂದ ಅಂತರ 2 ಕಿ. ಮೀ. ಇರಬೇಕು ಹಾಗೂ ಅರ್ಜಿದಾರರು ಕೇಂದ್ರವನ್ನು ಸ್ಥಾಪಿಸಲು ಒಂದಕ್ಕಿಂತ ಹೆಚ್ಚು ಸ್ಥಳಗಳನ್ನು ಗುರುತಿಸಿದಲ್ಲಿ ಜಿಲ್ಲಾ ಕಾರ್ಯಪಡೆಯ ನಿರ್ಣಯ ಅಂತಿಮ ಇರುವ ಮಾನದಂಡಗಳಿಗೆ ಬದ್ಧರಾಗಿರಬೇಕು.
ಮಾನದಂಡಳ ಬಗ್ಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹೆಲ್ಪ್ ಡೆಸ್ಕ್ ಸಂಖ್ಯೆ 080-49203888, 8904085030ಗೆ ಸಂಪರ್ಕಿಸಬಹುದು. ವಲಯ ಕೋಆರ್ಡಿನೇಟರ್ ಆಗಿರುವ ಅನೀಸ್ ಅಹಮದ್ ಅವರನ್ನು 9845220135, amkl@karnataka.gov.in ಮೂಲಕ ಸಂಪರ್ಕಿಸಬಹುದು.
ಈಗ ಕರ್ನಾಟಕ ಒನ್ ಕೇಂದ್ರದ ಮೂಲಕ ಹಲವು ಸೇವೆಗಳನ್ನು ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಬಳಿಕ ಫಲಾನುಭವಿಗಳು ಈ ಕೇಂದ್ರದ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಸಹ ಅವಕಾಶ ನೀಡಲಾಗಿದೆ.
