KHPT Recruitment 2023: ರಾಜ್ಯ ಸರ್ಕಾರಿ ಹುದ್ದೆ ಖಾಲಿ ಇದೆ- ಆಸಕ್ತರು ಡಿ.31ರೊಳಗೆ ರೆಸ್ಯೂಮ್ ಕಳುಹಿಸಿ

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಾಗಲಕೋಟೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.



KHPT Recruitment 2023: 

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡಿಸ್ಟ್ರಿಕ್ಟ್ ಪ್ರೋಗ್ರಾಮ್ ಕೋಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಾಗಲಕೋಟೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೋಷಿಯಲ್ ವರ್ಕ್, ಸೋಷಿಯಾಲಜಿ, ವುಮೆನ್ ಸ್ಟಡಿ, ಜೆಂಡರ್ ಸ್ಟಡೀಸ್, ಡೆವಲಪ್ಮೆಂಟಲ್ ಸ್ಟಡೀಸ್ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅನುಭವ & ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಾಗಲಕೋಟೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಕ್ವಾಲಿಫಿಕೇಶನ್

ಅನುಭವ

ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ jobs@khpt.org ಗೆ ಡಿಸೆಂಬರ್ 31ರೊಳಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 06/12/2023

ಇ-ಮೇಲ್ ಕಳುಹಿಸಲು ಕೊನೆಯ ದಿನ: ಡಿಸೆಂಬರ್ 31, 2023

Previous Post Next Post