ಮೋದಿ ಅವರು ಮಹಿಳೆಯರ ಬ್ಯಾಂಕ್ ಖಾತೆಗೆ 6,000 ಹಣ ಹಾಕುತ್ತಾರೆ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳೆರಡು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಬಿಡುಗಡೆ ಮಾಡುತ್ತಿದೆ ಅದರಲ್ಲಿಯು ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಸ್ವಾವಲಂಬನೆ ಜೀವನ ನಡೆಸಲು ಅನುಕೂಲವಾಗುವಂತ ಕೆಲವು ಪ್ರಮುಖ ಸಾಲ ಸೌಲಭ್ಯ ಯೋಜನೆಗಳನ್ನು ಕೇಂದ್ರ ಸರ್ಕಾರವು ಕೂಡ ಜಾರಿಗೆ ತಂದಿದೆ. ಮಹಿಳೆಯರು ಗರ್ಭಿಣಿಯಾಗಿರುವ ಸಂದರ್ಭದಲ್ಲಿ ಹಾಗೂ ಮಕ್ಕಳಿಗೆ ಪೋಷಕ ಆಹಾರವನ್ನು ನೀಡಬೇಕೆಂದು ಕೇಂದ್ರ ಸರ್ಕಾರವು ಉಚಿತವಾಗಿ 6,000ಗಳನ್ನು ಮಹಿಳೆಯರಿಗೆ ನೀಡಲು ಹೊಸ ಯೋಜನೆಯನ್ನು ಪ್ರಾರಂಭಿಸಿದೆ.



ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ :


ಮಹಿಳೆಯರು ಉಚಿತವಾಗಿ 6,000ಗಳನ್ನು ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯ ಅಡಿಯಲ್ಲಿ ಪಡೆಯಬಹುದಾಗಿದೆ. ಗರ್ಭಿಣಿ ಸ್ತ್ರೀಯರಿಗಾಗಿ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಪ್ರಾರಂಭಿಸಿದ್ದು ಮಕ್ಕಳು ಅಪೌಷ್ಟಿಕತೆಯಿಂದ ಹುಟ್ಟುವ ಸಮಸ್ಯೆ ಕಂಡು ಬರುತ್ತಿದ್ದು ಇದನ್ನು ಹೋಗಲಾಡಿಸುವ ಉದ್ದೇಶದಿಂದ ಗರ್ಭಿಣಿ ಸ್ತ್ರೀ ಮಗು ಹೊಟ್ಟೆಯಲ್ಲಿ ಇರುವಾಗಲೇ ಆ ಮಗುವಿಗೆ ಸರಿಯಾದ ಉತ್ತಮ ಹಾಗೂ ಪೌಷ್ಟಿಕ ಆಹಾರವನ್ನು ನೀಡುವ ಉದ್ದೇಶದಿಂದ ಗರ್ಭಿಣಿಯರಿಗೆ 6000 ಆರ್ಥಿಕ ನೆರವನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಇರುವ ಅರ್ಹತೆಗಳು :

ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ 19 ವರ್ಷಕ್ಕಿಂತ ಮೇಲಿನ ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಈ ಯೋಜನೆಯ ಪ್ರಯೋಜನ ಮೊದಲ ಹಾಗೂ ಎರಡನೇ ಹೆರಿಗೆ ಮಾಡಿಕೊಳ್ಳುವ ಮಹಿಳೆಯರು ಪಡೆಯಬಹುದಾಗಿದೆ. ತಮ್ಮ ಹೆಸರನ್ನು ಗರ್ಭಿಣಿ ಸ್ತ್ರೀಯರು ನೋಂದಾಯಿಸಿಕೊಂಡ ನಂತರವೇ ಹಾಗೂ ಮಗುವನ್ನು ಹೆತ್ತ ನಂತರ ಕಂತುಗಳ ರೂಪದಲ್ಲಿ 6000ಗಳನ್ನು ನೀಡಲಾಗುತ್ತದೆ.

ಮಾತೃ ವಂದನ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ :


ಕೇಂದ್ರ ಸರ್ಕಾರದ ಮಾತೃ ವoಧನ ಯೋಜನೆಗೆ ಅರ್ಜಿಯನ್ನು ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಸಲ್ಲಿಸಬೇಕಾಗುತ್ತದೆ. https://wcd.nic.in/schemes/pradhan-mantri-matru-vandana-yojana ಈ ವೆಬ್ ಸೈಟ್ ಗೆ ಭೇಟಿ ನೀಡಿ ಗರ್ಭಿಣಿ ಸ್ತ್ರೀಯರು ಅರ್ಜಿಯನ್ನು ಸಲ್ಲಿಸಬಹುದು.

ಹೀಗೆ ಕೇಂದ್ರ ಸರ್ಕಾರವು ಮಹಿಳೆಯರ ಹಾಗೂ ಮಗುವಿನ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಮಗು ಹೊಟ್ಟೆಯಲ್ಲಿರುವಾಗಲೇ ಪೌಷ್ಟಿಕ ಆಹಾರವನ್ನು ನೀಡಬೇಕೆಂದು ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಪ್ರಯೋಜನವನ್ನು ಗರ್ಭಿಣಿ ಸ್ತ್ರೀಯರೆಲ್ಲ ಪಡೆದುಕೊಳ್ಳಲಿ ಹಾಗಾಗಿ ಮಾಹಿತಿಯನ್ನು ನಿಮಗೆ ತಿಳಿದಿರುವ ಗರ್ಭಿಣಿ ಸ್ತ್ರೀಯರಿಗೆ ಶೇರ್ ಮಾಡಿ ಧನ್ಯವಾದಗಳು.
Previous Post Next Post