Railway Recruitment 2023: ಬೃಹತ್ ನೇಮಕಾತಿ: 1785 ಹುದ್ದೆಗಳು: SSLC ಆದವರು ಅರ್ಜಿ ಸಲ್ಲಿಸಬಹುದು

 ಸೌತ್ ಈಸ್ಟರ್ನ್ ರೈಲ್ವೆಯಲ್ಲಿ ( Railway Recruitment 2023) 1785 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 15 ವರ್ಷ ಪೂರೈಸಿದ ಹಾಗೂ ಗರಿಷ್ಠ 24 ವರ್ಷ ಮೀರಿರದ ಆಸಕ್ತ- ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.



ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿ ಮೊದಲು ಸಿದ್ಧಪಡಿಸಲಾಗುತ್ತದೆ.

( Railway Recruitment 2023) ಬಳಿಕ ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ, ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 28, 2023 ಕೊನೆಯ ದಿನವಾಗಿದೆ.

ಇಲಾಖೆ                               ಸೌತ್ ಈಸ್ಟರ್ನ್ ರೈಲ್ವೆ

ಒಟ್ಟು ಹುದ್ದೆಗಳು                       1785

ಅಧಿಸೂಚನೆ                       ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಲಿಂಕ್       ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆಗೆ ಕೊನೆಯ       ಡಿಸೆಂಬರ್ 28, 2023

ದಿನಾಂಕ


Previous Post Next Post